Homeಮುಖಪುಟಹೈಕೋರ್ಟ್ ತರಾಟೆ: ಸಾರಿಗೆ ನೌಕರರ ಮುಷ್ಕರ ವಾಪಸ್

ಹೈಕೋರ್ಟ್ ತರಾಟೆ: ಸಾರಿಗೆ ನೌಕರರ ಮುಷ್ಕರ ವಾಪಸ್

- Advertisement -
- Advertisement -

ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಅಡಿ ಬಂಧಿಸಲು ಪೊಲೀಸರಿಗೆ ನಿರ್ದೇಶಿಸಲಾಗುವುದು, ನ್ಯಾಯಾಂಗ ನಿಂದನೆ ಅಡಿ ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್‌ ಎಚ್ಚರಿಸಿದ ಬಳಿಕ, ಸಾರಿಗೆ ನೌಕಕರು ತಮ್ಮ ಮುಷ್ಕರವನ್ನು ಮಂಗಳವಾರ ಸಂಜೆ (ಆ.5) ವಾಪಸ್ ಪಡೆದಿದ್ದಾರೆ.

ಹಿಂಬಾಕಿ ಪಾವತಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಎಸ್ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಘೋಷಣೆ ಮಾಡಿದ್ದ ಅನಿರ್ಧಾಷ್ಟವಧಿ ಮುಷ್ಕರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬೆಂಗಳೂರಿನ ಜೆ ಸುನೀಲ್‌ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ಮಂಗಳವಾರ ನಡೆಸಿತು.

ರಾಜ್ಯ ಸರ್ಕಾರ ಜುಲೈ 17ರಂದು ಎಸ್ಮಾ ಜಾರಿ ಮಾಡಿದ್ದು, ಕಾಯ್ದೆಯ ನಿಬಂಧನೆಯ ಪ್ರಕಾರ ಯೂನಿಯನ್‌ ಕರೆ ನೀಡಿರುವ ಮುಷ್ಕರವು ಅಕ್ರಮವಾಗಿದೆ. ಹೀಗಾಗಿ, ದಂಡನೀಯ ಕ್ರಮಕೈಗೊಳ್ಳಬಹುದಾಗಿದೆ. ನಿನ್ನೆ (ಸೋಮವಾರ) ಮುಷ್ಕರಕ್ಕೆ ತಡೆ ನೀಡಿರುವ ಮಧ್ಯಂತರ ಆದೇಶವನ್ನು ಮುಂದಿನ ವಿಚಾರಣೆವರೆಗೆ ವಿಸ್ತರಿಸಲಾಗಿದೆ” ಎಂದು ನ್ಯಾಯಾಲಯವು ಆದೇಶಿಸಿದೆ.

ಸಂಧಾನಕ್ಕೆ ಒಳಪಟ್ಟು ಮುಷ್ಕರವನ್ನು ವಾಪಸ್ ಪಡೆಯಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಸಿಬ್ಬಂದಿ, ಕೆಲಸಗಾರರ ಒಕ್ಕೂಟ (ಐಐಟಿಯುಸಿ) ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಅಖಿಲ ಕರ್ನಾಟಕ ರಾಜ್ಯ ರಸ್ತೆ ನೌಕರರ ಮಹಾಮಂಡಳಿ; ಉಳಿದ ಯೂನಿಯನ್‌ಗಳನ್ನು ಪ್ರತ್ಯೇಕವಾಗಿ ಪಕ್ಷಕಾರರನ್ನಾಗಿಸಲು ಅರ್ಜಿದಾರರಿಗೆ ಆದೇಶಿಸಿರುವ ನ್ಯಾಯಾಲಯವು, ಇಂದಿನ (ಮಂಗಳವಾರ) ಆದೇಶವನ್ನು ಅವರಿಗೆ ತಲುಪಿಸುವಂತೆ ನಿರ್ದೇಶಿಸಿ, ವಿಚಾರಣೆಯನ್ನು ಆಗಸ್ಟ್‌ 7ಕ್ಕೆ ಮುಂದೂಡಿದೆ.

ಇದಕ್ಕೂ ಮುನ್ನ ಪೀಠವು, ಮುಷ್ಕರಕ್ಕೆ ಕರೆ ನೀಡಿರುವ ಯೂನಿಯನ್‌ಗಳ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಹೇಳಿದೆ. ಎಸ್ಮಾ ಜಾರಿಯಾಗಿರುವಾಗ ಮುಷ್ಕರ ನಡೆಸಿರುವುದು ಕಾನೂನುಬಾಹಿರವಾಗಿದೆ. ಎಸ್ಮಾ ಅಡಿ ಮುಷ್ಕರಕ್ಕೆ ಬೆಂಬಲ ನೀಡುವ ಯಾರನ್ನು ಬೇಕಾದರೂ ಪೊಲೀಸರು ಬಂಧಿಸುವ ಅಧಿಕಾರ ಹೊಂದಲಿದ್ದಾರೆ ಎಂದಿದೆ.

ಈಗಾಗಲೇ ನಡೆಸಿರುವ ಮುಷ್ಕರವು ಕಾನೂನಿನ ಪ್ರಕಾರ ಅಕ್ರಮವಾಗಿದೆ. ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿರುವುದಕ್ಕೆ ಯೂನಿಯನ್‌ಗಳ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕೈಗೊಳ್ಳಬೇಕಾಗುತ್ತದೆ. ನಾಳೆ (ಬುಧವಾರ) ಮುಷ್ಕರ ನಿಲ್ಲಬೇಕು. ಎಸ್ಮಾ ಕಾಯ್ದೆಯ ಸೆಕ್ಷನ್‌ 8ರ ಅಡಿ ಪೊಲೀಸರು ಬಂಧಿಸುವ ಅಧಿಕಾರ ಹೊಂದಲಿದ್ದು, ಪದಾಧಿಕಾರಿಗಳನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶಿಸಲಾಗುವುದು” ಎಂದು ಮೌಖಿಕವಾಗಿ ನ್ಯಾಯಾಲಯ ಹೇಳಿದೆ.

ನಿಮ್ಮ ಬೇಡಿಕೆಗಳನ್ನು ಸರ್ಕಾರದ ಜೊತೆ ಚರ್ಚಿಸಿ ಬಗೆ ಹರಿಸಿಕೊಳ್ಳಿ. ಜನರಿಗೆ ತೊಂದೆರೆ ಉಂಟು ಮಾಡಲು ಸಾಧ್ಯವಿಲ್ಲ. ಯೂನಿಯನ್ ಅದನ್ನೇ ಮಾಡುತ್ತಿದೆ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಒಟ್ಟು ನಾಲ್ಕು ನಿಗಮಗಳಿದ್ದು, ನ್ಯಾಯಾಲಯದ ಮಧ್ಯಂತರ ಆದೇಶದ ಹೊರತಾಗಿಯೂ ಮೂರು ನಿಗಮಗಳ ಸಿಬ್ಬಂದಿ ಮುಷ್ಕರ ಮುಂದುವರಿಸಿದ್ದಾರೆ. ಸಿಬ್ಬಂದಿ ಕೊರತೆಯಿಂದ ಶೇ.30-40 ಬಸ್‌ಗಳು ಮಾತ್ರ ಓಡಾಡುತ್ತಿವೆ. ಮುಖ್ಯಮಂತ್ರಿ ಸಾರಿಗೆ ಸಿಬ್ಬಂದಿಯ ಜಂಟಿ ಕ್ರಿಯಾ ಸಮಿತಿಯೊಂದಿಗೆ ಸಭೆ ನಡೆಸಿದ್ದಾರೆ. ಕೈಗಾರಿಕಾ ವಿವಾದ ಇತ್ಯರ್ಥ ಕಾಯ್ದೆ ಅಡಿ ಸಾರಿಗೆ ಆಯುಕ್ತರ ಜೊತೆ ಸಂಬಂಧಿತ ಸಂಧಾನ ಸಭೆ ನಡೆಸಲಾಗಿದೆ. ಇದರ ಮುಂದಿನ ಸಭೆಯು ಆಗಸ್ಟ್‌ 7ಕ್ಕೆ ನಿಗದಿಯಾಗಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಸಿಬ್ಬಂದಿ, ಕೆಲಸಗಾರರ ಒಕ್ಕೂಟದ ಪರ ವಕೀಲರು, “ಸೋಮವಾರ ಸಂಜೆ ಮುಷ್ಕರಕ್ಕೆ ತಡೆ ಕೋರಿರುವ ಅರ್ಜಿ ಕೊಟ್ಟಿದ್ದಾರೆ. ಇದಕ್ಕೆ ವಕಾಲತ್ತು ಹಾಕಲಾಗಿದೆ. ಬೆಂಗಳೂರಿನಲ್ಲಿ ಶೇ. 90ರಷ್ಟು ಬಿಎಂಟಿಸಿ ಬಸ್‌ಗಳು ಕಾರ್ಯನಿರ್ವಹಿಸುತ್ತಿವೆ. ಸಂಧಾನ ನಡೆಯುತ್ತಿದೆ. ಮುಷ್ಕರವನ್ನು ನಿಲ್ಲಿಸುತ್ತಿದ್ದೇವೆ” ಎಂದು ಪೀಠಕ್ಕೆ ವಾಗ್ದಾನ ನೀಡಿದ್ದಾರೆ ಎಂದು barandbench.com ವರದಿ ಮಾಡಿದೆ.

ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ: ಲೋಕಸಭೆಗೆ ಅಮಿತ್ ಶಾ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...

ಕುವೈತ್ ವಿದ್ಯುತ್ ಸ್ಥಾವರ, ಉಪ್ಪು ನಿವಾರಣಾ ಘಟಕದ ಮೇಲೆ ಇರಾನ್ ದಾಳಿ: ಭಾರತ ಮೂಲದ ಕಾರ್ಮಿಕ ಸಾವು

ದುಬೈ: ಕುವೈತ್‌ನಲ್ಲಿ ವಿದ್ಯುತ್ ಮತ್ತು ನೀರು ನಿವಾರಣಾ ಘಟಕದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸುದ್ದಿ ಸಂಸ್ಥೆ ಕುನಾ ಸೋಮವಾರ ವರದಿ ಮಾಡಿದೆ. ದಾಳಿಯ ಸಮಯದಲ್ಲಿ...

1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಆರೋಪ; ದೆಹಲಿ ಪೊಲೀಸರಿಂದ ಮೈಸೂರಿನ ವ್ಯಕ್ತಿ ಬಂಧನ

ದೇಶಾದ್ಯಂತ ಹಲವು ಶಾಲೆಗಳು, ಹೈಕೋರ್ಟ್‌ ಮತ್ತು ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆಗಳನ್ನು ಕಳುಹಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಮೈಸೂರಿನ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ದೆಹಲಿ...

ಬಾಂಗ್ಲಾದೇಶದಿಂದ ಭಾರತದಲ್ಲಿ ಭಯೋತ್ಪಾದಕ ದಾಳಿ ನಿರ್ವಹಿಸುತ್ತಿದ್ದ ಲಷ್ಕರ್ ಕಮಾಂಡರ್ ಶಬ್ಬೀರ್ ಅಹ್ಮದ್ ಲೋನ್ ಬಂಧನ

ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಪ್ರಮುಖ ಪ್ರಗತಿಯಲ್ಲಿ, ಬಾಂಗ್ಲಾದೇಶದಲ್ಲಿ ನೆಲೆಸಿದ್ದು, ಭಾರತದಲ್ಲಿ ದಾಳಿಗಳನ್ನು ಯೋಜಿಸುತ್ತಿದ್ದ ಆರೋಪ ಹೊತ್ತಿರುವ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಾರ್ಯಕರ್ತನನ್ನು ದೆಹಲಿ ಗಡಿಯ ಬಳಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ದೃಢಪಡಿಸಿದ್ದಾರೆ. ಆರೋಪಿ...

‘ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು’ : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ

ಗುಜರಾತ್‌ನ ರಾಜ್‌ಕೋಟ್‌ನ ಸ್ಥಳೀಯ ಪತ್ರಕರ್ತ ಸುದೇಶ್ ವಡೇಚಾ ಎಂಬವರು, ಪೊಲೀಸ್ ಕಸ್ಟಡಿಯಲ್ಲಿ ತನಗೆ ತೀವ್ರ ಚಿತ್ರ ಹಿಂಸೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 'ಖಬರ್ ರಾಜ್‌ಕೋಟ್ ಕಿ ನ್ಯೂಸ್' ಎಂಬ ಆನ್‌ಲೈನ್...

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...