Homeಮುಖಪುಟಶಾಸಕರಿಗೆ ತರಬೇತಿ: ಪೂರ್ವಗ್ರಹ ಪೀಡಿತ ಚರ್ಚೆ ಸರಿಯಲ್ಲವೆಂದ ಸ್ಪೀಕರ್ ಯು.ಟಿ ಖಾದರ್

ಶಾಸಕರಿಗೆ ತರಬೇತಿ: ಪೂರ್ವಗ್ರಹ ಪೀಡಿತ ಚರ್ಚೆ ಸರಿಯಲ್ಲವೆಂದ ಸ್ಪೀಕರ್ ಯು.ಟಿ ಖಾದರ್

- Advertisement -
- Advertisement -

ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ ನೂತನ ಶಾಸಕರಿಗೆ ಹಮ್ಮಿಕೊಂಡಿರುವ ತರಬೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವುದಕ್ಕೆ ಪ್ರತಿಕ್ರಿಯಿಸಿರುವ ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್, ‘ಪೂರ್ವಗ್ರಹ ಪೀಡಿತ ಚರ್ಚೆ ಸರಿಯಲ್ಲ’ ಎಂದಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಯಾವುದೇ ವಿಚಾರದ ಬಗ್ಗೆ ಈಗಲೇ ಪೂರ್ವಗ್ರಹ ಪೀಡಿತ ಚರ್ಚೆ ಸರಿಯಲ್ಲ. ಶಿಬಿರದ ಬಗ್ಗೆ ಆಕ್ಷೇಪಿಸುವವರು ಶಿಬಿರ ನಡೆದ ಬಳಿಕ ಅಭಿಪ್ರಾಯ ಹೇಳಲಿ. ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಈ ತರಬೇತಿ ಶಿಬಿರ ಆಯೋಜಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಶಿಬಿರದಲ್ಲಿ ಎಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಟಿ.ಬಿ.ಜಯಚಂದ್ರ, ಸುರೇಶ್ ಕುಮಾರ್ ಸೇರಿ ಸಂಸದೀಯ ಪಟುಗಳು ತರಬೇತಿ ನೀಡಲಿದ್ದಾರೆ. ಮಾಜಿ ಸ್ಪೀಕರ್‌ಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಕೂಡ ನೂತನ ಶಾಸಕರೊಂದಿಗೆ ಸಂವಾದ ನಡೆಸಲಿದ್ದಾರೆ. ಅದರ ಜೊತೆಗೆ ಒತ್ತಡರಹಿತ ಕೆಲಸ ನಿರ್ವಹಣೆ ಬಗ್ಗೆ ತಿಳಿಸಲು ಕೆಲ ಆಧ್ಯಾತ್ಮಿಕ ವ್ಯಕ್ತಿಗಳನ್ನು ಕೂಡ ಕರೆದಿದ್ದೇವೆ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಧಾರ್ಮಿಕ ಮತ್ತು ವಿವಾದಾತ್ಮಕ ವ್ಯಕ್ತಿಗಳನ್ನು ಆಹ್ವಾನಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕಾಂಗ್ರೆಸ್ ಪಕ್ಷದ ವಕ್ತಾರರು ಮತ್ತು ಮಾಜಿ ಪರಿಷತ್ ಸದಸ್ಯರಾದ ರಮೇಶ್‌ಬಾಬುರವರು ಯು.ಟಿ ಖಾದರ್‌ರವರಿಗೆ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಖಾದರ್ “ಸಾಮಾಜಿಕ ತಾಣಗಳಲ್ಲಿ ಸ್ಪಷ್ಟನೆ ಇಲ್ಲದೇ ಬರೆಯುತ್ತಿರುವುದು ಅವರ ವ್ಯಕ್ತಿತ್ವಕ್ಕೆ ಬಿಟ್ಟ ವಿಚಾರ” ಎಂದಿದ್ದಾರೆ.

ಶಿಬಿರದಲ್ಲಿ ಕರೆದಿರುವ ಅತಿಥಿಗಳಲ್ಲಿ ಕೆಲವರು ಆಗಮಿಸುವ ಬಗ್ಗೆ ಇನ್ನೂ ದೃಢಪಟ್ಟಿಲ್ಲ. ರವಿಶಂಕರ್ ಗುರೂಜಿಯವರು ಊರಲ್ಲೇ ಇಲ್ಲ, ಅವರು ಅಮೆರಿಕದಲ್ಲಿದ್ದಾರೆ ಎಂದು ಸ್ಪೀಕರ್ ಮಾಹಿತಿ ನೀಡಿದರು.

ಈ ಶಿಬಿರದ ಬಗ್ಗೆ ಯಾವುದೇ ವಿಚಾರ ಇದ್ದರೂ ಈಗಲೇ ಹೇಳೋದು ಪ್ರಬುದ್ಧತೆ ಅನಿಸಿಕೊಳ್ಳುವುದಿಲ್ಲ. ತರಬೇತಿ ಶಿಬಿರ ನೋಡಿದ ಬಳಿಕ ಅದರ ಅಭಿಪ್ರಾಯ ಹೇಳಲಿ ಎಂದು ಯು ಟಿ ಖಾದರ್ ತಿಳಿಸಿದರು.

ಇನ್ನೊಂದೆಡೆ ಶಾಸಕರ ತರಬೇತಿ ಶಿಬಿರದ ಕಲಾಪಗಳಿಂದ ಧಾರ್ಮಿಕ ಪ್ರತಿನಿಧಿಗಳ ಪ್ರವಚನವನ್ನು ಕೈ ಬಿಡಬೇಕೆಂದು ನಮ್ಮ ಒಕ್ಕೊರಲ ಆಗ್ರಹವಾಗಿದೆ ಎಂದು ಡಾ.ಕೆ.ಮರುಳಸಿದ್ದಪ್ಪ ಡಾ.ಜಿ.ರಾಮಕೃಷ್ಣ, ಡಾ.ವಿಜಯಾ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಪ್ರೊ.ರಾಜೇಂದ್ರ ಚೆನ್ನಿ, ಕೆ.ಎಸ್.ವಿಮಲಾ, ಬಿ.ಶ್ರೀಪಾದ ಭಟ್, ಟಿ.ಸುರೇಂದ್ರ ರಾವ್, ಡಾ.ಬಂಜಗೆರೆ ಜಯಪ್ರಕಾಶ್, ಡಾ.ನಿರಂಜನಾರಾಧ್ಯ, ಡಾ.ಮೀನಾಕ್ಷಿ ಬಾಳಿ, ಡಾ.ಎನ್.ಗಾಯತ್ರಿ, ಡಾ.ವಸುಂಧರಾ ಭೂಪತಿ, ರುದ್ರಪ್ಪ ಹುನಗವಾಡಿ ಅವರು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ ‘ಜಾಗೃತ ನಾಗರಿಕರ ಒಕ್ಕೂಟ’ದ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರ ಕನ್ನಡ “ಲೋಕ” ಲಡಾಯಿ; ಕೇಸರಿಪಡೆಯ ಕಲಹ ಕಾಂಗ್ರೆಸ್‌ಗೆ ವರವಾದೀತೆ?

0
ಉತ್ತರ ಕನ್ನಡದ ಅಷ್ಟೂ ಎಂಟು ವಿಧಾನಸಭಾ ಕ್ಷೇತ್ರಗಳ ಜತೆ ಬೆಳಗಾವಿ ಜಿಲ್ಲೆಯ ಖಾನಾಪುರ ಮತ್ತು ಕಿತ್ತೂರು ಸೇರಿಸಿ ರಚಿಸಲಾಗಿರುವ "ಉತ್ತರ ಕನ್ನಡ ಲೋಕಸಭಾ ಕ್ಷೇತ್ರ" ವಿಭಿನ್ನತೆ, ವೈವಿಧ್ಯತೆಗಳ ವಿಶಿಷ್ಟ ಸೀಮೆ. ಭೋರ್ಗರೆವ ಅರಬ್ಬೀ...