Homeಚಳವಳಿಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ್‍ಯಾಲಿಯ ಟ್ರೈಲರ್ ಜನವರಿ 7 ರಂದು ತೋರಿಸುತ್ತೇವೆ: ರೈತ ಒಕ್ಕೂಟ

ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ್‍ಯಾಲಿಯ ಟ್ರೈಲರ್ ಜನವರಿ 7 ರಂದು ತೋರಿಸುತ್ತೇವೆ: ರೈತ ಒಕ್ಕೂಟ

"ಜನವರಿ 7 ರಂದು ನಾವು ಪೂರ್ವ ಮತ್ತು ಪಶ್ಚಿಮ ದೆಹಲಿಯ ನಾಲ್ಕು ಗಡಿಗಳಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ನಡೆಸಲು ನಿರ್ಧರಿಸಿದ್ದೇವೆ. ಜನವರಿ 26 ರಂದು ನಡೆಯಲಿರುವ ಟ್ರ್ಯಾಕ್ಟರ್ ರ್‍ಯಾಲಿಯ ಟ್ರೈಲರ್ ಇದು"

- Advertisement -

ಜನವರಿ 26 ರಂದು ನಡೆಯಲಿರುವ ರೈತರ ಟ್ರ್ಯಾಕ್ಟರ್ ರ್‍ಯಾಲಿಯ ಪ್ರಯುಕ್ತ ಜನವರಿ 7 ರಂದು ಅದರ ಟ್ರೈಲರ್‌ ಅನ್ನು ಹಮ್ಮಿಕೊಂಡಿರುವುದಾಗಿ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರು ಹೇಳಿದ್ದಾರೆ.

ಕೃಷಿ ಕಾನೂನುಗಳನ್ನು ಹಿಂಪಡೆಯದಿದ್ದರೆ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲಾಗುವುದು ಎಂದು ರೈತ ಮುಖಂಡ ದರ್ಶನ್ ಪಾಲ್ ಹೇಳಿದ್ದರು.

“ಜನವರಿ 7 ರಂದು ನಾವು ಪೂರ್ವ ಮತ್ತು ಪಶ್ಚಿಮ ದೆಹಲಿಯ ನಾಲ್ಕು ಗಡಿಗಳಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ನಡೆಸಲು ನಿರ್ಧರಿಸಿದ್ದೇವೆ. ಜನವರಿ 26 ರಂದು ನಡೆಯಲಿರುವ ಟ್ರ್ಯಾಕ್ಟರ್ ರ್‍ಯಾಲಿಯ ಟ್ರೈಲರ್ ಇದು” ಎಂದು  ಸ್ವರಾಜ್ ಇಂಡಿಯಾ ಪಕ್ಷದ ಮುಖ್ಯಸ್ಥ ಯೋಗೇಂದ್ರ ಯಾದವ್ ಹೇಳಿದ್ದಾಗಿ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ಇದನ್ನೂ ಓದಿ: ಹೋರಾಟ ತೀವ್ರಗೊಳಿಸಲು ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ರ್‍ಯಾಲಿ: ರೈತರ ಘೋಷಣೆ

ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಲಕ್ಷಾಂತರ ರೈತರು ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದು, ಈಗ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುವ ಸಲುವಾಗಿ ಈ ರ್‍ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.

ಇದುವರೆಗೂ ಕೇಂದ್ರ ಮತ್ತು ರೈತರ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿವೆ. ಆದರೆ ಅವುಗಳೆಲ್ಲಾ ವಿಫಲವಾಗಿವೆ. ಜನವರಿ 4 ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆದಿತ್ತು. ಆದರೆ ಇಲ್ಲಿಯೂ ರೈತರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಒಪ್ಪಿರಲಿಲ್ಲ. ಹಾಗಾಗಿ ಜನವರಿ 8 ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ. ಇಲ್ಲಿಯೂ ಒಪ್ಪದಿದ್ದರೆ ದೇಶದಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ತಾಜ್‌ ಮಹಲ್‌ ಆವರಣದಲ್ಲಿ ಕೇಸರಿ ಬಾವುಟ ಹಾರಿಸಿದ ಹಿಂದೂ ಜಾಗರಣ್ ಮಂಚ್ ಕಾರ್ಯಕರ್ತರು: ಬಂಧನ

+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಂಜಾಬ್‌: ಅಧಿಕಾರದ ಕಿತ್ತಾಟಕ್ಕೆ ಅಂತ್ಯ; ಸಿಎಂ ಅಭ್ಯರ್ಥಿ ಘೋಷಿಸಲು ನಿರ್ಧರಿಸಿದ ಕಾಂಗ್ರೆಸ್‌ | Naanu Gauri

ಪಂಜಾಬ್‌: ಅಧಿಕಾರದ ಕಿತ್ತಾಟಕ್ಕೆ ಅಂತ್ಯ; ಸಿಎಂ ಅಭ್ಯರ್ಥಿ ಘೋಷಿಸಲು ನಿರ್ಧರಿಸಿದ ಕಾಂಗ್ರೆಸ್‌

0
ಅಧಿಕಾರದ ಕಚ್ಚಾಟಕ್ಕೆ ಅಂತ್ಯ ಹಾಡಲು ಪಂಜಾಬ್‌ನಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಮೊದಲೇ ಘೋಷಿಸಲು ಕಾಂಗ್ರೆಸ್ ನಿರ್ಧರಿಸಿದೆ. ಜಲಂಧರ್‌ನ ಆನ್‌ಲೈನ್‌ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಶೀಘ್ರದಲ್ಲೇ ಕಾರ್ಯಕರ್ತರೊಂದಿಗೆ ಚರ್ಚಿಸಿ...
Wordpress Social Share Plugin powered by Ultimatelysocial