Homeಮುಖಪುಟಗುಜರಾತ್: ಬುಡಕಟ್ಟು ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ

ಗುಜರಾತ್: ಬುಡಕಟ್ಟು ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ

- Advertisement -
- Advertisement -

ಗುಜರಾತ್‌ನ ತಾಪಿ ಜಿಲ್ಲೆಯ ವ್ಯಾರಾ ಪಟ್ಟಣದಲ್ಲಿ ವಾಸಿಸುತ್ತಿದ್ದ ವಿಚ್ಛೇದಿತ ಬುಡಕಟ್ಟು ಮಹಿಳೆಯನ್ನು, ಆಕೆಯ ಪ್ರಿಯಕರನ ಕುಟುಂಬದವರು ಅಪಹರಿಸಿ, ಥಳಿಸಿ ಅರೆಬೆತ್ತಲೆಯಾಗಿ ರಸ್ತೆಬದಿಯಲ್ಲಿ ಬಿಟ್ಟಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

26 ವರ್ಷದ ಸಂತ್ರಸ್ತ ಮಹಿಳೆಗೆ ಹತ್ತು ವರ್ಷದ ಓರ್ವ ಮಗನಿದ್ದಾನೆ. ಎಂಟು ವರ್ಷಗಳ ಹಿಂದೆ ಪತಿಯಿಂದ ವಿಚ್ಛೇದನ ಪಡೆದ ಆಕೆ, ಮಗನೊಂದಿಗೆ ವಾಸುತ್ತಿದ್ದರು.

ಪೊಲೀಸರ ಪ್ರಕಾರ, ಒಂದೂವರೆ ವರ್ಷದಿಂದ ಮಹಿಳೆ ಬೋರಖಡಿ ಗ್ರಾಮದ ನಿವಾಸಿ ನೀರವ್ ಚೌಧರಿ ಎಂಬಾತನನ್ನು ಪ್ರೀತಿಸುತ್ತಿದ್ದರು. ಕಳೆದ ವಾರದಿಂದ ಇಬ್ಬರೂ ವ್ಯಾರಾ ಪಟ್ಟಣದ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸಿಸಲು ಪ್ರಾರಂಭಿಸಿದ್ದರು. ನೀರವ್ ಚೌಧರಿಯ ಪೋಷಕರು ಮತ್ತು ಸಂಬಂಧಿಕರಿಗೆ ಇಬ್ಬರು ಒಟ್ಟಿಗೆ ವಾಸಿಸುವುದು ಇಷ್ಟವಿರಲಿಲ್ಲ.

ಪೊಲೀಸ್ ದೂರಿನ ಪ್ರಕಾರ, ಕಳೆದ ಬುಧವಾರ ಮಧ್ಯಾಹ್ನ ಮಹಿಳೆ ಹತ್ತಿರದ ಬುಹಾರಿ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಚೌಧರಿ ಅವರ ಪೋಷಕರು ಹಾಗೂ ಸಂಬಂಧಿಕರು ಆಕೆಯನ್ನು ಅಪಹರಿಸಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಚೌಧರಿಯ ತಾಯಿ ಮಹಿಳೆಯ ಕೂದಲು ಕತ್ತರಿಸಿದ್ದಲ್ಲದೆ, ಆಕೆಯನ್ನು ಅರೆಬೆತ್ತಲೆಗೊಳಿಸಿ ನಡುರಸ್ತೆಯಲ್ಲಿ ಬಿಟ್ಟಿದ್ದಾರೆ. ತಮ್ಮ ಮಗನ ಜೊತೆ ಇನ್ನು ಮುಂದೆ ಕಾಣಿಸಿಕೊಂಡರೆ ಪ್ರಾಣ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾರೆ.

ದೌರ್ಜನ್ಯಕ್ಕೊಳಗಾದ ಮಹಿಳೆ ತನ್ನ ಪೋಷಕರಿಗೆ ಕರೆಮಾಡಿ ನಡೆದ ವಿಷಯ ಮತ್ತು ಸ್ಥಳದ ಬಗ್ಗೆ ಮಾಹಿತಿ ನೀಡಿದ್ದಾರೆ. ಪೋಷಕರು ಬಂದು ಆಕೆಯನ್ನು ರಕ್ಷಿಸಿದ್ದಾರೆ. ಬಳಿಕ ಸಂತ್ರಸ್ತೆ ವ್ಯಾರಾ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಪೊಲೀಸರು ಚೌಧರಿಯ ಪೋಷಕರು ಮತ್ತು ಇತರರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಹಲ್ಲೆ, ಮಹಿಳೆಯರ ಮಾನಹಾನಿ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಉತ್ತರಪ್ರದೇಶ: ದಲಿತ ಬಾಲಕನಿಗೆ ಥಳಿತ; ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...