Homeಮುಖಪುಟರಾಜಸ್ಥಾನ: ಬುಡಕಟ್ಟು ಮಹಿಳೆಯನ್ನು ವಿವಸ್ತ್ರಗೊಳಿಸಿ, ಮೆರವಣಿಗೆ

ರಾಜಸ್ಥಾನ: ಬುಡಕಟ್ಟು ಮಹಿಳೆಯನ್ನು ವಿವಸ್ತ್ರಗೊಳಿಸಿ, ಮೆರವಣಿಗೆ

- Advertisement -
- Advertisement -

ರಾಜಸ್ಥಾನದ ಪ್ರತಾಪ್‌ಗಢ ಜಿಲ್ಲೆಯಲ್ಲಿ ಬುಡಕಟ್ಟು ಮಹಿಳೆಯೊಬ್ಬರನ್ನು ಥಳಿಸಿ, ವಿವಸ್ತ್ರಗೊಳಿಸಿ, ಮೆರವಣಿಗೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃತ್ಯದ  ಆಘಾತಕಾರಿ ವೀಡಿಯೊ ವೈರಲ್ ಆಗಿದೆ. ವಿಡಿಯೊದಲ್ಲಿ ಪತಿ ಎಂದು ಹೇಳಲಾದ ವ್ಯಕ್ತಿ 21 ವರ್ಷದ ಪತ್ನಿಯನ್ನು ತಮ್ಮ ಮನೆಯ ಹೊರಗೆ ವಿವಸ್ತ್ರಗೊಳಿಸುತ್ತಿರುವುದು ಮತ್ತು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವುದು, ಸಂತ್ರಸ್ತೆ ಸಹಾಯಕ್ಕೆ ಕೂಗುತ್ತಿರುವುದು ಕಂಡುಬಂದಿದೆ.

ಪೊಲೀಸರ ಪ್ರಕಾರ, ಮಹಿಳೆ ಅಕ್ರಮ ಸಂಬಂಧ ಹೊಂದಿದ್ದಳು ಎಂದು ಆರೋಪಿಸಿ ಹಲ್ಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದ್ದು, ಇನ್ನೂ  ಕೆಲವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಹೇಳಿದ್ದಾರೆ.

ಮದುವೆಯಾಗಿದ್ದರೂ, ಇನ್ನೋರ್ವನೊಂದಿಗೆ  ವಾಸಿಸುತ್ತಿರುವುದಕ್ಕೆ ಅಸಮಾಧಾನಗೊಂಡ ಮಹಿಳೆಯ ಸಂಬಂಧಿಕರು ಆಕೆಗೆ ಅಪಹರಿಸಿ ತಮ್ಮ ಗ್ರಾಮಕ್ಕೆ ಕರೆದೊಯ್ದು ಥಳಿಸಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಲು ಆರು ತಂಡಗಳನ್ನು ರಚಿಸಲಾಗಿದ್ದು, ಪ್ರತಾಪಗಢದ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ ಎಂದು ರಾಜಸ್ಥಾನದ ಪೊಲೀಸ್ ಮಹಾನಿರ್ದೇಶಕ ಉಮೇಶ್ ಮಿಶ್ರಾ ಹೇಳಿದ್ದಾರೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಎಕ್ಸ್‌ನಲ್ಲಿ (ಟ್ವೀಟ್‌)  ಘಟನೆಯನ್ನು ಖಂಡಿಸಿದ್ದಾರೆ ಮತ್ತು ಪ್ರತಾಪ್‌ಗಢ ಜಿಲ್ಲೆಯಲ್ಲಿ ಅತ್ತೆಯೊಂದಿಗಿನ ಕೌಟುಂಬಿಕ ಕಲಹದಿಂದಾಗಿ ಮಹಿಳೆಯನ್ನು ವಿವಸ್ತ್ರಗೊಳಿಸಿರುವ ವೀಡಿಯೊ ಹೊರಬಿದ್ದಿದೆ. ಎಡಿಜಿ ಕ್ರೈಂ ಅವರನ್ನು ಸ್ಥಳಕ್ಕೆ ಕಳುಹಿಸಿ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಸುಸಂಸ್ಕೃತ ಸಮಾಜದಲ್ಲಿ ಇಂತಹ ಅಪರಾಧಿಗಳಿಗೆ ಜಾಗವಿಲ್ಲ. ಆದಷ್ಟು ಬೇಗ ಈ ಅಪರಾಧಿಗಳನ್ನು ಕಟಕಟೆಯಲ್ಲಿ ನಿಲ್ಲಿಸಿ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿ: ದೇಶದ ಯಾವುದೇ ಭಾಗದಲ್ಲಿ ದೌರ್ಜನ್ಯ ನಡೆದರೂ  SC/ST ದೌರ್ಜನ್ಯ ತಡೆ ಕಾಯ್ದೆ ಅನ್ವಯ: ಹೈಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...