Homeಮುಖಪುಟಟ್ರ್ಯಾಕ್ಟರ್‌ ರ್‍ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ ಪ್ರಕರಣ!

ಟ್ರ್ಯಾಕ್ಟರ್‌ ರ್‍ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ ಪ್ರಕರಣ!

- Advertisement -
- Advertisement -

ಜನವರಿ 26 ರಂದು ಗಣರಾಜ್ಯೋತ್ಸವ ದಿನ ನಡೆದ ಟ್ರ್ಯಾಕ್ಟರ್‌ ರ್‍ಯಾಲಿ ವೇಳೆ ಪ್ರಚೋದನಾತ್ಮಕ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿದಂತೆ ಅನೇಕರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.

ಟ್ರ್ಯಾಕ್ಟರ್‌ ರ್‍ಯಾಲಿಯ ಸಂದರ್ಭದಲ್ಲಿ ಮೃತಪಟ್ಟಿದ್ದ ಯುವಕನೊಬ್ಬನ ಸಾವಿಗೆ ಸಂಬಂಧಿಸಿದಂತೆ ಟ್ವೀಟ್‌ ಮಾಡಿದ್ದ ಸಂಸದ ಶಶಿ ತರೂರ್‌ ಸೇರಿದಂತೆ ಹಲವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಕಾಂಗ್ರೆಸ್‌ ನಾಯಕ ಶಶಿ ತರೂರ್‌, ಹಿರಿಯ ಪತ್ರಕರ್ತ ರಾಜ್‌ದೀಪ್‌ ಸರ್ದೇಸಾಯಿ, ನ್ಯಾಷನಲ್‌ ಹೆರಾಲ್ಡ್‌ನ ಮ್ರಿನಾಲ್‌ ಪಾಂಡೆ, ಕೌಮಿ ಆವಾಜ್‌ನ ಜಾಫರ್ ಆಘಾ, ದಿ ಕ್ಯಾರವನ್‌ ಸುದ್ದಿ ಸಮೂಹದ ಅನಂತ್‌ ನಾಥ್‌ ಮತ್ತು ವಿನೋದ್‌ ಜೋಶ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿವೆ.

ಇದನ್ನೂ ಓದಿ: ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

ಭಾರತೀಯ ದಂಡಸಂಹಿತೆಯ ಸೆಕ್ಷನ್ 124 ಎ (ದೇಶದ್ರೋಹ), 153-ಎ (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), ಸೆಕ್ಷನ್ 295ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಕೃತ್ಯ), ಸೆಕ್ಷನ್ 504 (ಉದ್ದೇಶಪೂರ್ವಕ ಅವಮಾನ), ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಮತ್ತು ಸೆಕ್ಷನ್ 120ಬಿ (ಮರಣದಂಡನೆ ಶಿಕ್ಷೆ ವಿಧಿಸುವ ಅಪರಾಧಕ್ಕೆ ಅಪರಾಧ ಸಂಚು) ಸೇರಿದಂತೆ 11 ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಈ ಕುರಿತು ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಪಟೇಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ರ್‍ಯಾಲಿ ವೇಳೆ ಟ್ರ್ಯಾಕ್ಟರ್‌ ಮಗುಚಿ ಬಿದ್ದು ಯುವಕನೋರ್ವ ಮೃತಪಟ್ಟಿದ್ದ. ಈ ಸುದ್ದಿಯನ್ನು ಪೊಲೀಸರ ಗುಂಡೇಟಿಗೆ ಯುವಕ ಮೃತಪಟ್ಟಿದ್ದಾನೆಂದು ಕೆಲ ಮಾಧ್ಯಮಗಳು ವರದಿ ಮಾಡಿದವು. ಆ ವರದಿಗಳನ್ನು ಶಶಿ ತರೂರ್‌ ಸೇರಿದಂತೆ ಹಲವು ಪತ್ರಕರ್ತರು ಟ್ವೀಟ್‌ ಮಾಡಿದ್ದರು. ಆದರೆ, ಯುವಕನು ಪೊಲೀಸರ ಗುಂಡೇಟಿಗೆ ಬಲಿಯಾಗಿರಲಿಲ್ಲ ಎಂಬುದು ಪೋಸ್ಟ್‌ಮಾರ್ಟಂ ವರದಿ ಬಂದ ನಂತರ ತಿಳಿದಿದೆ ಎಂದು ಹೇಳಲಾಗುತ್ತಿದೆ.

ಯುವಕನ ಸಾವಿನ ಬಗೆಗಿನ ವರದಿಯನ್ನು ತಿರುಚಲಾಗಿದೆ. ಇದು ಪೂರ್ವಾಗ್ರಹ ಪೀಡಿತವಾಗಿದೆ. ಇವರು “ರಾಷ್ಟ್ರೀಯ ಸುರಕ್ಷತೆ ಮತ್ತು ಜನರ ಜೀವನವನ್ನು ಅಪಾಯಕ್ಕೆ ದೂಡಿದ್ದಾರೆ” ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ.

ಜನವರಿ 26 ರಂದು ನಡೆದ ರ್‍ಯಾಲಿಯಲ್ಲಿ ಕೆಲವು ರೈತರ ಗುಂಪೊಂದು ಕೆಂಪುಕೋಟೆಗೆ ನುಗ್ಗಿ ಸಿಖ್ ಧರ್ಮದ ಧ್ವಜವನ್ನು ಹಾರಿಸಿತ್ತು. ಇದು ದೇಶದಾದ್ಯಂತ ಸಂಚಲನ ಉಂಟುಮಾಡಿತ್ತು. ಇದು ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ನಡೆಸಿದ ಪಿತೂರಿ ಎಂದು ರೈತ ಸಂಘಟನೆಗಳು ಆರೋಪಿಸಿದ್ದವು. ಜೊತೆಗೆ ಪರ-ವಿರೋಧದ ಚರ್ಚೆಗೂ ಕಾರಣವಾಗಿತ್ತು. ಹಾಗೇಯೇ ಪ್ರತಿಭಟನೆಯ ವಿರುದ್ಧ ಇದ್ದ ಜನರಿಗಂತು ಇದು ಮೃಷ್ಟಾನ್ನ ಭೋಜನವಾಗಿತ್ತು ಎಂಬುದರಲ್ಲಿ ಸಂದೇಹವಿಲ್ಲ.

ಅದೇನೇ ಇದ್ದರೂ ರಾಷ್ಟ್ರ ರಾಜಧಾನಿಯ ಗಡಿಯಲ್ಲಿರುಯವ ರೈತರು ಮಾತ್ರ ಎದೆಗುಂದದೆ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.


ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿ: ರಾತ್ರಿಯೇ ದೆಹಲಿಗೆ ಮೆರವಣಿಗೆ…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...