Homeಕರ್ನಾಟಕಮಾಜಿ ಸಿಎಂಗೆ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ: HDK ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಮಾಜಿ ಸಿಎಂಗೆ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ: HDK ವಿರುದ್ಧ ಕಾಂಗ್ರೆಸ್ ವಾಗ್ದಾಳಿ

- Advertisement -
- Advertisement -

”ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!” ಎಂದು ಹೆಚ್‌ಡಿ ಕುಮಾರಸ್ವಾಮಿ ಅವರನ್ನು ರಾಜ್ಯ ಕಾಂಗ್ರೆಸ್ ಟೀಕೆ ಮಾಡಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, ”ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!” ಎಂದು ಹೇಳಿದೆ.

”ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ, ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್‌ಗಳಿವೆಯಲ್ಲವೇ?” ಎಂದು ಕೇಳಿದೆ.

”ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು “ಬರ” ಎದುರಿಸುತ್ತಿದ್ದೀರಾ?” ಎಂದು ಟೀಕಿಸಿದೆ.

”ಅದೇನೋ ಪತ್ರಿಕಾಗೋಷ್ಠಿ ನಡೆಸಿ ‘ಕರ್ನಾಟಕ ಕತ್ತಲಲ್ಲಿದೆ’ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ, ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ?! ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ “ದಿವಾಳಿ”ಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು?” ಪ್ರಶ್ನೆ ಮಾಡಿದೆ.

ಇದನ್ನೂ ಓದಿ: ಕರ್ನಾಟಕ: ನಾಲ್ಕು ವರ್ಷಗಳಲ್ಲಿ 6,810 ಮಕ್ಕಳ ಅಸಹಜ ಸಾವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದಲಿತ ಸಮುದಾಯದ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ; ‘ಪ್ರಬುದ್ಧ’ ಯೋಜನೆ ಪುನರಾರಂಭ

0
ಎಸ್‌ಸಿ-ಎಸ್‌ಟಿ ಮತ್ತು ಇತರ ದುರ್ಬಲ ಸಮುದಾಯಗಳ ವಿದ್ಯಾರ್ಥಿಗಳು ತಮ್ಮ ಸ್ನಾತಕೋತ್ತರ ಮತ್ತು ಪಿಎಚ್‌ಡಿ ಕೋರ್ಸ್‌ಗಳನ್ನು ವಿದೇಶದ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ನಡೆಸಲು ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ಆರ್ಥಿಕ ಯೋಜನೆಯಾದ 'ಪ್ರಬುದ್ಧ' ಕಾರ್ಯಕ್ರಮವನ್ನು ನಿಲ್ಲಿಸಿದ್ದ...