ಕಳೆದ ಐದು ದಿನಗಳಿಂದ ಕರ್ನಾಟಕದಲ್ಲಿ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರವನ್ನು ವಾಪಸ್ ಪಡೆದಿದ್ದಾರೆ. ಇಂದು ಸಂಜೆಯಿಂದಲೇ ಎಲ್ಲಾ ಬಸ್‌ಗಳ ಸಂಚಾರ ಆರಂಭವಾಗಲಿದೆ.
ಸಾರಿಗೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ಸಂಬಂಧ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ನಿನ್ನೆ ನಡೆದ ಸಂಧಾನ ಸಭೆಯಲ್ಲಿ ಸರ್ಕಾರ ಭರವಸೆ ನೀಡಿತ್ತು. ಆದರೆ ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವವರೆಗೂ ಬಸ್ ತೆಗೆಯುವುದಿಲ್ಲ ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರು ನಿನ್ನೆ ಹೇಳಿದ್ದರು.
ಇದನ್ನೂ ಓದಿ: ‘ಶೂದ್ರ’ ಪದಬಳಕೆ; ಪೆರಿಯಾರ್ ಹೇಳಿಕೆ ಉಲ್ಲೇಖಿಸಿದ ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ
ಸಂಧಾನ ಸಭೆ ಅಂತ್ಯಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್, “ನಮ್ಮ ಬಹುತೇಕ ಬೇಡಿಕೆಗಳನ್ನು ಸರ್ಕಾರ ಒಪ್ಪಿಕೊಂಡಿದೆ. ಸೌಹಾರ್ದಯುತ ತೀರ್ಮಾನ ಆಗಿದೆ. ಮುಂದಿನ ನಿರ್ಧಾರವನ್ನು ಸ್ವಾತಂತ್ರ್ಯ ಉದ್ಯಾನದ ಪ್ರತಿಭಟನಾ ಸ್ಥಳದಲ್ಲಿ ಪ್ರಕಟಿಸಲಾಗುವುದು” ಎಂದಿದ್ದರು.
ನಂತರ ತಮ್ಮ ನಿರ್ಧಾರವನ್ನು ಪ್ರಕಟಿಸಿದ ಪ್ರತಿಭಟನಾ ನಿರತ ಸಾರಿಗೆ ನೌಕರರು, ಪ್ರತಿಭಟನೆಯನ್ನು ಮುಂದುವರೆಸಲು ನಿರ್ಧರಿಸಿದ್ದರು.
ಇದನ್ನೂ ಓದಿ: ಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬಿಡುಗಡೆಯಾಗಿದ್ದೆಷ್ಟು? – ವಿವರ ಇಲ್ಲಿದೆ!
“ತಮ್ಮನ್ನು ಸರ್ಕಾರಿ ನೌಕರರು ಎಂದು ಘೋಷಿಸುವವರೆಗೂ ಬಸ್ ತೆಗೆಯುವುದಿಲ್ಲ. ಸರ್ಕಾರ ನೀಡಿರುವ ಭರವಸೆಗಳ ಬಗ್ಗೆ ಲಿಖಿತ ಒಪ್ಪಿಗೆ ನೀಡಿ, ಅಧಿಕೃತವಾಗಿ ಘೋಷಿಸಲಿ” ಎಂದು ಸಾರಿಗೆ ನೌಕರರು ಪಟ್ಟು ಹಿಡಿದಿದ್ದರು.
ಪ್ರತಿಭಟನಾ ಸ್ಥಳದಲ್ಲಿ ಮಾತನಾಡಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, “ನಾವು ಕೊಟ್ಟಿರುವ ಸಾವಿರಾರು ಮನವಿಗಳು ಇಂದು ಕಸದಬುಟ್ಟಿಯಲ್ಲಿವೆ. ಸರ್ಕಾರ ಪೊಳ್ಳು ಭರವಸೆಗಳನ್ನು ನೀಡುವುದನ್ನು ಬಿಡಬೇಕು. ಸರ್ಕಾರದ ಭರವಸೆಗಳು ಘೋಷಣೆಯಾಗಲಿ. ಇಲ್ಲದಿದ್ದರೆ ನಾಳೆಯೂ ಪ್ರತಿಭಟನೆ ಮುಂದುವರಿಯುತ್ತದೆ” ಎಂದು ಹೇಳಿದ್ದರು.
ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ 25,000 ಸೇನಾ ಪದಕಗಳನ್ನು ಹಿಂದಿರುಗಿಸಲು ಮುಂದಾದ ಮಾಜಿ ಸೈನಿಕರು!
ಬಳಿಕ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರೊಂದಿಗೆ ಕೋಡಿಹಳ್ಳಿ ಚಂದ್ರಶೇಖರ್ ಮಾತುಕತೆ ನಡೆಸಿದರು. ನಂತರವೂ ನೌಕರರು ಮುಷ್ಕರ ಹಿಂಪಡೆಯಲು ಒಪ್ಪಲಿಲ್ಲ. ಒಂದು ಗಂಟೆಗೂ ಹೆಚ್ಚು ಕಾಲ ಮನವೊಲಿಕೆ ನಡೆಸಿದ ಕೋಡಿಹಳ್ಳಿ ಚಂದ್ರಶೇಖರ್, ಅಂತಿಮವಾಗಿ ಮುಷ್ಕರ ವಾಪಸ್ ಪಡೆಯುವ ನಿರ್ಧಾರ ಪ್ರಕಟಿಸಿದರು.
ಮುಷ್ಕರ ವಾಪಸ್ ಪಡೆದ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಹೆಚ್ಚಿನ ಸಂಖ್ಯೆಯ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನಿಗಮ ಸೇರಿದಂತೆ ಇತರೆ ನಾಲ್ಕೂ ಸಾರಿಗೆ ನಿಗಮಗಳಲ್ಲಿ ಬಸ್‌ಗಳ ಸಂಚಾರಕ್ಕೆ ಭರದ ಸಿದ್ಧತೆ ಆರಂಭವಾಗಿದೆ.
ಇದನ್ನೂ ಓದಿ:ದನ ಕಳ್ಳತನ: ಬಜರಂಗ ದಳದ ಮಾಜಿ ಮುಖಂಡನ ಬಂಧನ


