Homeಕರ್ನಾಟಕಇಂದಿನಿಂದ ರೈಲ್ವೇ ಟಿಕೆಟ್ ಬುಕಿಂಗ್ ಶುರು; ಜೂನ್ ಒಂದರಿಂದ ರೈಲು ಸಂಚಾರ ಪ್ರಾರಂಭ

ಇಂದಿನಿಂದ ರೈಲ್ವೇ ಟಿಕೆಟ್ ಬುಕಿಂಗ್ ಶುರು; ಜೂನ್ ಒಂದರಿಂದ ರೈಲು ಸಂಚಾರ ಪ್ರಾರಂಭ

ಆನ್‌ಲೈನ್‌ ಮೂಲಕ ಮಾತ್ರ ಟಿಕೆಟ್‌ ಬುಕಿಂಗ್‌ ಮಾಡಬಹುದಾಗಿದೆ. ಐಆರ್‌ಸಿಟಿಸಿ ವೆಬ್‌ಸೈಟ್ ಮೂಲಕ ಅಥವಾ ಮೊಬೈಲ್ ಆ್ಯಪ್ ಮೂಲಕ ಇ-ಟಿಕೆಟ್‌ ಬುಕಿಂಗ್ ಮಾಡಿಕೊಳ್ಳಬಹುದಾಗಿದೆ.

- Advertisement -
- Advertisement -

ರೈಲ್ವೆ ಇಲಾಖೆಯು ಜೂನ್‌ 1 ರಿಂದ ಸಂಚರಿಸುವ ರೈಲುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂದಿನಿಂದ ಆನ್‌ಲೈನ್‌ ಮೂಲಕ ಟಿಕೆಟ್‌ ಬುಕಿಂಗ್‌ ಮಾಡಬಹುದಾಗಿದೆ. ಐಆರ್‌ಸಿಟಿಸಿ ವೆಬ್‌ಸೈಟ್ ಮೂಲಕ ಅಥವಾ ಮೊಬೈಲ್ ಆ್ಯಪ್ ಮೂಲಕ ರೈಲು ಇ-ಟಿಕೆಟ್‌ ಬುಕಿಂಗ್ ಮಾಡಿಕೊಳ್ಳಬಹುದಾಗಿದೆ.

ಆದರೆ ಯಾವುದೇ ರೈಲು ನಿಲ್ದಾಣದ ಕೌಂಟರ್‌ಗಳಲ್ಲಿ ಟಿಕೆಟ್‌ಗಳು ಲಭ್ಯವಿರುವುದಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ.‌ ಗರಿಷ್ಠ 30 ದಿನಗಳ ವರೆಗೆ ಟಿಕೆಟ್‌ ಕಾಯ್ದಿರಿಸಬಹುದಾಗಿದ್ದು, ನೋಂದಣಿ ಮಾಡಿಕೊಂಡ ಟಿಕೆಟ್‌ ರದ್ದುಪಡಿಸುವುದಕ್ಕೆ ಸಂಬಂಧಿಸಿದಂತೆ ನಿಯಮ ರೂಪಿಸಲಾಗುವುದು. ಅಲ್ಲದೆ ವೆಯ್ಟಿಂಗ್‌ ಲಿಸ್ಟ್‌ ಟಿಕೆಟ್‌ ಇರುವವರು ಪ್ರಯಾಣಿಸಲು ಅವಕಾಶ ಇರುವುದಿಲ್ಲ ಎಂದು ಇಲಾಖೆ ಹೇಳಿದೆ.

ಎಲ್ಲವೂ ಕಾಯ್ದಿರಿಸಿದ ಟಿಕೆಟ್‌ಗಳೇ ಆಗಿದ್ದು, ಸ್ಥಳದಲ್ಲಿ ಟಿಕೆಟ್‌ ನೀಡುವುದು ಅಥವಾ ತತ್ಕಾಲ್‌ ಬುಕಿಂಗ್‌ಗಳಿಗೆ ಅವಕಾಶ ಇರುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಜೂನ್‌ 1ರಿಂದ ಸಂಚರಿಸಲಿರುವ 100 ರೈಲುಗಳ ಪಟ್ಟಿಯನ್ನು ರೈಲ್ವೆ ಇಲಾಖೆ ಬುಧವಾರ ಪ್ರಕಟಿಸಿದೆ. ಈ ರೈಲುಗಳಲ್ಲಿ ಎ.ಸಿ ಹಾಗೂ ಎ.ಸಿ ರಹಿತ ಕೋಚ್‌ಗಳು ಇರಲಿವೆ ಎಂದು ಇಲಾಖೆ ತಿಳಸಿದೆ.
ಯಾವ ರೈಲುಗಳು ಸಂಚರಿಸಲಿವೆ:

ಮುಂಬೈ-ಕೆಎಸ್ಆರ್ ಬೆಂಗಳೂರು ಉದ್ಯಾನ್ ಎಕ್ಸಪ್ರೆಸ್‌, ಮುಂಬೈ-ಗದಗ ಎಕ್ಸ್‌ಪ್ರೆಸ್‌, ದಾನಪುರ-ಕೆಎಸ್ಆರ್ ಬೆಂಗಳೂರು ಸಂಘಮಿತ್ರ ಎಕ್ಸ್‌ಪ್ರೆಸ್‌, ವಾರಕ್ಕೆ ಎರಡು ಬಾರಿ ಸಂಚರಿಸುವ ನವದೆಹಲಿ-ಯಶವಂತಪುರ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್, ಹುಬ್ಬಳ್ಳಿ-ಬೆಂಗಳೂರು ಜನಶತಾಬ್ದಿ ಎಕ್ಸ್‌ಪ್ರೆಸ್, ಯಶವಂತಪುರ-ಶಿವಮೊಗ್ಗ ಜನಶತಾಬ್ದಿ ಎಕ್ಸ್‌ಪ್ರೆಸ್‌, ವಾಸ್ಕೋಡಗಾಮ-ಹಜರತ್ ನಿಜಾಮುದ್ದೀನ್ ಗೋವಾ ಎಕ್ಸ್‌ಪ್ರೆಸ್‌ ಮತ್ತು ಹೌರಾ- ಯಶವಂತಪುರ ಹೌರಾ ದುರಂತೊ ಎಕ್ಸ್‌ಪ್ರೆಸ್‌ ರೈಲುಗಳು ಜೂನ್ 1ರಿಂದ ಸಂಚರಿಸಲಿವೆ ಎಂದು ನೈರುತ್ಯ ರೈಲ್ವೇ ತಿಳಿಸಿದೆ.

ರೈಲ್ವೆ ಸಚಿವ ಪಿಯೂಶ್‌ ಗೋಯಲ್, ಜೂನ್‌ 1 ರಿಂದ ದೇಶದಾದ್ಯಂತ ಸುಮಾರು 200 ಎಸಿ ಅಲ್ಲದ ದ್ವಿತೀಯ ದರ್ಜೆಯ ರೈಲುಗಳ ಸಂಚಾರ ಆರಂಭಿಸಲಾಗುವುದು ಎಂದು ಈ ಹಿಂದೆಯೇ ತಿಳಿಸಿದ್ದರು. ಹೀಗಾಗಿ ರಾಜ್ಯದಲ್ಲೂ ಜೂನ್‌ 01 ರಿಂದ ರೈಲ್ವೆ ಸೇವೆ ಆರಂಭವಾಗಲಿದೆ.

ಕೊರೊನಾದಿಂದಾಗಿ ರಾಷ್ಟ್ರದಾದ್ಯಂತ ಕಳೆದ ಎರಡು ತಿಂಗಳಿನಿಂದ ಲಾಕ್‌ಡೌನ್‌ ಘೋಷಿಸಲಾಗಿದ್ದು, ರೈಲು ಸಂಚಾರವನ್ನೂ ಸ್ಥಗಿತ ಮಾಡಲಾಗಿತ್ತು. ಇದರಿಂದಾಗಿ ಲಕ್ಷಾಂತರ ವಲಸೆ ಕಾರ್ಮಿಕರು ತಮ್ಮ ದೂರದ ರಾಜ್ಯಗಳಿಗೆ ಹೋಗಲಾಗದೇ ಕಾಲ್ನಡಿಗೆಯನ್ನು ಪ್ರಾರಂಭಿಸಿದ್ದರು. ಈ ಮಹಾನಡಿಗೆಯಲ್ಲಿ ಹಲವಾರು ವಲಸೆ ಕಾರ್ಮಿಕರು ರಸ್ತೆ ಅಫಘಾತ, ಬಳಲಿಕೆಯಿಂದ ಪ್ರಾಣ ಕಳೆದು ಕೊಂಡಿದ್ದರು. ಇದರ ನಂತರ ಎಚ್ಚೆತ್ತ ಕೇಂದ್ರ ಸರ್ಕಾರ, ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ತಲುಪಲು ಶ್ರಮಿಕ್‌ ರೈಲುಗಳನ್ನು ಆರಂಭಿಸಿತ್ತು.

ಶ್ರಮಿಕ ರೈಲುಗಳಲ್ಲದೆ 15 ಜೋಡಿ ವಿಶೇಷ ರೈಲು ಸೇವೆಗೂ ಲಾಕ್ ಡೌನ್ ಸಮಯದಲ್ಲಿ ಗ್ರೀನ್‌ ಸಿಗ್ನಲ್ ನೀಡಿತ್ತು. ಆದರೆ ಈಗ ರೈಲ್ವೆ ಇಲಾಖೆ ಹಂತ ಹಂತವಾಗಿ ಪೂರ್ಣ ಪ್ರಮಾಣ ಸೇವೆ ಆರಂಭಿಸುವ ಪ್ರಯತ್ನದಲ್ಲಿದೆ.


ಓದಿ: ಫ್ಯಾಕ್ಟ್‌ಚೆಕ್‌: ಲಾಕ್‌ಡೌನ್ ನಡುವೆ ಮುಂಬೈ ರೈಲು ನಿಲ್ದಾಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜವೇ?


ಓದಿ: ದೇಶೀಯ ನಾಗರಿಕ ವಿಮಾನಯಾನಗಳು ಸೋಮವಾರದಿಂದ ಪ್ರಾರಂಭ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...