Homeಮುಖಪುಟಗುಜರಾತ್: ಬುಡಕಟ್ಟು ಮಹಿಳೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪತಿ ಮತ್ತು ಗ್ರಾಮಸ್ಥರು

ಗುಜರಾತ್: ಬುಡಕಟ್ಟು ಮಹಿಳೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪತಿ ಮತ್ತು ಗ್ರಾಮಸ್ಥರು

- Advertisement -
- Advertisement -

ಗುಜರಾತ್‌ನ ದಾಹೋದ್ ಜಿಲ್ಲೆಯ ಹಳ್ಳಿಯೊಂದರಲ್ಲಿ 23 ವರ್ಷದ ಬುಡಕಟ್ಟು ಮಹಿಳೆಯೊಬ್ಬರ ಮೇಲೆ ಆಕೆಯ ಪತಿ ಮತ್ತು ಇತರ ಕೆಲವು ಗ್ರಾಮಸ್ಥರು ಹಲ್ಲೆ ನಡೆಸಿ, ಬೆತ್ತಲೆಗೊಳಿಸಿ ಹಳ್ಳಿಯಲ್ಲಿ ಮೆರವಣಿಗೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ.

ಸಂತ್ರಸ್ತ ಮಹಿಳೆಯ ಪತಿ ಮತ್ತು ಇತರ 18 ಮಂದಿ ಗ್ರಾಮಸ್ಥರ ಮೇಲೆ ದೂರು ದಾಖಲಾಗಿದ್ದು, 19 ಜನರನ್ನು ಬಂಧಿಸಲಾಗಿದೆ. ಜುಲೈ 6 ರಂದು ಬುಡಕಟ್ಟು ಪ್ರಾಬಲ್ಯದ ಖಜುರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ ಈ ತಿಂಗಳ ಆರಂಭದಲ್ಲಿ ನಡೆದ ಘಟನೆಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬಳಿಕ ಪೊಲೀಸರು ಮಂಗಳವಾರ ಎಫ್‌ಐಆರ್ ದಾಖಲಿಸಿದ್ದಾರೆ ಸಬ್ ಇನ್ಸ್‌ಪೆಕ್ಟರ್ ಬಿಎಂ ಪಟೇಲ್ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ವೀಡಿಯೊದಲ್ಲಿ, ಮಹಿಳೆಯ ಪತಿ, ಇತರ ಪುರುಷರು, ಅವರ ಸಂಬಂಧಿಕರು ಸಾರ್ವಜನಿಕವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗುವುದು, ಹೊಡೆಯುವುದು ಕಂಡುಬರುತ್ತದೆ ಎಂದು ಸಬ್ ಇನ್ಸ್‌ಪೆಕ್ಟರ್ ಬಿಎಂ ಪಟೇಲ್ ತಿಳಿಸಿದ್ದಾರೆ. ಮಹಿಳೆಗೆ ತನ್ನ ಗಂಡನನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆಯುವ ಶಿಕ್ಷೆಯನ್ನು ಸಹ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ದಲಿತ ಯುವತಿಯನ್ನು ಅಪಹರಿಸಿ ಸತತ 9 ದಿನ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು

ವಿಡಿಯೊದಲ್ಲಿ ಇತರ ಮಹಿಳೆಯರು ಸಂತ್ರಸ್ತೆಗೆ ಬಟ್ಟೆಗಳನ್ನು ನೀಡಲು ಬಂದಾಗ, ಆಕೆಯ ಪತಿ ಬಟ್ಟೆಯನ್ನು ಕಸಿದುಕೊಳ್ಳುವುದನ್ನು ಕಾಣಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆ ಇತ್ತೀಚೆಗೆ ಇನ್ನೊಬ್ಬ ಪುರುಷನೊಂದಿಗೆ ಓಡಿಹೋಗಿದ್ದಳು ಎಂದು ಆರೋಪಿಸಲಾಗಿದೆ. ಆಕೆಯ ಪತಿ ಮತ್ತು ಇತರ ಗ್ರಾಮಸ್ಥರು ಆಕೆಯನ್ನು ಪತ್ತೆ ಹಚ್ಚಿ ಹಳ್ಳಿಗೆ ಕರೆತಂದಿದ್ದಾರೆ. ಜುಲೈ 6 ರಂದು ಆಕೆಗೆ ಅಮಾನವೀಯವಾಗಿ ಶಿಕ್ಷೆ ನೀಡಲಾಗಿದೆ. ವೀಡಿಯೊದಲ್ಲಿ ನೋಡಿದ ಎಲ್ಲ ಆರೋಪಿಗಳನ್ನು ನಾವು ಬಂಧಿಸಿದ್ದೇವೆ ಎಂದು ಪಟೇಲ್ ಮಾಹಿತಿ ನೀಡಿದ್ದಾರೆ.

ಭಾರತೀಯ ದಂಡ ಸಂಹಿತೆಯಡಿ ಗಲಭೆ, ಹಲ್ಲೆ, ಕ್ರಿಮಿನಲ್ ಬೆದರಿಕೆ, ಮಹಿಳೆಗೆ ಅವಮಾನಿಸಿದ ಆರೋಪ ಮತ್ತು ಘಟನೆಯ ವಿಡಿಯೋ ಚಿತ್ರೀಕರಣ ಮತ್ತು ಪ್ರಸಾರಕ್ಕಾಗಿ ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾನೂನು ಕ್ರಮ ಗೊಳ್ಳುತ್ತದೆ ಎಂಬ ವಿಶ್ವಾಸ ಇದೆ.ಆದರೆ ಮರುದಿನವೇ ಎಲ್ಲಾ ಆರೋಪಿಗಳು ಮರಳಿ ಮನೆಗೆ ಸೇರುತ್ತಾರೆಯೋ, ಶಿಕ್ಷೆ ಗೆ ಒಳಪಡುತ್ತಾರಯೋ ಗೊತ್ತಿಲ್ಲ.ಕಾನೂನು ಕುರುಡಾಗಿ ದಿಲ್ಲಿ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...