Homeಚಳವಳಿದೆಹಲಿ ಮೆಟ್ರೋ: ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ

ದೆಹಲಿ ಮೆಟ್ರೋ: ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ

- Advertisement -
- Advertisement -

ಲೈಂಗಿಕ ಅಲ್ಪಸಂಖ್ಯಾತ (ಟ್ರಾನ್ಸ್‌ಜೆಂಡರ್) ಪ್ರಯಾಣಿಕರಿಗೆ ಮೆಟ್ರೋ ನಿಲ್ದಾಣಗಳಲ್ಲಿ ಪ್ರತ್ಯೇಕ ಶೌಚಾಲಯ ಬಳಕೆಗೆ ಅವಕಾಶ ನೀಡಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಇದುವರೆಗೆ ವಿಕಲಚೇತನ ಪ್ರಯಾಣಿಕರಿಗಾಗಿ ಇದ್ದಂತ ಶೌಚಾಲಯಗಳನ್ನು ಲೈಂಗಿಕ ಅಲ್ಪಸಂಖ್ಯಾತರಿಗೂ ಬಳಸಲು ಅವಕಾಶ ನೀಡಲಾಗಿದೆ.

ಲೈಂಗಿಕ ಅಲ್ಪಸಂಖ್ಯಾತ ವ್ಯಕ್ತಿಯು ತಾನು ಸ್ವಯಂ ಗುರುತಿಸಿಕೊಂಡಿರು ಲಿಂಗಾನುಸಾರ ಶೌಚಾಲಯವನ್ನು ಬಳಸಬಹುದು. ಪ್ರಸ್ತುತ, ದೆಹಲಿ ಮೆಟ್ರೋ ತನ್ನ ವಿವಿಧ ನಿಲ್ದಾಣಗಳಲ್ಲಿ 347 ಪ್ರತ್ಯೇಕ ಶೌಚಾಲಯಗಳನ್ನು ಹೊಂದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸುರಕ್ಷಿತ ಜಾಗವನ್ನು ಒದಗಿಸಲು ಮತ್ತು ಟ್ರಾನ್ಸ್‌ಜೆಂಡರ್‌ಗಳ ವಿರುದ್ಧ ಲಿಂಗ ತಾರತಮ್ಯವನ್ನು ತಡೆಗಟ್ಟುವ ಪ್ರಯತ್ನದಲ್ಲಿ, ದೆಹಲಿ ಮೆಟ್ರೋ ಅವರಿಗೆ ಪ್ರತ್ಯೇಕ ಶೌಚಾಲಯಗಳ ವ್ಯವಸ್ಥೆ ಮಾಡಿದೆ. ಇಲ್ಲಿಯವರೆಗೆ ವಿಕಲಚೇತನರಿಗೆ ಮಾತ್ರ ಮೀಸಲಿಟ್ಟಿದ ಶೌಚಾಲಯಗಳು ಇನ್ನು ಮುಂದೆ ಟ್ರಾನ್ಸ್‌ಜೆಂಡರ್‌ಗಳಿಗೂ ಸಹ ಲಭ್ಯವಿರುತ್ತದೆ” ಎಂದು ಡಿಎಂಆರ್‌ಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ: 1000 ಜನರಿಗೆ ಒಂದರಂತೆ ಶೌಚಾಲಯವೂ ಇಲ್ಲ ಎಂದ ವರದಿ

ಟ್ರಾನ್ಸ್‌ಜೆಂಡರ್‌ಗಳಿಗೆ ಮಾರ್ಗದರ್ಶನ ನೀಡಲು, ಇಂಗ್ಲಿಷ್ ಮತ್ತು ಹಿಂದಿ ಎರಡು ಭಾಷೆಗಲ್ಲಿ ವಿಕಲಚೇತನರಿಗೆ ಮತ್ತು ‘ಲೈಂಗಿಕ ಅಲ್ಪಸಂಖ್ಯಾತರಿಗೆ’ ಎಂಬ ಫಲಕಗಳನ್ನು ಚಿನ್ಹೆಗಳ ಮೂಲಕ ಎಲ್ಲಾ ಶೌಚಾಲಯಗಳ ಪಕ್ಕದಲ್ಲಿ ಅಳವಡಿಸಲಾಗಿದೆ.

ಫೆಬ್ರವರಿ 17 ರಂದು ಲೈಂಗಿಕ ಅಲ್ಪಸಂಖ್ಯಾತರಿಗೆ ಸಮರ್ಪಕ ಕಲ್ಯಾಣ ಕ್ರಮಗಳನ್ನು ಖಾತರಿಪಡಿಸುವ ಉದ್ದೇಶದಿಂದ ದೆಹಲಿ-ಎನ್‌ಸಿಆರ್‌ನಲ್ಲಿರುವ ಎಲ್ಲಾ ಕಚೇರಿಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಶೌಚಾಲಯ ಸೌಲಭ್ಯಗಳನ್ನು ನಿರ್ಮಿಸಲು, ಎಲ್ಲಾ ಇಲಾಖೆಗಳು, ಜಿಲ್ಲಾ ಅಧಿಕಾರಿಗಳು, ಪುರಸಭೆಗಳು ಮತ್ತು ಸ್ವಾಯತ್ತ ಸಂಸ್ಥೆಗಳಿಗೆ ನಿರ್ದೇಶನ ನೀಡಲಾಗಿತ್ತು.

“ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ಸಂರಕ್ಷಣೆ) ಕಾಯ್ದೆ 2019 ರ ಸೆಕ್ಷನ್ 22 ರ ನಿಬಂಧನೆಗಳಿಗೆ ಅನುಸಾರವಾಗಿ ಸಮರ್ಪಕ ಕಲ್ಯಾಣ ಕ್ರಮಗಳನ್ನು ಖಾತ್ರಿಪಡಿಸಿಕೊಳ್ಳಲು, ಎನ್‌ಸಿಟಿ ದೆಹಲಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತ ವ್ಯಕ್ತಿಗಳಿಗೆ ಎಲ್ಲಾ ಸಾರ್ವಜನಿಕ ಕಟ್ಟಡಗಳು, ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಮತ್ತು ಸರ್ಕಾರದ ಸ್ಥಳೀಯ ಸಂಸ್ಥೆಗಳಲ್ಲಿ ಪ್ರತ್ಯೇಕವಾಗಿ ಗುರುತಿಸಲಾದ ಸಾರ್ವಜನಿಕ ಶೌಚಾಲಯ ಸೌಲಭ್ಯಗಳನ್ನು ರಚಿಸಲು ನಿರ್ದೇಶಿಸಲಾಗಿದೆ ” ಎಂದು ಆದೇಶದಲ್ಲಿ ತಿಳಿಸಲಾಗಿತ್ತು

2021-22ರ ವಾರ್ಷಿಕ ಬಜೆಟ್‌ನಲ್ಲಿ, ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ರಾಷ್ಟ್ರ ರಾಜಧಾನಿಯಲ್ಲಿ ತೃತಿಯ ಲಿಂಗಕ್ಕೆ ಪ್ರತ್ಯೇಕವಾಗಿ ಸಾರ್ವಜನಿಕ ಶೌಚಾಲಯಗಳನ್ನು ಒದಗಿಸಲು ನಿರ್ಧರಿಸಿದೆ. ಎರಡು ವರ್ಷಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಶೌಚಾಲಯ ನಿರ್ಮಿಸಲು ಗಡುವು ನಿಗದಿಪಡಿಸಲಾಗಿದೆ.


ಇದನ್ನೂ ಓದಿ: ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಶೌಚಾಲಯ: ದೆಹಲಿ ಸರ್ಕಾರದ ನಿರ್ಧಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ಸರ್ಕಾರ 5ಜಿ ಮೆಗಾ ಹಗರಣವನ್ನು ರೂಪಿಸುತ್ತಿದೆ: ಎಎಪಿ ಮುಖಂಡ ಸಂಜಯ್ ಸಿಂಗ್

0
2ಜಿ ಸ್ಪೆಕ್ಟ್ರಮ್ ಪ್ರಕರಣದಲ್ಲಿ 2012ರ ತೀರ್ಪನ್ನು ಮಾರ್ಪಾಡು ಮಾಡುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ...