Homeಮುಖಪುಟಕೇರಳ ಚಿನ್ನ ಕಳ್ಳ ಸಾಗಾಣಿಕೆ; ಪ್ರಕರಣವನ್ನು ’ಎನ್‌ಐಎ’ಗೆ ವಹಿಸಿದ ಕೇಂದ್ರ ಸರ್ಕಾರ

ಕೇರಳ ಚಿನ್ನ ಕಳ್ಳ ಸಾಗಾಣಿಕೆ; ಪ್ರಕರಣವನ್ನು ’ಎನ್‌ಐಎ’ಗೆ ವಹಿಸಿದ ಕೇಂದ್ರ ಸರ್ಕಾರ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿಗೆ ಬುಧವಾರ ಪತ್ರ ಬರೆದು ಈ ಪ್ರಕರಣದ ಬಗ್ಗೆ ಕೇಂದ್ರ ಸಂಸ್ಥೆಗಳು ತನಿಖೆ ನಡೆಸುವಂತೆ ಕೋರಿದ್ದರು.

- Advertisement -
- Advertisement -

ಕೇರಳ ಚಿನ್ನದ ಕಳ್ಳಸಾಗಣೆ ಪ್ರಕರಣದ ವಿಚಾರಣೆ ನಡೆಸಲು ಕೇಂದ್ರ ಗೃಹ ಸಚಿವಾಲಯ ಗುರುವಾರ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ಅನುಮತಿ ನೀಡಿದೆ ಎಂದು ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಸಂಘಟಿತ ಕಳ್ಳಸಾಗಣೆ ಕಾರ್ಯಾಚರಣೆಯು ರಾಷ್ಟ್ರೀಯ ಭದ್ರತೆಗೆ ಗಂಭೀರ ಪರಿಣಾಮಗಳನ್ನು ಬೀರಬಹುದು ಎಂದಿರುವ ಸಚಿವಾಲಯವು, ಅದಕ್ಕಾಗಿ ಪ್ರಕರಣದ ತನಿಖೆ ನಡೆಸಲು ಅವಕಾಶ ಎನ್‌ಐಎಗೆ ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿಗೆ ಬುಧವಾರ ಪತ್ರ ಬರೆದು ಈ ಪ್ರಕರಣದ ಬಗ್ಗೆ ಕೇಂದ್ರ ಸಂಸ್ಥೆಗಳು ತನಿಖೆ ನಡೆಸುವಂತೆ ಕೋರಿದ್ದಾರೆ. ಅಲ್ಲದೆ ಕೇರಳದ ಕಾಂಗ್ರೆಸ್ ಘಟಕ ಕೂಡಾ ಬುಧವಾದ  ಪತ್ರ ಬರೆದಿದ್ದು ಕೇಂದ್ರ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುವಂತೆ ಕೋರಿತ್ತು.

ಜುಲೈ 5 ರಂದು ತಿರುವನಂತನಪುರಂ ವಿಮಾನ ನಿಲ್ಧಾಣದ ಕಸ್ಟಮ್ ಅಧಿಕಾರಿಗಳು 30 ಕೆಜಿ ಬಂಗಾರವನ್ನು ಯುಎಇ ರಾಜತಾಂತ್ರಿಕ ಬ್ಯಾಗ್‌ನಲ್ಲಿ ಇರುವುದನ್ನು ಪತ್ತೆ ಹಚ್ಚಿದ್ದರು.

ಈ ಕಳ್ಳ ಸಾಗಾಣಿಕೆಯಲ್ಲಿ ರಾಯಭಾರಿ ಕಚೇರಿಯ ಮಾಜಿ ಉದ್ಯೋಗಿಗಳಾದ ಸ್ವಪ್ನಾ ಸುರೇಶ್ ಹಾಗೂ ಸರಿತ್‌ ನಾಯರ್‌ ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ಕಂಡುಕೊಂಡಿದ್ದಾರೆ. ಇಬ್ಬರೂ ಆರು ತಿಂಗಳ ಹಿಂದಿನವರೆಗೂ ರಾಯಭಾರಿ ಕಚೇರಿಯಲ್ಲಿ ಕೆಲಸ ಮಾಡಿದ್ದರು ಎನ್ನಲಾಗಿದೆ.

ಅಧಿಕಾರಿಗಳು ಚಿನ್ನದ ಮೌಲ್ಯವನ್ನು 15  ಕೋಟಿ ಎಂದು ಹೇಳಿದ್ದಾರೆ. ಸರಿತ್ ನಾಯರ್‌ ಕಸ್ಟಮ್ಸ್ ವಿಭಾಗದ ವಶದಲ್ಲಿದ್ದರೆ, ಸ್ವಪ್ನಾ ಸುರೇಶ್ ಪರಾರಿಯಾಗಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್ ಅವರು ಸ್ವಪ್ನಾ ಸುರೇಶ್ ಅವರೊಂದಿಗೆ ಸಂಬಂಧ ಹೊಂದಿದ್ದಾರೆಂದು ಆರೋಪಗಳೆದ್ದಾಗ, ಕೇರಳ ಸರ್ಕಾರ ಶಿವಶಂಕರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿದೆ.

“ಈ ಪ್ರಕರಣವನ್ನಿಟ್ಟುಕೊಂಡು ರಾಜ್ಯದ ಕಮ್ಯೂನಿಸ್ಟ್ ಸರ್ಕಾರವನ್ನು ಗುರಿಯಾಗಿಸುತ್ತಿದ್ದಾರೆ, ಆದರೆ ನಮಗೆ ಮರೆಮಾಡಲು ಏನೂ ಇಲ್ಲ. ಯಾವುದೇ ತನಿಖೆಗೆ ರಾಜ್ಯ ಸಿದ್ಧ ಎಂದು ಮುಖ್ಯಮಂತ್ರಿ ಪ್ರಧಾನಿಗೆ ಪತ್ರ ಕಳುಹಿಸಿದ್ದರು. ಆದರೆ ತನಿಖೆಯನ್ನು ವಿಳಂಬ ಮಾಡಿ ಸರ್ಕಾರವನ್ನು ಮುಜುಗರಕ್ಕೀಡಾಗುವ ಹಾಗೆ ಮಾಡುತ್ತಿದ್ದಾರೆ ಎಂದು ಅನುಮಾನ ಬರುತ್ತಿದೆ” ಎಂದು ಎಡ ಪ್ರಜಾಸತ್ತಾತ್ಮಕ ಒಕ್ಕೂಟದ ಕನ್ವೀನರ್ ವಿ.ಎಸ್.ವಿಜಯರಾಘವನ್ ಅಭಿಪ್ರಾಯಪಟ್ಟಿದ್ದಾರೆ.


ಓದಿ: ಕೇರಳದಲ್ಲಿ ಮತ್ತೆ ಎಡರಂಗ: ಸಿಎಂ ಪಿಣರಾಯಿ ಪರ ಒಲವು ಎಂದ ಏಷ್ಯಾನೆಟ್ ಸಮೀಕ್ಷೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...