Homeಮುಖಪುಟಬೊಕ್ಕಸದ ಹಣ ಮುಖ್ಯಮಂತ್ರಿಗಳು, ಸಚಿವರ ಜೇಬಿಗೆ ಹೋಯಿತಾ?: ಸಿದ್ದು ಪ್ರಶ್ನೆ

ಬೊಕ್ಕಸದ ಹಣ ಮುಖ್ಯಮಂತ್ರಿಗಳು, ಸಚಿವರ ಜೇಬಿಗೆ ಹೋಯಿತಾ?: ಸಿದ್ದು ಪ್ರಶ್ನೆ

- Advertisement -
- Advertisement -

ರಾಜ್ಯ ಸರ್ಕಾರ ವಿತ್ತೀಯ ಕೊರತೆ ಸರಿದೂಗಿಸಲು ಭಾರೀ ಪ್ರಮಾಣದ ಸಾಲ ಮಾಡಲು ಮುಂದಾಗಿರುವ ಹಿನ್ನೆಲೆಯಲ್ಲಿ ಬೊಕ್ಕಸದಲ್ಲಿದ್ದ ಹಣವೆಲ್ಲಿ ಹೋಯಿತು ಎಂದು ಪ್ರಶ್ನಿಸಿರುವ ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ, ಉತ್ತರ ಕೊಡಿ ಬಿಎಸ್‌ವೈ ಎಂದಿದ್ದಾರೆ.

“ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲು ದುಡ್ಡಿಲ್ಲ, ಕೊರೊನಾ ಚಿಕಿತ್ಸೆಗೆ ದುಡ್ಡಿಲ್ಲ, ಬೊಕ್ಕಸ ಖಾಲಿಯಾಗಿದೆ ಎಂದು ರಾಜ್ಯ ಸರ್ಕಾರ 90,000 ಕೋಟಿ ರೂಪಾಯಿ ಸಾಲ ಮಾಡಲು ಹೊರಟಿದೆ. ಹಾಗಿದ್ದರೆ ದುಡ್ಡೆಲ್ಲಿ ಹೋಯಿತು? ಮುಖ್ಯಮಂತ್ರಿಗಳು ಮತ್ತು ಸಚಿವರ ಜೇಬಿಗೆ ಹೋಯಿತಾ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಆಗಸ್ಟ್‌ನಿಂದ ಮೂರು ತಿಂಗಳು ಸುರಿದ ಮಳೆಯಿಂದಾಗಿ 23 ಜಿಲ್ಲೆಗಳ 130 ತಾಲ್ಲೂಕುಗಳು ಬಾಧಿತವಾಗಿವೆ. ಕಳೆದ ವರ್ಷ ಹತ್ತು ಲಕ್ಷ ಹೆಕ್ಟೇರ್ ಕೃಷಿಭೂಮಿ ಹಾನಿಗೀಡಾಗಿದ್ದರೆ, ಈ ವರ್ಷ 11 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ರೈತರು ಬೆಳೆ ಕಳೆದುಕೊಂಡಿದ್ದಾರೆ. ಈ ದುಪ್ಪಟ್ಟು ನಷ್ಟದಿಂದ ರೈತರು ನೆಲಹಿಡಿದಿದ್ದಾರೆ. ಇವರಿಗೆ ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಕಳೆದ ವರ್ಷದ ಅತಿವೃಷ್ಟಿ ಹಾನಿಗೆ ರಾಜ್ಯ ಸರ್ಕಾರ ಕೇಂದ್ರದಿಂದ ಪರಿಹಾರ ಕೇಳಿದ್ದು ರೂ.35,000 ಕೋಟಿ, ಅವರು ನೀಡಿದ್ದು ರೂ.1654 ಕೋಟಿ. ಈ ಬಾರಿ ರಾಜ್ಯ ಸರ್ಕಾರ ಈ ವರೆಗೆ ಕೇಳಿದ್ದು ರೂ.4000 ಕೋಟಿ. ಕೇಂದ್ರದಿಂದ ಸಮರ್ಪಕ ಪರಿಹಾರ ಕೇಳಲೂ ನಿಮಗೆ ಭಯನಾ? ಎಂದು ವ್ಯಂಗ್ಯವಾಡಿದ್ದಾರೆ.

“ಕಳೆದ ವರ್ಷದ ಬೆಳೆ-ಮನೆ ಕಳೆದುಕೊಂಡವರಿಗೆ ಇನ್ನೂ ಸರಿಯಾಗಿ ಪರಿಹಾರ ಕೊಟ್ಟಿಲ್ಲ, ಈ ವರ್ಷ ಸಮೀಕ್ಷೆಯನ್ನೇ ಮಾಡಿಲ್ಲ. ಮುಖ್ಯಮಂತ್ರಿಗಳು, ಸಚಿವರು ಚುನಾವಣಾ ಪ್ರಚಾರದಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಅಧಿಕಾರಿಗಳು ಮನೆಯಲ್ಲಿ ಹಾಯಾಗಿದ್ದಾರೆ, ಸಂತ್ರಸ್ತರು ಬೀದಿಯಲ್ಲಿದ್ದಾರೆ.
ಕಳೆದ ವರ್ಷ ಸರ್ಕಾರ ನಡೆಸಿದ್ದ ಸಮೀಕ್ಷೆಯಂತೆ ನೆರೆಯಿಂದಾಗಿ ಹಾನಿಗೀಡಾದ ಮನೆಗಳು 2,24,000, ಪರಿಹಾರ ನೀಡಿರುವುದು ಮಾತ್ರ 1,24,000 ಮನೆಗಳಿಗೆ ಎಂದು ಕೇಂದ್ರಕ್ಕೆ ವರದಿ ಕಳಿಸಲಾಗಿದೆ. ಇನ್ನು ಈ ವರ್ಷದ ಮಳೆಗೆ ಹಾನಿಗೀಡಾಗಿರುವ ಮನೆಗಳಿಗೆ ಸರ್ಕಾರ ಪರಿಹಾರ ನೀಡುವುದು ಯಾವಾಗ? ಉತ್ತರಕೊಡಿ_ಬಿಎಸ್ವೈ” ಎಂದಿದ್ದಾರೆ.


ಇದನ್ನೂ ಓದಿ: ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಂತರ್ಜಾತಿ ವಿವಾಹ; ಹೈದರಾಬಾದ್‌ನಲ್ಲಿ ಮತ್ತೊಬ್ಬ ಯುವಕನ ಕೊಲೆ | Naanu Gauri

ಅಂತರ್ಜಾತಿ ವಿವಾಹ; ಹೈದರಾಬಾದ್‌ನಲ್ಲಿ ಮತ್ತೊಬ್ಬ ಯುವಕನ ಕೊಲೆ

0
ಹೈದರಾಬಾದ್‌ನ ಜನನಿಬಿಡ ಬೇಗಂ ಬಜಾರ್ ಪ್ರದೇಶದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು 21 ವರ್ಷದ ಯುವಕನನ್ನು ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಇರಿದು ಕೊಂದಿರುವ ಘಟನೆ ಮೇ 20ರ ಶುಕ್ರವಾರದ ಸಂಜೆ ನಡೆದಿದೆ ಎಂದು ನ್ಯೂಸ್ ಮಿನಿಟ್...