ಗುಜರಾತ್‌ನ ದಾಹೋದ್ ಜಿಲ್ಲೆಯ ಹಳ್ಳಿಯೊಂದರಲ್ಲಿ 23 ವರ್ಷದ ಬುಡಕಟ್ಟು ಮಹಿಳೆಯೊಬ್ಬರ ಮೇಲೆ ಆಕೆಯ ಪತಿ ಮತ್ತು ಇತರ ಕೆಲವು ಗ್ರಾಮಸ್ಥರು ಹಲ್ಲೆ ನಡೆಸಿ, ಬೆತ್ತಲೆಗೊಳಿಸಿ ಹಳ್ಳಿಯಲ್ಲಿ ಮೆರವಣಿಗೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ.
ಸಂತ್ರಸ್ತ ಮಹಿಳೆಯ ಪತಿ ಮತ್ತು ಇತರ 18 ಮಂದಿ ಗ್ರಾಮಸ್ಥರ ಮೇಲೆ ದೂರು ದಾಖಲಾಗಿದ್ದು, 19 ಜನರನ್ನು ಬಂಧಿಸಲಾಗಿದೆ. ಜುಲೈ 6 ರಂದು ಬುಡಕಟ್ಟು ಪ್ರಾಬಲ್ಯದ ಖಜುರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜುಲೈ ಈ ತಿಂಗಳ ಆರಂಭದಲ್ಲಿ ನಡೆದ ಘಟನೆಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬಳಿಕ ಪೊಲೀಸರು ಮಂಗಳವಾರ ಎಫ್‌ಐಆರ್ ದಾಖಲಿಸಿದ್ದಾರೆ ಸಬ್ ಇನ್ಸ್‌ಪೆಕ್ಟರ್ ಬಿಎಂ ಪಟೇಲ್ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ವೀಡಿಯೊದಲ್ಲಿ, ಮಹಿಳೆಯ ಪತಿ, ಇತರ ಪುರುಷರು, ಅವರ ಸಂಬಂಧಿಕರು ಸಾರ್ವಜನಿಕವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗುವುದು, ಹೊಡೆಯುವುದು ಕಂಡುಬರುತ್ತದೆ ಎಂದು ಸಬ್ ಇನ್ಸ್‌ಪೆಕ್ಟರ್ ಬಿಎಂ ಪಟೇಲ್ ತಿಳಿಸಿದ್ದಾರೆ. ಮಹಿಳೆಗೆ ತನ್ನ ಗಂಡನನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆಯುವ ಶಿಕ್ಷೆಯನ್ನು ಸಹ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಹರಿಯಾಣ: ದಲಿತ ಯುವತಿಯನ್ನು ಅಪಹರಿಸಿ ಸತತ 9 ದಿನ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು
ವಿಡಿಯೊದಲ್ಲಿ ಇತರ ಮಹಿಳೆಯರು ಸಂತ್ರಸ್ತೆಗೆ ಬಟ್ಟೆಗಳನ್ನು ನೀಡಲು ಬಂದಾಗ, ಆಕೆಯ ಪತಿ ಬಟ್ಟೆಯನ್ನು ಕಸಿದುಕೊಳ್ಳುವುದನ್ನು ಕಾಣಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.
ಸಂತ್ರಸ್ತ ಮಹಿಳೆ ಇತ್ತೀಚೆಗೆ ಇನ್ನೊಬ್ಬ ಪುರುಷನೊಂದಿಗೆ ಓಡಿಹೋಗಿದ್ದಳು ಎಂದು ಆರೋಪಿಸಲಾಗಿದೆ. ಆಕೆಯ ಪತಿ ಮತ್ತು ಇತರ ಗ್ರಾಮಸ್ಥರು ಆಕೆಯನ್ನು ಪತ್ತೆ ಹಚ್ಚಿ ಹಳ್ಳಿಗೆ ಕರೆತಂದಿದ್ದಾರೆ. ಜುಲೈ 6 ರಂದು ಆಕೆಗೆ ಅಮಾನವೀಯವಾಗಿ ಶಿಕ್ಷೆ ನೀಡಲಾಗಿದೆ. ವೀಡಿಯೊದಲ್ಲಿ ನೋಡಿದ ಎಲ್ಲ ಆರೋಪಿಗಳನ್ನು ನಾವು ಬಂಧಿಸಿದ್ದೇವೆ ಎಂದು ಪಟೇಲ್ ಮಾಹಿತಿ ನೀಡಿದ್ದಾರೆ.
ಭಾರತೀಯ ದಂಡ ಸಂಹಿತೆಯಡಿ ಗಲಭೆ, ಹಲ್ಲೆ, ಕ್ರಿಮಿನಲ್ ಬೆದರಿಕೆ, ಮಹಿಳೆಗೆ ಅವಮಾನಿಸಿದ ಆರೋಪ ಮತ್ತು ಘಟನೆಯ ವಿಡಿಯೋ ಚಿತ್ರೀಕರಣ ಮತ್ತು ಪ್ರಸಾರಕ್ಕಾಗಿ ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ



ಕಾನೂನು ಕ್ರಮ ಗೊಳ್ಳುತ್ತದೆ ಎಂಬ ವಿಶ್ವಾಸ ಇದೆ.ಆದರೆ ಮರುದಿನವೇ ಎಲ್ಲಾ ಆರೋಪಿಗಳು ಮರಳಿ ಮನೆಗೆ ಸೇರುತ್ತಾರೆಯೋ, ಶಿಕ್ಷೆ ಗೆ ಒಳಪಡುತ್ತಾರಯೋ ಗೊತ್ತಿಲ್ಲ.ಕಾನೂನು ಕುರುಡಾಗಿ ದಿಲ್ಲಿ.