Homeಮುಖಪುಟರೈಲು ಅಪಘಾತ | 'ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು?': ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

ರೈಲು ಅಪಘಾತ | ‘ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು?’: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

- Advertisement -
- Advertisement -

ತಮಿಳುನಾಡಿನಲ್ಲಿ ಸಂಭವಿಸಿದ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಲವಾರು ಅಪಘಾತಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡಿದ್ದರೂ, ಯಾವುದೇ ಪಾಠ ಕಲಿತಿಲ್ಲ. ಇನ್ನೂ ಎಷ್ಟು ಕುಟುಂಬಗಳು ಬಲಿಯಾಗಬೇಕು? ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಜವಾಬ್ದಾರಿಯು ಮೇಲ್ಭಾಗದಿಂದ (ಕೇಂದ್ರದಿಂದ) ಪ್ರಾರಂಭವಾಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದು, ರೈಲು ಅಪಘಾತಗಳು ಸಂಭವಿಸಿದಾಗ ಅದನ್ನು ಕೆಳ ಹಂತದ ಸಿಬ್ಬಂದಿಯ ತಲೆಗೆ ಕಟ್ಟಬೇಡಿ ಎಂದಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ರಾಹುಲ್ ಗಾಂಧಿ, “ಮೈಸೂರು-ದರ್ಭಾಂಗ ರೈಲು ಅಪಘಾತವು ಭೀಕರವಾದ ಬಾಲಸೋರ್ ಅಪಘಾತವನ್ನು ಪ್ರತಿಬಿಂಬಿಸುತ್ತದೆ. ಒಂದು ಪ್ಯಾಸೆಂಜರ್ ರೈಲು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಹಲವಾರು ಅಪಘಾತಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡರೂ, ಕೇಂದ್ರ ಸರ್ಕಾರ ಯಾವುದೇ ಪಾಠಗಳನ್ನು ಕಲಿತಿಲ್ಲ. ಉತ್ತರದಾಯಿತ್ವವು ಮೇಲ್ಭಾಗದಿಂದ ಪ್ರಾರಂಭವಾಗುತ್ತದೆ. ಈ ಸರ್ಕಾರವು ಎಚ್ಚೆತ್ತುಕೊಳ್ಳುವ ಮೊದಲು ಇನ್ನೂ ಎಷ್ಟು ಕುಟುಂಬಗಳು ಬಲಿಯಾಗಬೇಕು? ಎಂದು ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ರೈಲು ಅಪಘಾತಗಳು ದೇಶದಲ್ಲಿ ತುಂಬಾ ಸಾಮಾನ್ಯವಾಗಿದೆ. ಒಂದರ ನಂತರ ಒಂದರಂತೆ ಸಂಭವಿಸುತ್ತಿದ್ದರೂ, ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ. ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ” ಎಂದು ಅವರು ತಮ್ಮ ವಾಟ್ಸಾಪ್ ಚಾನೆಲ್‌ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

“ಸುರಕ್ಷಿತ ರೈಲು ಪ್ರಯಾಣದ ಹೊಣೆಗಾರಿಕೆಯ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಳ್ಳದ ಕಾರಣ, ದೇಶದ ಕೋಟಿಗಟ್ಟಲೆ ಜನ ಸಾಮಾನ್ಯರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಭಯ ಮತ್ತು ಅವ್ಯವಸ್ಥೆಯ ಚಕ್ರಗಳ ಮೇಲೆ ಓಡುವ ರೈಲುಗಳಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ಮತ್ತೊಮ್ಮೆ, ತಮಿಳುನಾಡಿನಲ್ಲಿ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬಾಲಸೋರ್‌ನಂತಹ ಅಪಘಾತ ಸಂಭವಿಸಿದೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 19 ಪ್ರಯಾಣಿಕರು ಗಾಯಗೊಂಡಿದ್ದಾರೆ.

ನಿನ್ನೆ(ಅ.11) ರಾತ್ರಿ 8:30ರ ಸುಮಾರಿಗೆ ಚೆನ್ನೈ-ಗುಡೂರು ವಿಭಾಗದ ಪೊನ್ನೇರಿ ಮತ್ತು ಕವರೈಪ್ಪೆಟ್ಟೈ ನಡುವೆ ಸಂಭವಿಸಿದ ಈ ಅಪಘಾತದಲ್ಲಿ ಪ್ಯಾಸೆಂಜರ್ ರೈಲಿನ 12 ರಿಂದ 13 ಬೋಗಿಗಳು ಹಳಿ ತಪ್ಪಿವೆ.

ರೈಲ್ವೆ ಅಧಿಕಾರಿಗಳ ಪ್ರಕಾರ, ಗಂಟೆಗೆ 75 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲು, ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್ ಅನ್ನು ತಪ್ಪಾಗಿ ಪ್ರವೇಶಿಸಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗೂಡ್ಸ್‌ ರೈಲಿನಲ್ಲಿದ್ದ ಪಾರ್ಸೆಲ್ ವ್ಯಾನ್‌ಗೆ ಬೆಂಕಿ ಹೊತ್ತಿಕೊಂಡಿದೆ.

ಇದನ್ನೂ ಓದಿ : ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ : 19 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....