Homeಮುಖಪುಟಕೇಂದ್ರದ ಸಲಹೆಯಂತೆ ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ : ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ಎಂದ ನ್ಯಾ. ಉಜ್ಜಲ್...

ಕೇಂದ್ರದ ಸಲಹೆಯಂತೆ ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ : ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ಎಂದ ನ್ಯಾ. ಉಜ್ಜಲ್ ಭುಯಾನ್

- Advertisement -
- Advertisement -

ಕೇಂದ್ರ ಸರ್ಕಾರದ ಕೋರಿಕೆಯ ಮೇರೆಗೆ ಹೈಕೋರ್ಟ್ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ಪ್ರಸ್ತಾವನೆ ಮಾರ್ಪಡಿಸಿದ ಕೊಲಿಜಿಯಂನ ಇತ್ತೀಚಿನ ನಿರ್ಧಾರವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಪ್ರಶ್ನಿಸಿದ್ದು, “ನ್ಯಾಯಾಧೀಶರ ವರ್ಗಾವಣೆ ಮತ್ತು ನೇಮಕಾತಿ ವಿಷಯದಲ್ಲಿ ಕಾರ್ಯಾಂಗಕ್ಕೆ ಯಾವುದೇ ಪಾತ್ರವಿಲ್ಲ” ಎಂದು ಪ್ರತಿಪಾದಿಸಿದ್ದಾರೆ.

ಕೇಂದ್ರದ ಕೋರಿಕೆಯ ಮೇರೆಗೆ ವರ್ಗಾವಣೆ ಪ್ರಸ್ತಾವನೆ ಮಾರ್ಪಾಡು ಮಾಡಲಾಗಿದೆ ಎಂಬ ಕೊಲಿಜಿಯಂನ ದಾಖಲೆಯು “ಸಾಂವಿಧಾನಿಕವಾಗಿ ಸ್ವತಂತ್ರ ಎಂದು ಭಾವಿಸಲಾದ ಪ್ರಕ್ರಿಯೆಯ ಮೇಲೆ ಕಾರ್ಯಾಂಗ ಪ್ರಭಾವದ ಗಮನಾರ್ಹ ಹಸ್ತಕ್ಷೇಪವನ್ನು ಬಹಿರಂಗಪಡಿಸುತ್ತದೆ” ಎಂದು ನ್ಯಾಯಮೂರ್ತಿ ಭುಯಾನ್ ಹೇಳಿದ್ದಾರೆ.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ಅತುಲ್ ಶ್ರೀಧರನ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ನಿಂದ ಛತ್ತೀಸ್‌ಗಢ ಹೈಕೋರ್ಟ್‌ಗೆ ವರ್ಗಾಯಿಸುವ ತನ್ನ ಮೂಲ ಪ್ರಸ್ತಾವನೆಯನ್ನು ಮಾರ್ಪಡಿಸಿ, ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡಿತ್ತು.

“ಸರ್ಕಾರದ ಮರುಪರಿಶೀಲನೆ ಕೋರಿಗೆ ಮೇರೆಗೆ” ಪ್ರಸ್ತಾವನೆಯನ್ನು ಮಾರ್ಪಡಿಸಲಾಗಿದೆ ಎಂದು ಕೊಲಿಜಿಯಂ ಹೇಳಿಕೆಯೇ ಸ್ಪಷ್ಟವಾಗಿ ದಾಖಲಿಸಿರುವುದರಿಂದ ಈ ನಡೆ ಹುಬ್ಬೇರಿಸಿದೆ. ಛತ್ತೀಸ್‌ಗಢ ಹೈಕೋರ್ಟ್‌ನಲ್ಲಿ, ನ್ಯಾಯಮೂರ್ತಿ ಶ್ರೀಧರನ್ ಅವರು ಹೈಕೋರ್ಟ್ ಕೊಲಿಜಿಯಂ ಸದಸ್ಯರಾಗುತ್ತಿದ್ದರು. ಆದರೆ, ಅಲಹಾಬಾದ್ ಹೈಕೋರ್ಟ್‌ನಲ್ಲಿ ಅವರ ಸೇವಾ ಹಿರಿತನವು ತುಂಬಾ ಕಡಿಮೆ ಇದೆ.

ನ್ಯಾಯಮೂರ್ತಿ ಅತುಲ್ ಶ್ರೀಧರನ್ ಅವರು ಸ್ವತಂತ್ರ ನ್ಯಾಯಾಧೀಶರು ಎಂಬ ಖ್ಯಾತಿ ಹೊಂದಿದವರು. ಇತ್ತೀಚೆಗೆ ಕರ್ನಲ್ ಸೋಫಿಯಾ ಕುರೇಶಿ ವಿರುದ್ದ ಅವಮಾನಕರ ಮತ್ತು ನಿಂದನೀಯ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಕುನ್ವರ್ ವಿಜಯ್ ಶಾ ವಿರುದ್ದ ಅವರು ಸ್ವಯಂಪ್ರೇರಿತ (ಸುಮೋಟೋ) ವಿಚಾರಣೆ ಕೈಗೆತ್ತಿಕೊಂಡಿದ್ದರು. ಈ ನಡೆಯಿಂದ ಅವರು ‘ನಿಷ್ಪಕ್ಷಪಾತಿ’ ಎಂದು ಎನಿಸಿಕೊಂಡಿದ್ದರು. ಅಂತಹ ನ್ಯಾಯಾಧೀಶರ ವಿಚಾರದಲ್ಲಿ ಕೇಂದ್ರ ಹಸ್ತಕ್ಷೇಪ ಮಾಡಿರುವುದು ಅನುಮಾನವನ್ನು ಹುಟ್ಟುಹಾಕಿದೆ.

ಪುಣೆಯ ಐಎಲ್‌ಎಸ್ ಕಾನೂನು ಕಾಲೇಜಿನಲ್ಲಿ “ಸಾಂವಿಧಾನಿಕ ನೈತಿಕತೆ ಮತ್ತು ಪ್ರಜಾಪ್ರಭುತ್ವ ಆಡಳಿತ” ಕುರಿತು ಪ್ರಾಂಶುಪಾಲ ಜಿ.ವಿ. ಪಂಡಿತ್ ಸ್ಮಾರಕ ಉಪನ್ಯಾಸ ನೀಡುತ್ತಾ, ನ್ಯಾಯಾಧೀಶರ ವರ್ಗಾವಣೆ ಮತ್ತು ನಿಯೋಜನೆಯು ನ್ಯಾಯಾಂಗದ ವ್ಯಾಪ್ತಿಗೆ ಮಾತ್ರ ಬರುತ್ತದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಪ್ರಭಾವಿತವಾಗಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಭುಯಾನ್ ಹೇಳಿದ್ದಾರೆ.

“ಸರ್ಕಾರದ ವಿರುದ್ಧ ಕೆಲವು ಆದೇಶಗಳನ್ನು ಹೊರಡಿಸಿದ್ದಾರೆ ಎಂಬ ಕಾರಣಕ್ಕಾಗಿ ನ್ಯಾಯಾಧೀಶರನ್ನು ಒಂದು ಹೈಕೋರ್ಟ್‌ನಿಂದ ಮತ್ತೊಂದು ಹೈಕೋರ್ಟ್‌ಗೆ ಏಕೆ ವರ್ಗಾಯಿಸಬೇಕು? ಇದು ನ್ಯಾಯಾಂಗದ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುವುದಿಲ್ಲವೇ?” ಎಂದು ನ್ಯಾ. ಭುಯಾನ್ ಅವರು ಪ್ರಶ್ನಿಸಿದ್ದು, ಇಂತಹ ಕ್ರಮಗಳು ಸಂವಿಧಾನದ ಮೂಲ ಆಶಯವಾಗಿರುವ ನ್ಯಾಯಾಂಗದ ಸ್ವಾತಂತ್ರ್ಯವನ್ನು ನೇರವಾಗಿ ಹಾಳುಮಾಡುತ್ತವೆ” ಎಂದು ಎಚ್ಚರಿಸಿದ್ದಾರೆ. ಆದರೆ, ನ್ಯಾ. ಭುಯಾನ್ ಅವರು ತಮ್ಮ ಭಾಷಣದಲ್ಲಿ ನ್ಯಾ. ಶ್ರೀಧರನ್ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸಿಲ್ಲ.

“ವಿಷಯಗಳ ಸ್ವಭಾವದಿಂದ, ಕೇಂದ್ರ ಸರ್ಕಾರವು ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ ಮತ್ತು ನಿಯೋಜನೆಯ ವಿಷಯದಲ್ಲಿ ಯಾವುದೇ ಪಾತ್ರವನ್ನು ಹೊಂದಲು ಸಾಧ್ಯವಿಲ್ಲ. ಇಂತಹ ನ್ಯಾಯಾಧೀಶರನ್ನು ವರ್ಗಾಯಿಸಬಾರದು ಅಥವಾ ವರ್ಗಾಯಿಸಬೇಕು ಎಂದು ಹೇಳಲು ಸಾಧ್ಯವಿಲ್ಲ. ಅದು ನ್ಯಾಯಾಂಗದ ವಿಶೇಷ ವ್ಯಾಪ್ತಿಯಲ್ಲಿ ಬರುತ್ತದೆ” ಎಂದು ನ್ಯಾ. ಭುಯಾನ್ ಪ್ರತಿಪಾದಿಸಿದ್ದಾರೆ.

ನ್ಯಾಯಾಂಗದ ಉತ್ತಮ ಆಡಳಿತಕ್ಕಾಗಿ ವರ್ಗಾವಣೆಗಳು ಆಗಬೇಕೇ ಹೊರತು, ಸರ್ಕಾರದ ವಿರುದ್ದ ನಿರ್ಣಯಗಳನ್ನು ತೆಗೆದುಕೊಂಡ ನ್ಯಾಯಾಧೀಶರನ್ನು ದಂಡಿಸುವ ಸಾಧನವಾಗಿ ವರ್ಗಾವಣೆಯನ್ನು ಬಳಸಬಾರದು ಎಂದು ನ್ಯಾ.ಭುಯಾನ್ ಅವರು ಒತ್ತಿ ಹೇಳಿದ್ದಾರೆ. ಕೇಂದ್ರದ ಕೋರಿಕೆಯ ಮೇರೆಗೆ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ನಿರ್ಧಾರದ ಮಾರ್ಪಾಡು “ಕಾರ್ಯಾಂಗವು ಕೊಲಿಜಿಯಂ ನಿರ್ಧಾರಗಳ ಮೇಲೆ ಪ್ರಭಾವ ಬೀರುತ್ತದೆ ಎಂಬುವುದನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...