Homeಕರ್ನಾಟಕವರ್ಗಾವಣೆ ಬೆದರಿಕೆ: ಲಿಖಿತ ಆದೇಶದಲ್ಲೂ ಜಸ್ಟೀಸ್‌ ಸಂದೇಶ್‌ ಉಲ್ಲೇಖ

ವರ್ಗಾವಣೆ ಬೆದರಿಕೆ: ಲಿಖಿತ ಆದೇಶದಲ್ಲೂ ಜಸ್ಟೀಸ್‌ ಸಂದೇಶ್‌ ಉಲ್ಲೇಖ

- Advertisement -
- Advertisement -

ರಾಜ್ಯ ಪೊಲೀಸ್‌ನ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ ನಂತರ ತಮಗೆ ವರ್ಗಾವಣೆ ಬೆದರಿಕೆಗಳು ಬಂದಿವೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್‌ ಲಿಖಿತ ಆದೇಶದಲ್ಲೂ ಉಲ್ಲೇಖಿಸಿದ್ದಾರೆ.

ಜುಲೈ 4ರಂದು ನಡೆದ ವಿಚಾರಣೆ ವೇಳೆ ನ್ಯಾಯಮೂರ್ತಿ ಎಚ್.ಪಿ.ಸಂದೇಶ್, ಎಸಿಬಿ ವಿರುದ್ಧ ಹೇಳಿಕೆ ನೀಡಿದ ನಂತರ ನನಗೆ ಪರೋಕ್ಷವಾಗಿ ವರ್ಗಾವಣೆ ಬೆದರಿಕೆ ಹಾಕಲಾಗಿದೆ ಎಂದು ಮೌಖಿಕವಾಗಿ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸಿಬಿಯ ಕಾರ್ಯನಿರ್ವಹಣಾ ಮುಖ್ಯಸ್ಥ ಹೆಚ್ಚುವರಿ ಡಿಜಿಪಿ (ಎಡಿಜಿಪಿ) ಕಳಂಕಿತ ಅಧಿಕಾರಿ ಎಂದೂ ಅವರು ತಿಳಿಸಿದ್ದರು.

“ನಿಮ್ಮ ಎಸಿಬಿ ಎಡಿಜಿಪಿ ಶಕ್ತಿಶಾಲಿ ವ್ಯಕ್ತಿ ಎಂದು ತೋರುತ್ತಿದೆ. ಇದನ್ನು ಯಾರೋ ನನ್ನ ಸಹೋದ್ಯೋಗಿಗೆ ಹೇಳಿದ್ದಾರೆ. ಆ ನ್ಯಾಯಾಧೀಶರು ಬಂದು ನನಗೆ ತಿಳಿಸಿದ್ದಾರೆ. ವರ್ಗಾವಣೆ ಬೆದರಿಕೆಯನ್ನು ಆದೇಶದಲ್ಲಿ ದಾಖಲಿಸಲಾಗುವುದು” ಎಂದು ನ್ಯಾಯಮೂರ್ತಿ ಸಂದೇಶ್ ತಿಳಿಸಿದ್ದರು.

ಸಿಜೆ ಆಗಿದ್ದ ರಿತುರಾಜ್‌ ಅವಸ್ಥಿ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ನ್ಯಾಯಮೂರ್ತಿಯೊಬ್ಬರು ಹೇಳಿದ ವಿಷಯವನ್ನು ಜಸ್ಟೀಸ್ ಸಂದೇಶ್ ಪ್ರಸ್ತಾಪಿಸಿದ್ದರು. ಜುಲೈ 4ರಂದು ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ ತನಗೆ ಬಂದಿದ್ದ ಬೆದರಿಕೆಯನ್ನು ಉಲ್ಲೇಖಿಸಿದ್ದರು.

“ವ್ಯಕ್ತಿಯೊಬ್ಬರು ನನ್ನ ಬಗ್ಗೆ ವಿಚಾರಿಸಿದ್ದಾರೆ. ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ” ಎಂದು ನ್ಯಾಯಮೂರ್ತಿ ಸಂದೇಶ್ ಸ್ಪಷ್ಟಪಡಿಸಿದ್ದರು.

ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯ ಲಂಚ ಪ್ರಕರಣದ ಆರೋಪಿಯೊಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಾಧೀಶರು ಈ ಹೇಳಿಕೆ ನೀಡಿದ್ದರು.

ಜಮೀನು ವಿವಾದದಲ್ಲಿ ಅನುಕೂಲಕರ ಆದೇಶಕ್ಕೆ ಬದಲಾಗಿ 5 ಲಕ್ಷ ರೂಪಾಯಿ ಲಂಚ ಪಡೆದಿದ್ದಕ್ಕಾಗಿ ಕಚೇರಿಯ ಇಬ್ಬರು ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿರಿ: ಯುಪಿ ಸಿಎಂ ಅಲಹಾಬಾದ್ ಹೈಕೋರ್ಟ್ ಸಿಜೆ ರೀತಿ ವರ್ತಿಸುತ್ತಿದ್ದಾರೆ: ಓವೈಸಿ

ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳನ್ನು ರಕ್ಷಿಸಲಾಗುತ್ತಿದೆ, ಕಿರಿಯ ಸಿಬ್ಬಂದಿಯನ್ನು ಮಾತ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಹೈಕೋರ್ಟ್ ಆಕ್ಷೇಪಣೆ ಎತ್ತಿದೆ.

ಎಸಿಬಿ ಪ್ರಕರಣದ ತನಿಖೆಯನ್ನು ಸರಿಯಾದ ರೀತಿಯಲ್ಲಿ ನಡೆಸುತ್ತಿಲ್ಲ ಮತ್ತು ಸಂಸ್ಥೆಯು ಲಂಚದ ಸಂಗ್ರಹ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ನ್ಯಾಯಮೂರ್ತಿ ಸಂದೇಶ್ ಅಭಿಪ್ರಾಯಪಟ್ಟಿದ್ದಾರೆ.

“ಎಸಿಬಿಗೆ ಕಳಂಕಿತ ಅಧಿಕಾರಿಗಳನ್ನು ನಿಯೋಜನೆ ಮಾಡಬೇಡಿ. ಎಸಿಬಿಗೆ ಅಧಿಕಾರಿಗಳನ್ನು ನಿಯೋಜಿಸುವ ಮೊದಲು ಸಾರ್ವಜನಿಕ ಹಿತಾಸಕ್ತಿಯನ್ನು ಗಮನಿಸಬೇಕು. ರಾಜ್ಯದಲ್ಲಿನ ಭ್ರಷ್ಟಾಚಾರವನ್ನು ತಡೆಗಟ್ಟಲೆಂದೇ ಎಸಿಬಿ ರಚಿಸಲಾಗಿದೆ. ಎಸಿಬಿಗೆ ಅಧಿಕಾರಿಯಾಗುವವರಿಗೆ ವಿಶ್ವಾಸಾರ್ಹತೆ ಬಹುಮುಖ್ಯವಾಗಿರುತ್ತದೆ. ಎಸಿಬಿ ಘನತೆಯನ್ನು ಕಾಪಾಡುವ, ಉನ್ನತ ಸ್ಥಾನಕ್ಕೆ ಒಯ್ಯುವ ಕ್ಷಮತೆ ಇರಬೇಕು. ಸರ್ವೀಸ್‌ ರೆಕಾರ್ಡ್, ಅಧಿಕಾರಿಯ ಸಮಗ್ರತೆಯನ್ನು ಪರಿಗಣಿಸಬೇಕು” ಎಂದು ನ್ಯಾಯಪೀಠವು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ.

“ಎಸಿಬಿಗೆ ಅಧಿಕಾರಿಗಳನ್ನು ನೇಮಿಸುವಾಗ ಆಂತರಿಕ, ಬಾಹ್ಯ ಪ್ರಭಾವಕ್ಕೆ ಒಳಗಾಗದೆ ನೇಮಕ ಮಾಡಬೇಕು. ಇಂತಹ ಅಧಿಕಾರಿಗಳ ಹಾಗೂ ಅವರ ಕುಟುಂಬದವರ ವಿರುದ್ಧವೂ ಎಸಿಬಿ, ಲೋಕಾಯುಕ್ತ ತನಿಖೆ ನಡೆಯುತ್ತಿರಬಾರದು” ಎಂದು ತಿಳಿಸಿದೆ.

ನ್ಯಾಯಮೂರ್ತಿ ಸಂದೇಶ್ ನೀಡಿದ ಲಿಖಿತ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಎಸಿಬಿ, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 12 ರಂದು ಪ್ರಕರಣದ ವಿಚಾರಣೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....