Homeಅಂತರಾಷ್ಟ್ರೀಯಟಿಕ್‌ಟಾಕ್, ವೀಚಾಟ್ ಜೊತೆಗಿನ ವಹಿವಾಟುಗಳ ನಿಷೇಧ: ಡೊನಾಲ್ಡ್ ಟ್ರಂಪ್ ಸಹಿ

ಟಿಕ್‌ಟಾಕ್, ವೀಚಾಟ್ ಜೊತೆಗಿನ ವಹಿವಾಟುಗಳ ನಿಷೇಧ: ಡೊನಾಲ್ಡ್ ಟ್ರಂಪ್ ಸಹಿ

ಆದೇಶದ ಪ್ರಕಾರ, ಟಿಕ್‌ಟಾಕ್ ಮತ್ತು ವೀಚಾಟ್, ಆಪಲ್‌ನ ಆಪ್ ಸ್ಟೋರ್ ಅಥವಾ ಯುನೈಟೆಡ್ ಸ್ಟೇಟ್ಸ್‌ನ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಕಾಣಿಸಿಕೊಳ್ಳುವುದಿಲ್ಲ.

- Advertisement -
- Advertisement -

ಚೀನಾದ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಟಿಕ್‌ಟಾಕ್ ಮತ್ತು ವೀಚಾಟ್‌ನ ಮೂಲ ಕಂಪನಿಯಾದ ಬೈಟ್‌ಡ್ಯಾನ್ಸ್ ಲಿಮಿಟೆಡ್‌ನೊಂದಿಗೆ ವಹಿವಾಟುಗಳನ್ನು ನಿಷೇಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಸಹಿ ಹಾಕಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ಆದೇಶವು 45 ದಿನಗಳ ನಂತರ ಜಾರಿಗೆ ಬರಲಿದೆ.

ಆದೇಶದ ಪ್ರಕಾರ, ಟಿಕ್‌ಟಾಕ್ ಮತ್ತು ವೀಚಾಟ್, ಆಪಲ್‌ನ ಆಪ್ ಸ್ಟೋರ್ ಅಥವಾ ಯುನೈಟೆಡ್ ಸ್ಟೇಟ್ಸ್‌ನ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಕಾಣಿಸಿಕೊಳ್ಳುವುದಿಲ್ಲ.

“ನಮ್ಮ ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸಲು ಯುನೈಟೆಡ್ ಸ್ಟೇಟ್ಸ್ ಟಿಕ್ ಟಾಕ್ ಮಾಲೀಕರ ವಿರುದ್ಧ ಆಕ್ರಮಣಕಾರಿ ಕ್ರಮ ತೆಗೆದುಕೊಳ್ಳಬೇಕು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

“ಈ ಆದೇಶ ದಿನಾಂಕದ 45 ದಿನಗಳ ನಂತರ ನಿಷೇಧಿಸಲಾಗುವುದು ಎಂದು ಅದು ಹೇಳಿದೆ. ಬೈಟ್‌ಡ್ಯಾನ್ಸ್ ಲಿಮಿಟೆಡ್‌ನೊಂದಿಗೆ ಯಾವುದೇ ಆಸ್ತಿಗೆ ಸಂಬಂಧಿಸಿದಂತೆ, ಯಾವುದೇ ವ್ಯಕ್ತಿಯ ಯಾವುದೇ ವಹಿವಾಟು, ಯುನೈಟೆಡ್ ಸ್ಟೇಟ್ಸ್‌ನ ಅಧಿಕಾರ ವ್ಯಾಪ್ತಿಗೆ ಒಳಪಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಯುಎಸ್ ಫೆಡರಲ್ ಅಧಿಕಾರಿಗಳು ಕಳೆದ ತಿಂಗಳು ಟಿಕ್‌ಟಾಕ್‌ ಅನ್ನು ಚೀನಾದ ಗುಪ್ತಚರ ಸಂಸ್ಥೆಗಳು ಬಳಸಬಹುದೆಂಬ ಕಳವಳವನ್ನು ವ್ಯಕ್ತಪಡಿಸಿದ್ದರು. ಹಾಗೆಯೇ ಆಗಸ್ಟ್ 1 ರಂದು ಟ್ರಂಪ್ ಅಮೆರಿಕದಲ್ಲಿ ಟಿಕ್‌ಟಾಕ್ ಅನ್ನು ನಿಷೇಧಿಸುವುದಾಗಿ ಹೇಳಿದ್ದರು.

ಆಗಸ್ಟ್ 5 ರಂದು, ಬೈಟ್‌ಡ್ಯಾನ್ಸ್ ಲಿಮಿಟೆಡ್‌ನ ಸಂಸ್ಥಾಪಕ ಜಾಂಗ್ ಯಿಮಿಂಗ್, ಟಿಕ್‌ ಟಾಕ್‌ ಅನ್ನು ಮೈಕ್ರೋಸಾಫ್ಟ್‌ಗೆ ಮಾರಾಟ ಮಾಡುವುದು ಅಮೇರಿಕಾದಲ್ಲಿಅದರ ನಿಷೇಧಿಸುವಿಕೆಯನ್ನು ತಡೆಯುವ ಏಕೈಕ ಮಾರ್ಗವಾಗಿದೆ ಎಂದು ಹೇಳಿದ್ದರು.

ಮೈಕ್ರೋಸಾಫ್ಟ್ ಆಗಸ್ಟ್ 3 ರಂದು ಟಿಕ್‌ಟಾಕ್‌ನ ಕೆಲವು ಭಾಗಗಳನ್ನು ಖರೀದಿಸಲು ಬೈಟ್‌ಡ್ಯಾನ್ಸ್‌ನೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಹೇಳಿದೆ.

ಅದೇ ದಿನ, ಟ್ರಂಪ್, ಟಿಕ್ ಟಾಕ್ ಅನ್ನು ನಿಷೇಧಿಸುವ ಬಗ್ಗೆ ಮನಸ್ಸು ಬದಲಾಯಿಸಿದ ನಂತರ, ಅದನ್ನು ಸ್ವಾಧೀನಪಡಿಸಿಕೊಳ್ಳಲು ಮೈಕ್ರೋಸಾಫ್ಟ್‌ಗೆ ಒಂದು ತಿಂಗಳು ಕಾಲಾವಕಾಶ ನೀಡಿದ್ದರು.

ಮೈಕ್ರೋಸಾಫ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತ್ಯ ನಾದೆಲ್ಲಾ ಅವರು ಸೆಪ್ಟೆಂಬರ್ 15 ರೊಳಗೆ ಟಿಕ್ ಟಾಕ್ ಜೊತೆ ಒಪ್ಪಂದ ಮಾಡಿಕೊಳ್ಳುವ ಭರವಸೆ ಹೊಂದಿದ್ದಾರೆ ಎಂದು ಹೇಳಿದ್ದರು.

ಗಾಲ್ವಾನ್ ವ್ಯಾಲಿ ಘರ್ಷಣೆಯ ನಂತರ ಭಾರತದಲ್ಲಿ ಚೀನಾದ ಆ್ಯಪ್‌ಗಳನ್ನು ನಿಷೇಧಿಸಲಾಯಿತು.

ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಬೆದರಿಕೆ ಹಾಕಿದ್ದನ್ನು ಉಲ್ಲೇಖಿಸಿ ಜೂನ್‌ನಲ್ಲಿ ಕೇಂದ್ರವು 59 ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಿತು. ಕಳೆದ ವಾರ, ನಿಷೇಧಿತ ಅಪ್ಲಿಕೇಶನ್‌ಗಳ ತದ್ರೂಪುಗಳಾಗಿದ್ದ 47 ಅಪ್ಲಿಕೇಶನ್‌ಗಳನ್ನು ಸಹ ನಿರ್ಬಂಧಿಸಲಾಗಿದೆ.

ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸುವ ಭಾರತದ ಕ್ರಮವನ್ನು, ಚೀನಾ, ವಿಶ್ವ ವಾಣಿಜ್ಯ ಸಂಸ್ಥೆಯ ನಿಯಮಗಳ ಉಲ್ಲಂಘನೆ ಎಂದು ಕರೆದಿದೆ.


ಇದನ್ನೂ ಓದಿ: ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...