Homeಮುಖಪುಟರೈತ ಹೋರಾಟ ಬೆಂಬಲಿಸಿ ಜ. 26ರಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್‌ ಪರೇಡ್‌; ರಾಜಧಾನಿಯತ್ತ 5000 ವಾಹನಗಳು!

ರೈತ ಹೋರಾಟ ಬೆಂಬಲಿಸಿ ಜ. 26ರಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್‌ ಪರೇಡ್‌; ರಾಜಧಾನಿಯತ್ತ 5000 ವಾಹನಗಳು!

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಕ್ಕೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ಕಳೆದ 59 ದಿನಗಳಿಂದ ನಡೆಯುತ್ತಿರುವ ರೈತ ಹೋರಾಟ ಹಾಗೂ ಜ. 26ರ ಟ್ರ್ಯಾಕ್ಟರ್‌ ಪರೇಡ್‌ ಬೆಂಬಲಿಸಿ ಬೆಂಗಳೂರಿನಲ್ಲಿ ಬೃಹತ್‌ ಟ್ರ್ಯಾಕರ್‌ ಪರೇಡ್‌ ಮತ್ತು ರೈತ ಸಮಾವೇಶ ನಡೆಯಲಿದೆ.

ಸಂಯುಕ್ತ ಹೋರಾಟ – ಕರ್ನಾಟಕ ವೇದಿಕೆ ಆಯೋಜಿಸುತ್ತಿರುವ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ನಾಲ್ಕೂ ದಿಕ್ಕುಗಳು ರೈತರು ತಮ್ಮ ಟ್ರ್ಯಾಕ್ಟರ್‌ಗಳೊಂದಿಗೆ ಆಗಮಿಸಲಿದ್ದಾರೆ ಎಂದು ಹೋರಾಟದ ಮುಖಂಡ ಹಾಗೂ ರೈತ ಸಂಘದ ಹಿರಿಯ ನಾಯಕರಾದ ಬಡಗಲಪುರ ನಾಗೇಂದ್ರರವರು ತಿಳಿಸಿದ್ದಾರೆ.

ಇದು ರೈತ, ಕಾರ್ಮಿಕರ ಹೋರಾಟ. ರಾಜ್ಯದ ಮುಂಬೈ ಕರ್ನಾಟಕ, ಹೈದರಾಬಾದ್‌ ಕರ್ನಾಟಕ, ಮಡಿಕೇರಿ-ಮೈಸೂರು ಭಾಗಗಳಿಂದ ರೈತರು, ಕಾರ್ಮಿಕರು ಹಾಗೂ ಈ ಹೋರಾಟದ ಬೆಂಬಲಿಗರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸುಮಾರು 25,000 ಮಂದಿ ಹೊರ ಜಿಲ್ಲೆಗಳಿಂದ ಆಗಮಿಸುತ್ತಿದ್ದಾರೆ. ಹತ್ತಿರದ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಟ್ರ್ಯಾಕ್ಟರ್‌ಗಳು ಆಗಮಿಸುತ್ತಿವೆ. ದ್ವಿಚಕ್ರವಾಹನಗಳು, ಅಲ್ಲದೆ ಇತರೆ ವಾಹನಗಳು ಆಗಮಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಮಡಿಕೇರಿಯ ಕುಟ್ಟಾದಿಂದ ಜ. 25ರಂದು ಟ್ರ್ಯಾಕ್ಟರ್‌ ರ್ಯಾಲಿ ಹೊರಡುತ್ತಿದೆ. ಪೊನ್ನಂಪೇಟೆ, ಬಿ ಮಂಗಲ, ಗೋಣಿಕೊಪ್ಪ, ತಿಥಿಮಥಿ, ಹುಣಸೂರು ಮೂಲಕ ಮೈಸೂರಿಗೆ ಆಗಮಿಸುತ್ತಿದೆ. ಅಲ್ಲಿಂದ ಪಾಂಡವಪುರ, ಮಂಡ್ಯ ಮಾರ್ಗವಾಗಿ ಬರುವ ಈ ರ್ಯಾಲಿ, ಬಿಡದಿ ಸೇರುವುದು.
ಬೆಳಗಾವಿ, ಹುಬ್ಬಳಿಕಡೆಯಿಂದ ಬರುವ ವಾಹನಗಳು ಚಿತ್ರದುರ್ಗದಲ್ಲಿ ತಂಗಲಿವೆ. ರಾಯಚೂರು, ಬಳ್ಳಾರಿ ಕಡೆಯಿಂದ ಬರುವ ವಾಹನಗಳು ತುಮಕೂರಿನ ಮಠದಲ್ಲಿ ತಂಗಲಿವೆ. ಚಿಕ್ಕಬಳ್ಳಾಪುರ, ಕೋಲಾರ ಕಡೆಯಿಂದಲೂ ವಾಹನಗಳು ಆಗಮಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಗಣರಾಜ್ಯೋತ್ಸವದಂದು ನಗರದ ಎಲ್ಲ ದಿಕ್ಕುಗಳಿಂದ ಬರುವ ವಾಹನಗಳು 11 ಗಂಟೆ ಹೊತ್ತಿಗೆ ಬೆಂಗಳೂರು ನಗರದ ಹೊರ ವಲಯದಲ್ಲಿ ನೆರೆಯಲಿದ್ದು, 12ಗಂಟೆಗೆ ಸರಿಯಾಗಿ ನಗರವನ್ನು ಪ್ರವೇಶಿಸುತ್ತವೆ. ಜ. 26ರಂದು ಬೆಳಗ್ಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿಗಳು ಧ್ವಜಾರೋಹಣ ಮಾಡಿ, ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹಿಸಲಾಗುವುದು ಎಂದು ಬಡಗಲಪುರ ನಾಗೇಂದ್ರರವರು ತಿಳಿಸಿದ್ದಾರೆ.

ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಕ, ಮಹಿಳಾ ಸಂಘಟನೆಗಳ ಸಂಯುಕ್ತ ಹೋರಾಟವಾಗಿದ್ದು 25000ಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

  • ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ

ಇದನ್ನೂ ಓದಿ: ಕೃಷಿ ಕಾಯ್ದೆ ಹಿಂತೆಗೆದುಕೊಳ್ಳಲು ಹೇಳಿ: ಮೋದಿ ತಾಯಿಗೆ ಪತ್ರ ಬರೆದ ಪಂಜಾಬ್ ರೈತ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...