Homeಕರ್ನಾಟಕಮುಖ್ಯಮಂತ್ರಿಗಳ 'ಜನಸ್ಪಂದನ' ಕಾರ್ಯಕ್ರಮ: ಒಟ್ಟು 12,372 ಅರ್ಜಿಗಳ ಸ್ವೀಕಾರ

ಮುಖ್ಯಮಂತ್ರಿಗಳ ‘ಜನಸ್ಪಂದನ’ ಕಾರ್ಯಕ್ರಮ: ಒಟ್ಟು 12,372 ಅರ್ಜಿಗಳ ಸ್ವೀಕಾರ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಫೆ.8) ವಿಧಾನಸೌಧದಲ್ಲಿ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12,372 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸ್ಥಳದಲ್ಲಿಯೇ 246 ಅರ್ಜಿಗಳು ಇತ್ಯರ್ಥವಾಗಿದ್ದು, 12,126 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ.

ಕಂದಾಯ ಇಲಾಖೆಗೆ ಅತಿ ಹೆಚ್ಚು ಅರ್ಜಿಗಳು :

ಕಂದಾಯ ಇಲಾಖೆಗೆ ಅತಿ ಹೆಚ್ಚು ಅಂದರೆ 3,150 ಅರ್ಜಿಗಳು ಸ್ವೀಕಾರವಾಗಿದ್ದರೆ, ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಒಂದು ಅರ್ಜಿ ಸ್ವೀಕಾರವಾಗಿದೆ. ವಸತಿ ಇಲಾಖೆಗೆ 1,500 ಅರ್ಜಿಗಳು ಸ್ವೀಕಾರವಾಗಿ ಎರಡನೇ ಸ್ಥಾನದಲ್ಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 903 ಅರ್ಜಿಗಳು ಸಲ್ಲಿಕೆಯಾಗಿವೆ.

ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆ, ಮುಖ್ಯ ಕಾರ್ಯದರ್ಶಿಗಳ ಕಾರ್ಯಾಲಯ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ( ಇ- ಆಡಳಿತ) ಮುಖ್ಯಮಂತ್ರಿಗಳ ಕಾರ್ಯಾಲಯ, ಸಂಸದೀಯ ವ್ಯವಹಾರಗಳ ಇಲಾಖೆ- ಈ ಐದು ಇಲಾಖೆಗಳಲ್ಲಿ ಯಾವುದೇ ಅರ್ಜಿ ಸ್ವೀಕೃತವಾಗಿಲ್ಲ.

ನವೆಂಬರ್‌ 27,2023ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98ರಷ್ಟು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ. ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ನಮ್ಮ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ತಾಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ ಎಂದು ಸಿಎಂ ಹೇಳಿದ್ದಾರೆ.

ಕಾನೂನು ಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ. ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು. ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ : ಫೆ.10ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಸಮಾವೇಶ: ಬಡಗಲಪುರ ನಾಗೇಂದ್ರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...