Homeಕರ್ನಾಟಕಟ್ರ್ಯಾಕ್ಟರ್‌ ರ್ಯಾಲಿ ನಡೆದೇ ನಡೆಯುತ್ತದೆ; ಮುಂದಿನದು ಪೊಲೀಸರಿಗೆ ಬಿಟ್ಟಿದ್ದು: ನೂರ್‌ ಶ್ರೀಧರ್

ಟ್ರ್ಯಾಕ್ಟರ್‌ ರ್ಯಾಲಿ ನಡೆದೇ ನಡೆಯುತ್ತದೆ; ಮುಂದಿನದು ಪೊಲೀಸರಿಗೆ ಬಿಟ್ಟಿದ್ದು: ನೂರ್‌ ಶ್ರೀಧರ್

- Advertisement -
- Advertisement -

ಜನವರಿ 26ರ ಗಣರಾಜ್ಯೋತ್ಸವದಂದು ದೇಶಾದ್ಯಂತ ಟ್ರ್ಯಾಕ್ಟರ್‌ ರ್ಯಾಲಿ ನಡೆಸಲು ದೆಹಲಿ ಗಡಿಯಲ್ಲಿರುವ ಹೋರಾಟ ನಿರತ ರೈತರು ಕರೆಕೊಟ್ಟಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರ್ಯಾಲಿಗೆ ಭರ್ಜರಿ ಸಿದ್ದತೆ ನಡೆದಿದೆ. ಅದರೆ, ರೈತರ ಟ್ರಾಕ್ಟರ್‌ಗಳನ್ನು ಮಾರ್ಗ ಮಧ್ಯದಲ್ಲೇ ಪೊಲೀಸರು ತಡೆಯುತ್ತಿದ್ದಾರೆ. ಏನೇ ಆಗಲೀ ನಾಳೆ ಬೆಂಗಳೂರಿಗೆ ಟ್ರಾಕ್ಟರ್‌ಗಳು ಬಂದೇ ಬರುತ್ತವೆ. ರ್ಯಾಲಿ ನಡೆದೇ ನಡೆಯುತ್ತದೆ ಎಂದು ಹೋರಾಟಗಾರ ನೂರ್‌ ಶ್ರೀಧರ್‌ ಹೇಳಿದ್ದಾರೆ.

ಪ್ರತಿಭಟನೆಯ ವಿಚಾರವಾಗಿ ಉನ್ನತ ಪೊಲೀಸ್‌ ಅಧಿಕಾರಿಗಳ ಜೊತೆ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಪ್ರತಿಭಟನೆಗೆ ಪೊಲೀಸರು ಒಪ್ಪಿದ್ದಾರೆ. ಸರ್ಕಾರಿ ಪರೇಡ್‌ ನಡೆದ ನಂತರ ರೈತರ ಪರೇಡ್‌ ನಡೆಯುತ್ತಿರುವುದರಿಂದಾಗಿ ತಮಗೆ ಯಾವುದೇ ಅಡಚಣೆಯಾಗುವುದಿಲ್ಲ. ರೈತರ ಪ್ರತಿಭಟನೆಗೆ ಹಳ್ಳಿಗಳಲ್ಲೂ-ಮಾರ್ಗ ಮಧ್ಯದಲ್ಲೂ- ಬೆಂಗಳೂರಿನಲ್ಲೂ ತೊಂದರೆ ಕೊಡುವುದಿಲ್ಲ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿರುವುದಾಗಿ ಹೇಳಿದ್ದಾರೆ.

ಆದರೆ, ಸರ್ಕಾರವೂ ಕೂಡ ಟ್ರಾಕ್ಟರ್‌ಗಳಿಗೆ ಅನುಮತಿ ನೀಡಬಾರದು ಎಂದು ಹೇಳಿದೆ. ಬೆಂಗಳೂರಿಗೆ ಟ್ರಾಕ್ಟರ್‌ಗಳನ್ನು ತರಲು ಅನುಮತಿ ಇಲ್ಲ. ಬೆಂಗಳೂರಿನಲ್ಲಿ ಟ್ರಾಕ್ಟರ್‌ ಸಂಚಾರವನ್ನು ಬ್ಯಾನ್‌ ಮಾಡಲಾಗಿದೆ. ಹಾಗಾಗಿ ಟ್ರಾಕ್ಟರ್‌ಗಳನ್ನು ತರಬಾರದು ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರ ಈ ವಾದದಲ್ಲಿ ಲಾಜಿಕಲ್‌ ಪಾಯಿಂಟ್‌ ಇಲ್ಲ. ಯಾಕೆಂದರೆ, ಟ್ರಾಕ್ಟರ್‌ಗಳನ್ನು ಸಾಮಾನ್ಯ ಸಂಚಾರ, ಸರಕು ಸಾಗಾಣಿಕೆಗೆ ನಗರದಲ್ಲಿ ಬಳಸಬಾರದು ಎಂಬುದನ್ನು ನಾವೂ ಒಪ್ಪುತ್ತೇವೆ. ಅದರೆ, ಟ್ರಾಕ್ಟರ್‌ಗಳು ರೈತ ಸಂಕೇತಗಳು. ವಿಶೇಷ ಉದ್ದೇಶಕ್ಕಾಗಿ ಟ್ರಾಕ್ಟರ್‌ಗಳನ್ನು ತರಲಾಗುತ್ತಿದೆ. ಹೋರಾಟಕ್ಕೆ ಟ್ರಾಕ್ಟರ್‌ ತರಬಾರದು ಎಂಬುದನ್ನು ಒಪ್ಪಲು ಸಾಧ್ಯವೇ ಇಲ್ಲ. ಆದರೂ, ನಾವು ಟ್ರಾಲಿಗಳನ್ನು ತರುತ್ತಿಲ್ಲ. ಎಂಜಿನ್‌ಗಳನ್ನು ಮಾತ್ರ ತರುತ್ತಿದ್ದು, ಇದನ್ನು ಪೊಲೀಸರು ತಡೆಯುವಂತಿಲ್ಲ ಎಂದು ನೂರ್‌ ಶ್ರೀಧರ್‌ ಹೇಳಿದ್ದಾರೆ.

ಅಲ್ಲದೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೇ ರೈತರ ಟ್ರಾಕ್ಟರ್‌ ಪರೇಡ್‌ಗೆ ದೆಲ್ಲಿ ಪೊಲೀಸರು ಅವಕಾಶ ಕೊಟ್ಟಿದ್ದಾರೆ. ಅದಕ್ಕಾಗಿ ಪೊಲೀಸರೇ ರೂಟ್‌ ಮ್ಯಾಪ್ ಕೂಡ‌ ಹಾಕಿಕೊಟ್ಟಿದ್ದಾರೆ. ಕೇಂದ್ರ ಸರ್ಕಾರವೇ ಒಪ್ಪಿದೆ. ಹೀಗಿರುವಾಗ ರಾಜ್ಯದಲ್ಲಿ ಅನುಮತಿ ಇಲ್ಲ ಎನ್ನುವುದನ್ನು ನಾವು ಒಪ್ಪುವುದಿಲ್ಲ. ನಾಳೆ ಟ್ರಾಕ್ಟರ್‌ಗಳು ಬಂದೇ ಬರುತ್ತವೆ. ಪರೇಡ್‌ ನಡೆದೇ ನಡೆಯುತ್ತೆ. ಮುಂದಿನದು ಪೊಲೀಸರಿಗೆ ಬಿಟ್ಟಿದ್ದು ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...