Homeಮುಖಪುಟಬಿರ್ಸಾ ಮುಂಡಾ ಜನ್ಮದಿನ: ದಶಕಗಳ ಕಾಲ ಆಡಳಿತ ನಡೆಸಿದವರಿಂದ ಬುಡಕಟ್ಟು ಸಮುದಾಯದ ನಿರ್ಲಕ್ಷ್ಯ- ಪ್ರಧಾನಿ ಮೋದಿ

ಬಿರ್ಸಾ ಮುಂಡಾ ಜನ್ಮದಿನ: ದಶಕಗಳ ಕಾಲ ಆಡಳಿತ ನಡೆಸಿದವರಿಂದ ಬುಡಕಟ್ಟು ಸಮುದಾಯದ ನಿರ್ಲಕ್ಷ್ಯ- ಪ್ರಧಾನಿ ಮೋದಿ

- Advertisement -
- Advertisement -

“ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ಬುಡಕಟ್ಟು ಸಮುದಾಯದ ಸಂಸ್ಕೃತಿ, ಸ್ವಾತಂತ್ರ್ಯ ಹೋರಾಟ ಮತ್ತು ರಾಷ್ಟ್ರ ನಿರ್ಮಾಣಕ್ಕೆ ನೀಡಿದ ಕೊಡುಗೆಯನ್ನು ಹೆಮ್ಮೆಯಿಂದ ಗೌರವಿಸಿ, ಸ್ಮರಿಸಲಾಗುತ್ತಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ಸ್ವಾತಂತ್ರ್ಯದ ನಂತರ ದಶಕಗಳ ಕಾಲ ದೇಶವನ್ನು ಆಳಿದವರು ತಮ್ಮ ಸ್ವಾರ್ಥ ರಾಜಕಾರಣಕ್ಕೆ ಆದ್ಯತೆ ನೀಡಿದ್ದರಿಂದ ಬುಡಕಟ್ಟು ಸಮುದಾಯದ ಬಗ್ಗೆ ಬಹಳ ಕಡಿಮೆ ತಿಳಿದಿದೆ ಎಂದು ವಿಪಕ್ಷ ಕಾಂಗ್ರೆಸ್‌ ಅನ್ನು ಟೀಕಿಸಿದ್ದಾರೆ.

“ಭಾರತದ ಜನಸಂಖ್ಯೆಯ ಸುಮಾರು 10 ಪ್ರತಿಶತದಷ್ಟು ಜನಸಂಖ್ಯೆಯನ್ನು ಒಳಗೊಂಡಿದ್ದರೂ ಸಹ, ದಶಕಗಳಿಂದ ಬುಡಕಟ್ಟು ಜನಾಂಗದವರ ಸಂಸ್ಕೃತಿ ಮತ್ತು ಸಾಮರ್ಥ್ಯವನ್ನು ಕಡೆಗಣಿಸಲಾಗಿದೆ. ಅವರ ಸಮಸ್ಯೆಗಳು, ಶಿಕ್ಷಣ ಮತ್ತು ಆರೋಗ್ಯದ ಬಗ್ಗೆ ಯಾರು ಗಮನಹರಿಸಲಿಲ್ಲ” ಎಂದು ಆರೋಪಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ANI ಉಲ್ಲೇಖಿಸಿದೆ.

ಭೋಪಾಲ್‌ನ ಜಂಜಾಟಿಯಲ್ಲಿ ನಡೆದ ಗೌರವ್ ದಿವಸ್ ಮಹಾಸಮ್ಮೇಳನದಲ್ಲಿ ಬುಡಕಟ್ಟು ಸಮುದಾಯದ ಐತಿಹಾಸಿಕ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.

ಇದನ್ನೂ ಓದಿ: ಬ್ರಿಟೀಷರ ಎದೆ ನಡುಗಿಸಿದ್ದ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ

“ರಾಷ್ಟ್ರ ನಿರ್ಮಾಣಕ್ಕೆ ಬುಡಕಟ್ಟು ಸಮುದಾಯದ ಕೊಡುಗೆಯ ಕುರಿತು ಚರ್ಚೆ ಬಂದಾಗ ಕೆಲವರು ಆಶ್ಚರ್ಯಚಕಿತರಾಗುತ್ತಾರೆ. ಏಕೆಂದರೆ ಅವರಿಗೆ ಅದರ ಬಗ್ಗೆ ಮಾಹಿತಿಯಿಲ್ಲ” ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಬುಡಕಟ್ಟು ಸಮುದಾಯದ ನಾಯಕ ಬಿರ್ಸಾ ಮುಂಡಾ ಅವರು ಬಿಹಾರ ಮತ್ತು ಜಾರ್ಖಂಡ್‌ ಸುತ್ತಮುತ್ತಲಿನ ಛೋಟಾನಾಗ್ಪುರ್ ಪ್ರಸ್ಥಭೂಮಿ ಪ್ರದೇಶದ ಮುಂಡಾ ಬುಡಕಟ್ಟು ಸಮುದಾಯದಲ್ಲಿ ನವೆಂಬರ್ 15, 1875 ರಲ್ಲಿ ಹುಟ್ಟಿದ್ದರು. ಇವರು ತಮ್ಮ ಬಾಲ್ಯದ ಬಹುಭಾಗವನ್ನು ಒಂದು ಹಳ್ಳಿಯಿಂದ ಮತ್ತೊಂದು ಹಳ್ಳಿಗೆ ಸ್ಥಳಾಂತರಗೊಳ್ಳುವುದರಲ್ಲಿಯೇ ಕಳೆದರು. ಅವರು ತಮ್ಮ ಶಿಕ್ಷಕ ಜೈಪಾಲ್ ನಾಗ್ ಅವರ ಮಾರ್ಗದರ್ಶನದಲ್ಲಿ ಸಲ್ಗಾದಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪಡೆದರು. ಜೈಪಾಲ್ ನಾಗ್ ಅವರ ಶಿಫಾರಸ್ಸಿನ ಮೇರೆಗೆ, ಜರ್ಮನ್ ಮಿಷನ್ ಶಾಲೆಗೆ ಸೇರಲು ಇವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡರು.

ಆರಂಭದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರೂ ನಂತರದ ದಿನಗಳಲ್ಲಿ ತಮ್ಮದೇ ಆದ ‘ಬಿರ್ಸೈಟ್‌’ ಎನ್ನುವ ಪಂಥವನ್ನು ಸ್ಥಾಪಿಸಿದರು. ಅತೀ ಶೀಘ್ರದಲ್ಲೇ ಮುಂಡಾ ಮತ್ತು ಒರಾನ್ ಸಮುದಾಯದವರು ಈ ಪಂಥಕ್ಕೆ ಸೇರಲು ಪ್ರಾರಂಭಿಸಿದರು. ಇದು ಬ್ರಿಟಿಷರ ಮತಾಂತರ ಚಟುವಟಿಕೆಗಳಿಗೆ ಸವಾಲಾಗಿ ಪರಿಣಮಿಸಿತು.

1886 ರಿಂದ 1890 ರ ಅವಧಿಯಲ್ಲಿ ಇವರು ಮಿಷನರಿ ವಿರೋಧಿ ಮತ್ತು ಸರ್ಕಾರ ವಿರೋಧಿ ಕಾರ್ಯಕ್ರಮಗಳ ಭಾಗವಾದರು. ಅವರು 1890 ರಲ್ಲಿ ಚೈಬಾಸಾವನ್ನು ತೊರೆಯುವ ಹೊತ್ತಿಗೆ, ಬಿರ್ಸಾ ಬುಡಕಟ್ಟು ಸಮುದಾಯಗಳ ಮೇಲಿನ ಬ್ರಿಟಿಷರ ದಬ್ಬಾಳಿಕೆಯ ವಿರುದ್ಧದ ಚಳವಳಿಯಲ್ಲಿ ಬಿರ್ಸಾ ಮುಂಡಾ ತೀವ್ರವಾಗಿ ತೊಡಗಿಸಿಕೊಂಡರು.

ಮಾರ್ಚ್ 3, 1900 ರಂದು, ಬಿರ್ಸಾ ಮುಂಡಾ ತನ್ನ ಬುಡಕಟ್ಟು ಗೆರಿಲ್ಲಾ ಸೈನ್ಯದೊಂದಿಗೆ ಚಕ್ರಧರಪುರದ ಜಮ್ಕೋಪೈ ಕಾಡಿನಲ್ಲಿ ವಿಶ್ರಾಂತಿಯಲ್ಲಿದ್ದಾಗ ಬ್ರಿಟಿಷ್ ಪೊಲೀಸರು ಅವರನ್ನು ಬಂಧಿಸಿದರು. ನಂತರ ಜೂನ್ 9, 1900 ರಂದು 25 ನೇ ವಯಸ್ಸಿನಲ್ಲಿ ರಾಂಚಿ ಜೈಲಿನಲ್ಲಿ ನಿಧನರಾದರು. ಹೀಗೆ ಈ ಬುಡಕಟ್ಟು ಮತ್ತು ಆದಿವಾಸಿ ಸಮುದಾಯಗಳ ದೈವವಾಗಿ, ಅಲ್ಲಿನ ಸಮುದಾಯಗಳಲ್ಲಿ ಇಂದಿಗೂ ಒಂದು ದಂತಕಥೆಯಾಗಿ ಉಳಿದಿದ್ದಾರೆ.


ಇದನ್ನೂ ಓದಿ: ಇಂದು ‘ಬುಡಕಟ್ಟು ನಾಯಕ ಬಿರ್ಸಾ ಮುಂಡಾ’ ಜನ್ಮದಿನ – #BirsaMunda ಟ್ವಿಟರ್‌ನಲ್ಲಿ ಟ್ರೆಂಡಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...