Homeಮುಖಪುಟಟ್ರ್ಯಾಕ್ಟರ್ ರ್‍ಯಾಲಿ ನಮ್ಮ ಸಾಂವಿಧಾನಿಕ ಹಕ್ಕು: ಸುಪ್ರೀಂಗೆ ಪರೋಕ್ಷ ಸಂದೇಶ ರವಾನಿಸಿದ ರೈತರು

ಟ್ರ್ಯಾಕ್ಟರ್ ರ್‍ಯಾಲಿ ನಮ್ಮ ಸಾಂವಿಧಾನಿಕ ಹಕ್ಕು: ಸುಪ್ರೀಂಗೆ ಪರೋಕ್ಷ ಸಂದೇಶ ರವಾನಿಸಿದ ರೈತರು

ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಅಡ್ಡಿಯಾಗದಂತೆ ನಾವು ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸುತ್ತೇವೆ. ನಾವು ನಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸುತ್ತೇವೆ. ಜೊತೆಗೆ ನಾವು ಖಂಡಿತವಾಗಿಯೂ ದೆಹಲಿಗೆ ಪ್ರವೇಶಿಸಲಿದ್ದೇವೆ- ರೈತ ಮುಖಂಡರು

- Advertisement -
- Advertisement -

“ರೈತರ ಹೋರಾಟದ ಭಾಗವಾಗಿ ಗಣರಾಜ್ಯೋತ್ಸವ ದಿನದಂದು ನಡೆಯಲಿರುವ ಟ್ರ್ಯಾಕ್ಟರ್ ರ್‍ಯಾಲಿಯನ್ನು ನಡೆಸುವುದು ನಮ್ಮ ಸಾಂವಿಧಾನಿಕ ಹಕ್ಕು” ಎಂದು ರೈತ ನಾಯಕರು ಹೇಳಿದ್ದು, ಜನವರಿ 26 ರಂದು ನಡೆಯುವ ಈ ಬೃಹತ್ ರ್‍ಯಾಲಿಯಲ್ಲಿ ಸಾವಿರಾರು ಜನರು ಭಾಗವಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾ ನಿರತ ರೈತರು ಟ್ರ್ಯಾಕ್ಟರ್ ರ್‍ಯಾಲಿ ನಡೆಸಬಹುದೇ ಬೇಡವೇ? ಎಂಬುದನ್ನು ದೆಹಲಿ ಪೊಲೀಸರೇ ನಿರ್ಧರಿಸಲಿ ಎಂದು ಸೋಮವಾರ ಸುಪ್ರೀಂ ಕೋರ್ಟ್ ಹೇಳಿದೆ. ಈ ಹಿನ್ನೆಲೆಯಲ್ಲಿ ರೈತರ ಹೇಳಿಕೆ ಸುಪ್ರೀಂ ಕೋರ್ಟ್‌ಗೆ ನೀಡಿದ ಉತ್ತರದಂತಿದೆ.

ಭಾರತೀಯ ಕಿಸಾನ್ ಯೂನಿಯನ್‌ನ (ಲಖೋವಾಲ್) ಪಂಜಾಬ್ ಪ್ರಧಾನ ಕಾರ್ಯದರ್ಶಿ ಪರಮಜಿತ್ ಸಿಂಗ್ ಮಾತನಾಡಿ, “ನಾವು ರ್‍ಯಾಲಿಯನ್ನು ರಾಜ್‌ಪತ್ ಅಥವಾ ಇನ್ನಿತರ ಭದ್ರತಾ ಸೂಕ್ಷ್ಮ ಪ್ರದೇಶಗಳಲ್ಲಿ ನಡೆಸುವುದಿಲ್ಲ. ದೆಹಲಿಯ ಹೊರ ವರ್ತುಲ (Outer RingRoad) ರಸ್ತೆಯಲ್ಲಿ ಮಾತ್ರ ಈ ರ್‍ಯಾಲಿಯನ್ನು ನಡೆಸುತ್ತೇವೆ. ಜೊತೆಗೆ ಗಣರಾಜ್ಯೋತ್ಸವದ ಮೆರವಣಿಗೆಗೆ ಯಾವುದೇ ಅಡ್ಡಿಪಡಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಜನವರಿ 26 ಕ್ಕೆ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ: ಬೆದರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಕೇಂದ್ರ ಸರ್ಕಾರ!

“ನಾವು ದೆಹಲಿ ಗಡಿಯಲ್ಲಿ ಸಿಕ್ಕಿಕೊಂಡಿದ್ದೇವೆ. ಇಲ್ಲಿ ಕುಳಿತುಕೊಳ್ಳಲು ನಾವು ನಿರ್ಧರಿಸಿಲ್ಲ. ಬದಲಿಗೆ ನಾವು ದೆಹಲಿಗೆ ಪ್ರವೇಶಿಸುವುದನ್ನು ತಡೆಯಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಅಡ್ಡಿಯಾಗದಂತೆ ನಾವು ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸುತ್ತೇವೆ. ನಾವು ನಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸುತ್ತೇವೆ. ಜೊತೆಗೆ ನಾವು ಖಂಡಿತವಾಗಿಯೂ ದೆಹಲಿಗೆ ಪ್ರವೇಶಿಸಲಿದ್ದೇವೆ” ಎಂದು ಪರಮಜಿತ್ ಸಿಂಗ್ ತಿಳಿಸಿದ್ದಾರೆ.

ಸ್ವರಾಜ್ ಇಂಡಿಯಾದ ಮುಖಂಡ ಯೋಗೇಂದ್ರ ಯಾದವ್ ಮಾತನಾಡಿ, “ಗಣರಾಜ್ಯೋತ್ಸವದಂದ ನಡೆಯಲಿರುವ ಶಾಂತಿಯುತ ರ್‍ಯಾಲಿಯಲ್ಲಿ ಪ್ರತಿಯೊಂದು ಟ್ರ್ಯಾಕ್ಟರ್‌ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಾಡಲಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ: ದಿಟ್ಟ ರೈತ ಹೋರಾಟದ ಗಮನಸೆಳೆದ 10 ಫೋಟೊಗಳು

ಇನ್ನು ಪ್ರತಿಭಟನೆ ಮಾಡುತ್ತಿರುವ ಎಲ್ಲಾ ರೈತ ಸಂಘಟನೆಗಳೂ ಸಹ ಇದೇ ಹೇಳಿಕೆಯನ್ನು ನೀಡುತ್ತಿದ್ದು, ರ್‍ಯಾಲಿ ಮಾಡುವುದು ನಮ್ಮ ಸಾಂವಿಧಾನಿಕ ಹಕ್ಕು ಎಂದು ಹೇಳುತ್ತಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಕಳೆದ ಎರಡು ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಬಿಕ್ಕಟ್ಟಿನ ಕುರಿತು ಕೇಂದ್ರ ಸರ್ಕಾರ ಮತ್ತು ರೈತರ ನಡುವೆ 9 ಸುತ್ತಿನ ಮಾತುಕತೆಗಳು ನಡೆದಿದ್ದು, ಎಲ್ಲವೂ ವಿಫಲವಾಗಿವೆ. ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೆಕು ಎಂದು ರೈತರು ಒತ್ತಾಯಿಸುತ್ತಿದ್ದರೆ, ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುತ್ತಿಲ್ಲ.

ಹಾಗಾಗಿ ರೈತರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುತ್ತಲೇ ಇದ್ದಾರೆ. ಇದರ ಭಾಗವಾಗಿಯೇ ಈ ಟ್ರ್ಯಾಕ್ಟರ್ ರ್‍ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...