ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ನಾಗರಿಕರಿಗೆ ಮಹಾಮಾರಿ ಕೊರೋನಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು.‌ ಈ ಸಂಬಂಧ ಕೇಂದ್ರ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ – ಆರೋಗ್ಯ ಕರ್ನಾಟಕ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡುದಾರರಿಗೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಶೇಕಡ 30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ. ಯೋಜನೆ ವ್ಯಾಪ್ತಿಗೆ ಕೋವಿಡ್ ಅನ್ನೂ ಸೇರಿಸುವುದು ಅಗತ್ಯವಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

https://twitter.com/hd_kumaraswamy/status/1392305576336519172

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ? ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತುರ್ತು ಅಗತ್ಯವಿದೆ. ದೇಶದ ಬಹುಸಂಖ್ಯಾತರ ಆಗ್ರಹ ಕೂಡ ಇದೇ ಆಗಿದೆ ಎಂದು ಅವರು ಒತ್ತಾಯಿಸಿದ್ದಾರೆ.

ಸದ್ಯಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಮತ್ತು ಖಾಸಗಿ ಆಸ್ಪತ್ರೆಗಳ ಶೇ.50 ರಷ್ಟು ಬೆಡ್‌ಗಳ ಕೊರೊನಾ ಸೋಂಕಿತರ 3 ಲಕ್ಷದವರೆಗಿನ ಚಿಕಿತ್ಸಾ ವೆಚ್ಚ ಮಾತ್ರ ಸರ್ಕಾರ ಭರಿಸುತ್ತಿದೆ. ಉಳಿದಂತೆ ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿತರ ಕುಟುಂಬದಿಂದ ಅತಿಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here