Homeಮುಖಪುಟಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

- Advertisement -
- Advertisement -

ಎಲ್ಗರ್‌ ಪರಿಷತ್ ಪ್ರಕರಣದಲ್ಲಿ NIA  ಇಂದ ಬಂಧಿತರಾಗಿದ್ದ ಹಿರಿಯ ಸಾಮಾಜಿಕ ಹೋರಾಟಗಾರ ಮತ್ತು ಬುಡಕಟ್ಟು ಸಮುದಾಯಗಳಿಗಾಗಿ ಹೋರಾಡುತ್ತಿದ್ದ ಸ್ಟ್ಯಾನ್ ಸ್ವಾಮಿ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ 1:30 ಗಂಟೆಗೆ ಸ್ಟ್ಯಾನ್‌ ಸ್ವಾಮಿ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಸ್ವಾಮಿ ಪರ ವಾದಿಸುತ್ತದ್ದ ನ್ಯಾಯವಾದಿ ಮಿನಿ ದೇಸಾಯಿ ಇಂದು ಬಾಂಬೆ ಹೈಕೋರ್ಟ್‌ಗೆ  ತಿಳಿಸಿದ್ದಾರೆ.

ತೀವ್ರ ಆರೊಗ್ಯ ಸಮಸ್ಯೆಯಿಂದ ಬಳಲುತ್ತಿದ್ದ 84 ವರ್ಷ ವಯಸ್ಸಿನ ಸ್ಟ್ಯಾನ್‌ ಸ್ವಾಮಿ ಅವರನ್ನು ನಿನ್ನೆಯಿಂದ ವೆಂಟಿಲೇಟರ್‌ನಲ್ಲಿ ಇಡಲಾಗಿತ್ತು. ಮೇ 30ರಿಂದ ಸ್ವಾಮಿಯವರ ಆರೋಗ್ಯ ತೀವ್ರ ಬಿಗಡಾಯಿಸಿದ ಪರಿಣಾಮ ಬಾಂಬೆ ಹೈಕೋರ್ಟ್ ನಿರ್ದೇಶನದ ಮೇಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದ ಸ್ವಾಮಿಯವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸ್ಟ್ಯಾನ್ ಸ್ವಾಮಿ ಅವರು ಇನ್ನು ICU ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರ ವಕೀಲೆ ಮಿನಿ ದೇಸಾಯಿ ಶನಿವಾರ ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿ: ಕೊನೆಗೂ ಹೋರಾಟಗಾರ ಸ್ಟ್ಯಾನ್ ಸ್ವಾಮಿಗೆ ಸ್ಟ್ರಾ ನೀಡಿದ ಜೈಲು ಅಧಿಕಾರಿಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಸ್ವಪಕ್ಷದ ಅಭ್ಯರ್ಥಿ ವಿರುದ್ದ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ ಶಾಸಕ

0
ಫತೇಪುರ್ ಸಿಕ್ರಿ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಿದ್ದು , ಪಕ್ಷದ ಸ್ಥಳೀಯ ಶಾಸಕ ಬಾಬುಲಾಲ್ ಚೌಧರಿ ಅವರು ಪಕ್ಷದ ಅಭ್ಯರ್ಥಿ ಮತ್ತು ಹಾಲಿ ಸಂಸದ ರಾಜ್‌ಕುಮಾರ್ ಚಹಾರ್...