Homeಮುಖಪುಟನಜತ್ ಓಝ್ಕಾಯಾನ ಆರು ಪದ್ಯಗಳು

ನಜತ್ ಓಝ್ಕಾಯಾನ ಆರು ಪದ್ಯಗಳು

- Advertisement -
- Advertisement -

1.ಪ್ರೇಮ ಹುಲಿಯ ಅವತಾರ

ಪ್ರೇಮ,
ಹುಲಿಯ ಅವತಾರ.
ಅಪರೂಪದ ಬೆಕ್ಕು, ಚೆಲುವಿನ ಬನಿ,
ಚರ್ಮದ ಕೆಳಗೆ ಹುರಿಗಟ್ಟಿರುವ
ಸ್ನಾಯುಗಳ ಮಾಯಗಾರ.
ಬದುಕು-ಸಾವಿನ ತಕ್ಕಡಿಯ
ತನ್ನ ನಿಷ್ಠುರ ದವಡೆಯಲ್ಲಿ ಸರಿದೂಗಿಸುವ
ಗಂಭೀರ ವ್ಯಾಪಾರಿ.

ಪ್ರೇಮ ಊಹಾತೀತ,
ಇನ್ನೇನು ಜಾಡು ಸಿಕ್ಕಿತು ಎನ್ನುವಾಗಲೇ
ಹೆಜ್ಜೆ ಅಳಿಸಿ ಹಾಕಿಬಿಡುವ ಚತುರ ಚೋರ
ಕಾಯುವ ನಾಟಕವಾಡುವ ವೇಷಧಾರಿ,
ಕೊಲ್ಲಲು ಹಾರುವ ತನಕ
ಸದ್ದು ಮಾಡದೇ ಸುಮ್ಮನಿದ್ದುಬಿಡುವ ತಂತ್ರಗಾರ,
ಎಂಥ ಕಾಡಿನ ಗರ್ಭದಲ್ಲೂ
ಬೇಟೆಯ ವಾಸನೆ
ಕ್ಷಣಮಾತ್ರದಲ್ಲಿ ಪತ್ತೆಹಚ್ಚಿಬಿಡುವ ಚಾಣಾಕ್ಷ ಗೂಢಚಾರ.

ಸ್ವರ್ಗ, ನರಕ ಎರಡರಲ್ಲೂ
ಪ್ರೇಮದ್ದೇ ಸರ್ಕಾರ.
ಬಿಸಿ ಉಸಿರಿನಿಂದ ಜೀವ ತುಂಬುತ್ತದೆಯಾದರೂ
ಗರ್ಜಿಸಿಯೇ ಅಸ್ತಿತ್ವ ಘೋಷಣೆ
ಹರಿತ ಉಗುರುಗಳ ನಡುವೆಯೇ ಲಲ್ಲೆವಾತು.

ಪ್ರೇಮ, ಭಯಂಕರ.
ಎಂಥ ಧೈರ್ಯಶಾಲಿಗಳೂ
ಒಂದರೆಘಳಿಗೆ ಬೆಚ್ಚಿ ಬೀಳುತ್ತಾರೆ.

ನನ್ನ ಮಾತು ಕೇಳಿ, ಈಗಲೇ ಮನೆಗೆ ಹೋಗಿ
ಆಯುಧಗಳನ್ನು ಹರಿತ ಮಾಡಿಟ್ಟುಕೊಳ್ಳಿ
ಇದು ಬೇಟೆಯಾಡಲೇ ಬೇಕಾದಂಥ ವ್ಯಾಘ್ರ.
(Love is a Tiger)

*****

2.ಹುಚ್ಚು ಹರಟೆ

ನನ್ನ ಪ್ರಾರ್ಥನೆ ಆಗಾಗ,
ತುಣುಕುಗಳಲ್ಲಿ, ದಿನವಿಡೀ,
ಅಂಥ ಮಹತ್ವದ್ದೇನಲ್ಲ, ಬಹುತೇಕ ಹರಟೆ.

ಭಗವಂತನಿಗಾಗಿ
ನಾನು ಹಾಡುವ ಹಾಡುಗಳು
ನೂರಕ್ಕೆ ನೂರು ಸಿಲ್ಲಿ,
ಪ್ರಾರ್ಥನೆ, ಅಪ್ಪಟ ಗಾಸಿಪ್
ಹಾಸಿಗೆಯೊಳಗಿನ ಗುಸುಗುಸು.

ಗಂಭೀರವಾಗಿರಲೇಬೇಕೆ?
ಭಗವಂತನೊಡನೆಯ ನನ್ನ ವ್ಯವಹಾರ
ತಲೆಹಿಡುಕತನಕ್ಕಿಂತ ಕೀಳೆ?

ಪ್ರಾರ್ಥನೆ
ಗೆಳೆಯರ ನಡುವಿನ ಕಾಡು ಹರಟೆ
ಭಗವಂತನನ್ನು
ಬೋರು ಹೊಡೆಸುವುದಕ್ಕಿಂತ
ಸಿಟ್ಟಿಗೇಳಿಸುವುದೇ ಒಳ್ಳೆಯ ಚೌಕಾಸಿ.
(Silly chatter)

********

3. ಪ್ರೇಮದಲ್ಲಿ ಮುಳುಗಿರುವ ಮನುಷ್ಯ

ಪ್ರೇಮದಲ್ಲಿ ಮುಳುಗಿರುವ ಮನುಷ್ಯ
ತನ್ನ ಪ್ರೇಮವನ್ನು ಜಾಹೀರು ಮಾಡುವುದು
ಎರಡು ರೀತಿಯಲ್ಲಿ

ಹಾಡಿ ಹಾಡಿ ಹೇಳುತ್ತಾನೆ
ಮನೆಯ ಮಾಳಿಗೆ ಮೇಲೆ ನಿಂತು
ಊರಿಗೆಊರೇ ಹುಚ್ಚೆದ್ದು ಕುಣಿಯುವಂತೆ,
ಇಲ್ಲಾ
ಯಾರಿಗೂ ಕಾಣದಂತೆ
ಕದ್ದ ಒಡವೆಯ ಕಣ್ಣಿಗೊತ್ತಿಕೊಂಡು ಮುಚ್ಚಿಡುವಂತೆ ಕಳ್ಳ
ಬಚ್ಚಿಟ್ಟುಕೊಳ್ಳುತ್ತಾನೆ ಎದೆಯಲ್ಲಿ

ನಾನು ಹಾಗೆಲ್ಲ
ಮಾಳಿಗೆ ಏರಿ ಹಾಡುವುದಿಲ್ಲ
ಅದು ಜೈಲಿನ ಹಾದಿ, ಗೊತ್ತು ನನಗೆ
ಬದಲಾಗಿ
ಗಲ್ಲ ಉಬ್ಬಿಸಿ ಓಡಾಡುತ್ತೇನೆ
ಊರ ತುಂಬ
ಬಾಯಲ್ಲಿ ಉಂಡಿ ತುಂಬಿಕೊಂಡ
ತುಂಟ ಹುಡುಗನಂತೆ

ಸಿಕ್ಕಿಹಾಕಿಕೊಂಡರೆ ಮಾತ್ರ
ಉಸುರುತ್ತೇನೆ ಅವರ ಕಿವಿಯಲ್ಲಿ
ಕುಣಿದಾಡುತ್ತ, ಕಣ್ಣು ಮಿಟುಕಿಸುತ್ತ
ನನ್ನ ಪ್ರೇಮ.
(When a person falls in love)

******

4 ಭಗವಂತನ ಪರಿಪೂರ್ಣತೆ

ಇವತ್ತು
ಒಬ್ಬ ಮನುಷ್ಯ ಸಿಕ್ಕಿದ್ದ
ಭಗವಂತನ ಪರಿಪೂರ್ಣತೆಯ ಬಗ್ಗೆ
ಮಾತನಾಡುತ್ತಲೇ ಹೋದ.

ಹೇಗೆ ಆತ
ಅಪಾರ, ನಿರ್ವಿಕಾರ, ನಿರಾಕಾರ, ನಿರ್ಗುಣ
ಮುಂತಾಗಿ.
ಅವನ ಮಾತುಗಳಿಗೆ ಕಾವ್ಯದ ಸ್ಪರ್ಶವಿತ್ತು,
ಕೈಗೆ ನಿಲುಕಲಾರದ, ಕಲ್ಪನಾತೀತ ಭಾವವೊಂದನ್ನು
ವಿವರಿಸುವ ಉನ್ಮಾದವಿತ್ತು.

ನನಗೆ ಗೊತ್ತಿಲ್ಲ ಈ ಮನುಷ್ಯ
ಯಾರ ಪ್ರೇಮದಲ್ಲಿ ಹೀಗೆ ಮಗ್ನನಾಗಿದ್ದಾನೆಂದು,
ಆದರೆ ಒಂದಂತೂ ನಿಜ
ಅದು ಖಂಡಿತ ಭಗವಂತನಂತೂ ಆಗಿರಲಾರ.

ನನಗೆ ಗೊತ್ತಿರುವ ಭಗವಂತ
ನೆಲದಿಂದ ಒಂದು ಹೆಜ್ಜೆಯನ್ನೂ ಮೇಲಿಟ್ಟವನಲ್ಲ,
ಅವ ಪ್ರತಿದಿನ ನಾನು ರಸ್ತೆಯಲ್ಲಿ ಒದೆಯುತ್ತ ಓಡಾಡುವ
ಮಣ್ಣಿನ ಗುಪ್ಪೆಗಳ ನಡುವೆ ಹಾಸು ಹೊಕ್ಕಾದವನು.
ನನ್ನ ಭಗವಂತ ಪರಿಪೂರ್ಣನಲ್ಲ,
ಜಗ ಮೊಂಡ, ಅಸಾಧ್ಯ ಹುಂಬ,
ಒಂದು ಮಾತಿಗೆ ಹತ್ತು ಮಾತನಾಡುವವ,
ಮಗ್ಗಲ ಮುಳ್ಳು.

ಪ್ರಾರ್ಥನೆಗಾಗಿ ಬಾಗಿದಾಗ
ನನ್ನ ಕತ್ತಿಗೆ ಮುತ್ತಿಡುವ ಭಗವಂತ
ನಿಲುಕಲಾರದವನೆನಲ್ಲ,
ತೋಳಿಗೆ ಸಿಕ್ಕರೆ ಮುರಿದು ಮುದ್ದೆ ಮಾಡುವುದಾಗಿ
ಹೆದರಿಸುವ ಭಯಂಕರ ಪೋಲಿ ಆಸಾಮಿ.
ನಿರ್ವಿಕಾರ? ಹಾಗೆಂದರೇನು?
ಬಹುಶಃ ಭಾವನೆಗಳಿಲ್ಲದವನು.

ಆದರೆ ನಮ್ಮ ಪ್ರೇಮ ಎಂಥದೆಂದರೆ

ನಾನು ಪಶ್ಚಿಮಕ್ಕೆ ಮುಖ ಮಾಡಿ
ತಲೆ ಬಾಗಿಸುವುದಷ್ಟೇ ತಡ
ಎಲ್ಲಿ ಈ ಭಗವಂತ ತನ್ನ ತುಟಿಗಳಿಂದ
ಕಚಗುಳಿ ಇಡಲು ಶುರು ಮಾಡುತ್ತಾನೋ
ಎಂದು ಹೆದರಿ
ಅವನನ್ನು ದೂರ ತಳ್ಳುತ್ತೇನೆ.
ನನ್ನ ಮಾತು ಕೇಳಿ.
ಇನ್ನೆಂದೂ ನನ್ನ ಮುಂದೆ
ಭಗವಂತನ ಪರಿಪೂರ್ಣತೆಯ ಬಗ್ಗೆ ಮಾತಾಡಬೇಡಿ,
ಭಗವಂತನ ಬಗ್ಗೆ ತಿಳಿದುಕೊಳ್ಳಲೇಬೇಕು ಎನಿಸಿದರೆ
ಎಚ್ಚರವಿದ್ದಾಗ ಅವನು ಸೃಷ್ಟಿಮಾಡುವ
ಫಜೀತಿಗಳಿಗೂ ತಯಾರಾಗಿ.
(The perfection of Allah)

*******

5. ಹೆಣ

ಇಂದು ಮುಂಜಾನೆ
ಶಹರದಲ್ಲಿ ಏನೋ ಕೋಲಾಹಲ.
ಗೇಟ್ ಹತ್ತಿರ ಒಂದು ಶವ ಪತ್ತೆಯಾಗಿದೆ.
ಹೆಣದ ತಪಾಸಣೆ ಮಾಡುತ್ತಿದ್ದಾನೆ
ಕಾವಲುಗಾರ.
ಅಳುಕಿನಿಂದಲೇ ಸೇರಿಕೊಳ್ಳುತ್ತೇನೆ
ಶವದ ಸುತ್ತ ನೆರೆದಿರುವ ಗುಂಪನ್ನು.

ದಿಗಿಲಾಯಿತು,
ಹೃದಯವೇ ಬಾಯಿಗೆ ಬಂದ ಹಾಗಾಯಿತು
ನನಗೆ ಗೊತ್ತು – ಇದು ಯಾರೆಂದು.

ಬಹುಶಃ
ಪೂರ್ವದ ತಣ್ಣನೆಯ ಗಾಳಿ
ಆವರಿಸಿಕೊಂಡು ಮೈ ಮರಗಟ್ಟುವ ಮುನ್ನ
ಒಳಗೆ ಸೇರಿಕೊಂಡು ಬಿಡಬೇಕೆಂದು
ಅವಸರದಿಂದ ಮುನ್ನುಗ್ಗುವಾಗ ಸತ್ತಿರಬಹುದು ಅಥವಾ

ಯಾರಿಗೂ ಹೇಳದೇ ಬಚ್ಚಿಟ್ಟುಕೊಂಡ
ಅಪಾರ ಪ್ರೇಮದ ಒತ್ತಡ ತಾಳಲಾರದೆ
ಎದೆಯೊಡೆದುಕೊಂಡು.

ಹೆಣದ ಹತ್ತಿರ ಹೋಗಲಿಲ್ಲ ನಾನು
ಹೆದರಿಕೆ, ಈ ಅಪರಾಧದಲ್ಲಿ
ನಾನೂ ಭಾಗಿಯಾಗಿರಬಹುದೆಂಬ
ಅನುಮಾನ.

ಯಾರ ಹೆಣ ಎಂದು ಗುರುತಿಸಲು
ಮುಖ ನೋಡುವ ಅಗತ್ಯ ನನಗಿಲ್ಲ,
ಅದು
ದೇವರ ಹೆಣ.

ನಾನೂ ಅವನ ಹಾಗೆಯೇ ಸೆಟೆದ
ತಣ್ಣನೆಯ ಶರೀರವಾಗಿಬಿಡುತ್ತಿದ್ದೆ
ಹಾಗೆಂದು ಹೇಳಿದ್ದರೆ
ಕೂಗಿ.
(The Corpse)

******

6. ಪ್ರೇಮಿಗಳ ಸಾವು

ಒಂದು ದಿನ
ಪುರಾತನ ಅರಮನೆಯ
ಪಾಳುಬಿದ್ದ ಅವಶೇಷಗಳ ನಡುವೆ
ಓಡಾಡುತ್ತ ದಣಿದು
ಖರ್ಜೂರದ ಮರವೊಂದರ ಕೆಳಗೆ
ಸ್ವಲ್ಪ ಹೊತ್ತು ಕಾಲು ಚಾಚಿದೆ ಹಾಯಾಗಿ

ಮನೆಯಿಂದ ಕಟ್ಟಿಕೊಂಡು ಬಂದಿದ್ದ
ಬುತ್ತಿ ಗಂಟು ಬಿಚ್ಚಿ, ಊಟ ಮುಗಿಸಿ
ಬೀಸುತ್ತಿದ್ದ ತಂಗಾಳಿಗೆ ಮೈಯೊಡ್ಡಿ
ಕಣ್ಣು ಮುಚ್ಚಿಕೊಳ್ಳುತ್ತಿದ್ದಂತೆಯೇ
ನನ್ನ ಕೈಗಳನ್ನು ನೆಕ್ಕತೊಡಗಿತು
ಜಿಂಕೆಯೊಂದು

ಬಿಳಚಿಕೊಂಡಿತ್ತು ಅದರ ಮೂಗು ಮುಖ
ಏನೋ ಒಂದು ಬಿಗಿತ ಕತ್ತಿನ ಚಲನೆಯಲ್ಲಿ

ಕಣ್ಣು ಬಿಟ್ಟರೆ ಜಿಂಕೆ ಅಂಜಬಹುದೆಂದು
ಎಲ್ಲ ಗಮನಿಸುತ್ತಿದ್ದೆ

ಹಾಗೆ ಅಲ್ಲಾಡದೇ ಕಿರುಗಣ್ಣಿನಲ್ಲಿಯೇ
ನನ್ನ ದೇಹವನ್ನೊಮ್ಮೆ ಮೂಸಿ ನೋಡಿ
ಮೊಣಕಾಲ ಮೇಲೆ ಬಗ್ಗಿ
ತನ್ನ ತಲೆಯನ್ನ ನನ್ನ ತೊಡೆಗಳ ಮೇಲಿಟ್ಟು
ಒರಗಿಕೊಂಡಿತು ಜಿಂಕೆ

ಒಂದು ಜೊತೆ ಕಪ್ಪುಕಣ್ಣುಗಳು
ನನ್ನ ಕಣ್ಣುಗಳೊಡನೆ ಮಾತಿಗಿಳಿದವು,
ನಿಧಾನವಾಗಿ ಆ ಕಣ್ಣೊಳಗಿನ ಬೆಳಕು ಮಾಯವಾಗುತ್ತ, ತೀರಿಯೇ ಹೋದಳು
ಆ ಕಪ್ಪು ಕಣ್ಣಿನ ಒಡತಿ.

ಒಂದಿಷ್ಟು ಅದ್ಭುತ ದಿನಗಳ ಪ್ರೇಮದ ನಂತರ
ಪ್ರೇಮಿಗಳು ಸಾಯಲು ಬಯಸೋದು ಹೀಗೆ,
ಪ್ರೇಮಿಯ ಕೈ
ತನ್ನ ಗಲ್ಲ ನೇವರಿಸುತ್ತಿರುವಾಗ
ಕಣ್ಣೊಳಗಿನ ಬೆಳಕು ನಿಧಾನವಾಗಿ
ಆರಿ ಹೋಗುವಂತೆ.
ನಜತ್ ಹೇಳುತ್ತಾನೆ….

ಆದರೆ ನೀವು ಹಾಗೆ
ಪ್ರೇಮಿಯ ತೊಡೆಯ ಮೇಲೆ ತಲೆಯಿಟ್ಟು
ಕಣ್ಣು ಮುಚ್ಚಿಕೊಳ್ಳಲು ಕಾಯಬೇಕಿಲ್ಲ
ಸಾವು ಬರುವ ತನಕ.
(How lovers long to die)

*********

ನಜತ್ ಓಝ್ಕಾಯಾ 14 ನೇ ಶತಮಾನದ ಸೂಫಿ ಕವಿ. ಜಲಾಲುದ್ದೀನ್ ರೂಮಿಯ ಊರು ಕೋನ್ಯಾದಲ್ಲಿಯೇ ಇದ್ದವನು. ಜಾನ್ ಮಾರ್ಬಿ ಎನ್ನುವ ಇಂಗ್ಲೀಷ್ ಕವಿ, ಅನುವಾದಕ ನಜತ್‌ನ ಕವಿತೆಗಳನ್ನ Salvation of the true rock ಎನ್ನುವ ಅಂಥಾಲಜಿಯಲ್ಲಿ ಸಂಗ್ರಹಿಸಿದ್ದಾನೆ.

(ಕನ್ನಡಕ್ಕೆ): ಚಿದಂಬರ ನರೇಂದ್ರ

ಚಿದಂಬರ ನರೇಂದ್ರ

ಚಿದಂಬರ ನರೇಂದ್ರ
ಕವಿ, ಅನುವಾದಕ. ’ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’, ’ಹೂಬಾಣ’, ’ಗಾಳೀ ಕೆನೆ’ ಪ್ರಕಟಿತ ಕವನ ಸಂಕಲನಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..’; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

"ಚಾಲ್ತಿಯಲ್ಲಿರುವ ಶೇ.50ರ ಮೀಸಲಾತಿಯ ಅನ್ವಯ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಆದರೆ, ಶೇ.56 ಕ್ಕೆ ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಬಾರದು" ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌...

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾದ ಸರ್ಕಾರ : ವಿದ್ಯಾರ್ಥಿ ಸಂಘಟನೆಗಳಿಂದ ಆಕ್ರೋಶ

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಎಡ ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ. ಬುಧವಾರ (ಜ.21) ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಎಐಎಸ್ಎಫ್,...

ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ನಿರಾಕರಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಜನವರಿ 22 ರಿಂದ ನಡೆಯಲಿರುವ ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲು ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬುಧವಾರ ನಿರಾಕರಿಸಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಗೆಹ್ಲೋಟ್ ಅವರೊಂದಿಗೆ...

ಒಡಿಶಾ| ಪಾದ್ರಿ ಮೇಲೆ ಗುಂಪು ಹಲ್ಲೆ ನಡೆಸಿ ಅವಮಾನ; ಎರಡು ವಾರವಾದರೂ ಆರೋಪಿಗಳನ್ನು ಬಂಧಿಸದ ಪೊಲೀಸರು

ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ಬಜರಂಗದಳ ಸದಸ್ಯರಿಂದ ಕ್ರೂರವಾಗಿ ಹಲ್ಲೆಗೊಳಗಾಗಿ ಸಾರ್ವಜನಿಕವಾಗಿ ಅವಮಾನಕ್ಕೆ ಒಳಗಾದ ಕ್ರಿಶ್ಚಿಯನ್ ಪಾದ್ರಿಯೊಬ್ಬರು, ತನ್ನ ಮೇಲೆ ದಾಳಿ ಮಾಡಿದವರನ್ನು ಕ್ಷಮಿಸಲು ನಿರ್ಧರಿಸಿದ್ದಾರೆ. ಘಟನೆ ನಡೆದು ಎರಡು ವಾರಗಳಿಗಿಂತ ಹೆಚ್ಚು ಕಾಲ...

ಕೆನಡಾ: ಸುಲಿಗೆ ಪ್ರಕರಣಗಳಲ್ಲಿ 111 ವಿದೇಶಿ ಪ್ರಜೆಗಳ ಪಾತ್ರದ ಬಗ್ಗೆ ತನಿಖೆ: ಹೆಚ್ಚಿನವರು ಪಂಜಾಬ್ ನಿಂದ ಬಂದ ಭಾರತೀಯರೆಂದು ವರದಿ  

ಚಂಡಿಗ್ರಾ: ಬ್ರಿಟಿಷ್ ಕೊಲಂಬಿಯಾ ಸುಲಿಗೆ ಕಾರ್ಯಪಡೆಯು ಕೆಳ ಮೇನ್‌ಲ್ಯಾಂಡ್‌ನಲ್ಲಿನ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಂಕಿಸಲಾಗಿರುವ 111 ವಿದೇಶಿ ಪ್ರಜೆಗಳ ತನಿಖೆ ನಡೆಸುತ್ತಿದೆ. ಇದರಲ್ಲಿ ಹೆಚ್ಚಿನವರು ಪಂಜಾಬ್‌ನಿಂದ ಬಂದಿರುವ ಭಾರತೀಯ...

ವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

ಬಸ್‌ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಕೇರಳದ ಕೋಝಿಕ್ಕೋಡ್ ಪೊಲೀಸರು ಬಂಧಿಸಿದ್ದಾರೆ. 42 ವರ್ಷದ ಸೇಲ್ಸ್...

ಪ್ರಿಯಕರನೊಂದಿಗೆ ವಾಸಿಸಲು ‘ಸುಳ್ಳು ಗೋಹತ್ಯೆ ಪ್ರಕರಣ’ದಲ್ಲಿ ಗಂಡನನ್ನು ಸಿಲುಕಿಸಿದ ಪತ್ನಿ

ತನ್ನ ಪ್ರಿಯಕರನೊಂದಿಗೆ ವಾಸಿಸಲು ವಿವಾಹಿತ ಮಹಿಳೆಯೊಬ್ಬಳು ಮಾಡಿದ ದುಷ್ಕೃತ್ಯವೊಂದರಲ್ಲಿ ಆಕೆಯ ಪತಿ ಸುಳ್ಳು ಗೋಹತ್ಯೆ ಪ್ರಕರಣಗಳಲ್ಲಿ ಎರಡು ಬಾರಿ ಪೊಲೀಸರಿಂದ ಬಂಧನಕ್ಕೆ ಒಳಗಾಗಬೇಕಾದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಇದೇ ಪ್ರಕರಣದ...

ಎಲ್‌ಐಸಿ ಕಚೇರಿ ಬೆಂಕಿ ಪ್ರಕರಣಕ್ಕೆ ತಿರುವು : ಅಕ್ರಮ ಮುಚ್ಚಿ ಹಾಕಲು ಸಹೋದ್ಯೋಗಿಯಿಂದ ವ್ಯವಸ್ಥಾಪಕಿಯ ಕೊಲೆ ಎಂದ ತನಿಖೆ

ಡಿಸೆಂಬರ್‌ನಲ್ಲಿ ಮಧುರೈನ ಜೀವ ವಿಮಾ ನಿಗಮ (ಎಲ್‌ಐಸಿ) ಕಚೇರಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಿರಿಯ ಮಹಿಳಾ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, ಆರಂಭದಲ್ಲಿ ನಂಬಿದಂತೆ ಅದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ತಮಿಳುನಾಡು ಪೊಲೀಸರು ತೀರ್ಮಾನಿಸಿದ್ದಾರೆ....

‘ಅಕ್ರಮ ಗಣಿಗಾರಿಕೆ ಸರಿಪಡಿಸಲಾಗದ ಹಾನಿಗೆ ಕಾರಣವಾಗಬಹುದು’: ಅರಾವಳಿ ಸಮಗ್ರ ಪರೀಕ್ಷೆಗೆ ತಜ್ಞರ ಸಮಿತಿ ರಚಿಸಲು ಸುಪ್ರೀಂ ಸೂಚನೆ

ನವದೆಹಲಿ: ಅಕ್ರಮ ಗಣಿಗಾರಿಕೆಯಿಂದ ಸರಿಪಡಿಸಲಾಗದ ಹಾನಿ ಉಂಟಾಗಬಹುದು ಎಂದು ಗಮನಿಸಿದ ಸುಪ್ರೀಂ ಕೋರ್ಟ್, ಅರಾವಳಿಯಲ್ಲಿ ಗಣಿಗಾರಿಕೆ ಮತ್ತು ಸಂಬಂಧಿತ ಸಮಸ್ಯೆಗಳ ಸಮಗ್ರ ಪರೀಕ್ಷೆಯನ್ನು ಕೈಗೊಳ್ಳಲು ಡೊಮೇನ್ ತಜ್ಞರನ್ನು ಒಳಗೊಂಡ ತಜ್ಞರ ಸಮಿತಿಯನ್ನು ರಚಿಸುವುದಾಗಿ...

ಮೋದಿ ಕಾರ್ಯಕ್ರಮದಲ್ಲಿ ಸಮೋಸ ವಿತರಣೆಗೆ 2 ಕೋಟಿ ರೂ. ಖರ್ಚು : ಬಿಜೆಪಿ ವಿರುದ್ಧ ಕೇಜ್ರಿವಾಲ್ ಆರೋಪ

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಗುಜರಾತ್‌ನ ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ಕಾರ್ಯಕ್ರಮಕ್ಕೆ 50 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್...