Homeದಲಿತ್ ಫೈಲ್ಸ್ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯದ ವಿರುದ್ದ ಪ್ರತಿಭಟಿಸಿದ ಗ್ರಾಮ ಪಂಚಾಯತ್‌ನ ಮಹಿಳಾ ಅಧ್ಯಕ್ಷೆ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ ಪ್ರೆಸ್ ವರದಿ ಮಾಡಿದೆ.

ವಿಲ್ಲುಪುರಂ ಜಿಲ್ಲೆ ಗಿಂಗೀ ತಾಲೂಕಿನ ಅಣಂಗೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಂಗೀತಾ ಅವರು, ಅದೇ ಗ್ರಾ.ಪಂ ಉಪಾಧ್ಯಕ್ಷೆ ಚಿತ್ರಾ ಗುಣಶೇಖರನ್ ಮತ್ತು ಆಕೆಯ ಪತಿ ಸ್ಥಳೀಯ ಡಿಎಂಕೆ ಶಾಖಾ ಕಾರ್ಯದರ್ಶಿ ಗುಣಶೇಖರನ್‌ ಅವರ ವಿರುದ್ದ ಜಾತಿ ಆಧಾರಿತ ತಾರತಮ್ಯ ಮತ್ತು ಕಿರುಕುಳದ ಆರೋಪ ಮಾಡಿದ್ದಾರೆ.

ಗುಣಶೇಖರನ್ ದಂಪತಿಯ ವಿರುದ್ದ ಕ್ರಮಕ್ಕೆ ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಸಂಗೀತಾ ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಅವರ ವಿರುದ್ದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌)ನ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಉಪಾಧ್ಯಕ್ಷೆ ಮತ್ತು ಆಕೆಯ ಪತಿಯಿಂದ ಜಾತಿ ಆಧಾರಿತ ತಾರತಮ್ಯ ಎದುರಿಸುತ್ತಿರುವುದಾಗಿ ಸಂಗೀತಾ ಕಳೆದ ಜುಲೈ ಮತ್ತು ಆಗಸ್ಟ್‌ನಲ್ಲಿ ಎರಡು ಬಾರಿ ಜಿಲ್ಲಾಧಿಕಾರಿಗಳಿಗೆ ಔಪಚಾರಿಕವಾಗಿ ದೂರು ಸಲ್ಲಿಸಿದ್ದರು. ಆದರೆ, ದಂಪತಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಮೂರು ವರ್ಷಗಳ ಹಿಂದೆ ಪಂಚಾಯತ್ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಚಿತ್ರಾ ಮತ್ತು ಅವರ ಪತಿ ಗುಣಶೇಖರನ್ ನಿರಂತರವಾಗಿ ಅಧಿಕೃತ ಕರ್ತವ್ಯಗಳಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಸಂಗೀತಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಮಹಿಳಾ ಮೀಸಲು ಕ್ಷೇತ್ರವೆಂದು ಘೋಷಿಸಿದ ನಂತರ ಸಂಗೀತಾ ಅವರು ತಮ್ಮ ಗ್ರಾಮದ ಮೊದಲ ಇರುಳರ್ ಮಹಿಳಾ ಪಂಚಾಯತ್ ಅಧ್ಯಕ್ಷೆಯಾಗಿದ್ದಾರೆ.

“ನೌಕರರ ಸಂಬಳ ಪಾವತಿಯನ್ನು ಅನುಮೋದಿಸಲು ಹಾಗೂ ನೀರಿನ ಪೈಪ್‌ಗಳ ಅಳವಡಿಕೆ ಮತ್ತು ರಸ್ತೆ ನಿರ್ಮಾಣಗಳಂತಹ ಮೂಲಭೂತ ಸೌಕರ್ಯಗಳಿಗೆ ಹಣಕಾಸನ್ನು ವಿನಿಯೋಗಿಸಲು ಅಗತ್ಯವಿರುವ ಡಿಜಿಟಲ್ ಪಾಸ್‌ವರ್ಡ್‌ನ್ನು ತನಗೆ ಒದಗಿಸಲು ಚಿತ್ರಾ ಮತ್ತು ಆಕೆಯ ಪತಿ ನಿರಾಕರಿಸಿದ್ದಾರೆ. ಅವರು ತನ್ನ ಬುಡಕಟ್ಟು ಗುರುತನ್ನು ಸಾರ್ವಜನಿಕ ಸಭೆಗಳಲ್ಲಿ ತನ್ನನ್ನು ನಿಂದಿಸಲು ಮತ್ತು ಅವಮಾನಿಸಲು ಬಳಸಿದ್ದಾರೆ” ಎಂದು ಸಂಗೀತಾ ಹೇಳಿದ್ದಾರೆ.

“ಇರುಳರ್ ಮಹಿಳೆಯಾಗಿರುವ ನೀನು ಪಂಚಾಯತ್ ಅಧ್ಯಕ್ಷರ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅರ್ಹಳಲ್ಲ” ಎಂದು ಚಿತ್ರಾ ತನ್ನನ್ನು ಬಹಿರಂಗವಾಗಿ ಅವಮಾನಿಸಿದ್ದು, ಆಡಳಿತಾತ್ಮಕ ವಿಷಯಗಳಲ್ಲಿ ತಲೆ ಹಾಕಿದರೆ ದೈಹಿಕ ಹಾನಿಯ ಬೆದರಿಕೆಯನ್ನೂ ಒಡ್ಡಿದ್ದಾರೆ” ಎಂದು ಸಂಗೀತಾ ಆರೋಪಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಹಾಗೂ ಸ್ಥಳೀಯ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಂಗೀತಾ ದೂರಿದ್ದು, ತನಗೆ ಜೀವ ಬೆದರಿಕೆ ಇದೆ, ತೀವ್ರ ಮಾನಸಿಕ ಸಂಕಷ್ಟಕ್ಕೆ ಸಿಲುಕಿದ್ದೇನೆ ಎಂದಿದ್ದಾರೆ ಎಂದು ವರದಿ ವಿವರಿಸಿದೆ.

ಆಗಸ್ಟ್‌ನಲ್ಲಿ ಸಂಗೀತಾ ಅವರ ದೂರಿಗೆ ಸ್ಪಂದಿಸಿದ್ದ ಜಿಲ್ಲಾಧಿಕಾರಿ ಸಿ ಪಳನಿ ಅವರು, ತನಿಖೆಗೆ ಆದೇಶಿಸಿದ್ದರು ಮತ್ತು ಸಂಗೀತಾ ಅವರಿಗೆ ಡಿಜಿಟಲ್ ಕೀಗೆ ಪಾಸ್‌ವರ್ಡ್‌ ಒದಗಿಸುವಂತೆ ಉಪಾಧ್ಯಕ್ಷೆಗೆ ಸೂಚಿಸಿದ್ದರು. ಆದರೆ, ಜಿಲ್ಲಾಧಿಕಾರಿ ಇದುವರೆಗೂ ಸಂಗೀತಾರನ್ನು ನೇರವಾಗಿ ಸಂಪರ್ಕಿಸಿಲ್ಲ ಮತ್ತು ಪರಿಸ್ಥಿತಿಯನ್ನು ಪರಿಶೀಲಿಸಿಲ್ಲ ಎಂದು ವರದಿ ತಿಳಿಸಿದೆ.

ಇದಾದ ಒಂದು ತಿಂಗಳ ನಂತರ, ಸಂಗೀತಾ ಮತ್ತೆ ಇಬ್ಬರಿಂದ ಮೌಖಿಕ ಜಾತಿ ನಿಂದನೆ ಎದುರಿಸಿದ್ದಾರೆ. “ಅವರು ತನ್ನ ಜಾತಿಯ ಹೆಸರನ್ನು ಬಳಸಿಕೊಂಡು ಕರೆ ಮಾಡುವುದನ್ನು ಮುಂದುವರೆಸಿದ್ದಾರೆ ಮತ್ತು ನರೇಗಾ ಕಾಮಗಾರಿಗಳ ತಪಾಸಣೆ ಸ್ಥಳಗಳಿಂದ ಹೊರ ಹೋಗುವಂತೆ ಒತ್ತಾಯಿಸಿದ್ದಾರೆ” ಎಂದು ಸಂಗೀತಾ ಹೇಳಿಕೊಂಡಿದ್ದಾರೆ.

ತನಗಾದ ಅನ್ಯಾಯದ ವಿರುದ್ದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದ ಸಂಗೀತಾ ಮೇಲೆಯೇ ಪೊಲೀಸರು ಬಿಎನ್‌ಎಸ್‌ ಕಾಯ್ದೆಯೆ ಸೆಕ್ಷನ್ 223,292 ಮತ್ತು 126(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರಿಂದ ಸೂಕ್ತ ಅನುಮತಿ ಪಡೆಯದೆ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಸಬಾರದು ಎಂಬ ಜಿಲ್ಲಾಧಿಕಾರಿಗಳ ಇತ್ತೀಚಿನ ಆದೇಶದನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

“ನಾವು ಸಮಸ್ಯೆಯನ್ನು ಪರಿಶೀಲಿಸುತ್ತಿದ್ದೇವೆ. ಸತ್ಯವನ್ನು ಪರಿಶೀಲಿಸುತ್ತೇವೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಸಿವಾಚ್ ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ತಿಳಿಸಿದೆ.

ಇದನ್ನೂ ಓದಿ : ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ದಾಳಿ ಹೆಚ್ಚುತ್ತಿವೆ: ಅಮೆರಿಕ ಸರ್ಕಾರದ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...