Homeಮುಖಪುಟವಿಚಾರಣೆಯಿಲ್ಲದೆ 2 ವರ್ಷ ಜೈಲಿನಲ್ಲೇ ಕಳೆದ ಬುಡಕಟ್ಟು ಯುವತಿ!

ವಿಚಾರಣೆಯಿಲ್ಲದೆ 2 ವರ್ಷ ಜೈಲಿನಲ್ಲೇ ಕಳೆದ ಬುಡಕಟ್ಟು ಯುವತಿ!

- Advertisement -
- Advertisement -

ಮಾನವ ಕಳ್ಳಸಾಗಣೆ ಆರೋಪದ ಮೇಲೆ ವಿಚಾರಣೆಯಿಲ್ಲದೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ ಮೇಘಾಲಯದ 21 ವರ್ಷದ ಬುಡಕಟ್ಟು ಯುವತಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದೆ. ವಿಚಾರಣೆಯಿಲ್ಲದೆ ಅವರನ್ನು ಅನಿರ್ದಿಷ್ಟವಾಗಿ ಬಂಧನ ಮಾಡಿದ್ದು ಸಮರ್ಥನೀಯವಲ್ಲ ಎಂದು ನ್ಯಾಯಾಲಯ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಮಾನವ ಕಳ್ಳಸಾಗಣೆ ಆರೋಪ ಹೊತ್ತಿರುವ ಮೇಘಾಲಯದ 21 ವರ್ಷದ ಯುವತಿ ದ್ರಭಮೋನ್ ಫಾವಾಗೆ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ:ತಮಿಳುನಾಡು: ಫಾಕ್ಸ್‌ಕಾನ್ ಕಂಪನಿ ಕ್ಯಾಂಟೀನ್ ಊಟದಿಂದಾಗಿ 8 ಮಹಿಳೆಯರ ಸಾವು – ಭುಗಿಲೆದ್ದ ಪ್ರತಿಭಟನೆ

“ಯುವತಿಯು 18 ತಿಂಗಳ ಅವಧಿ ಜೈಲುವಾಸ ಅನುಭವಿಸಿದ್ದಾರೆ. ಕಸ್ಟಡಿಯಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ ಎಂಬ ಅಂಶವನ್ನು ಪರಿಗಣಿಸಿ, ಅವರಿಗೆ ಜಾಮೀನು ನೀಡಲು ಸೂಕ್ತವಾದ ಪ್ರಕರಣವೆಂದು ನಾವು ಪರಿಗಣಿಸುತ್ತೇವೆ. ಅದರಂತೆ, ವಿಚಾರಣಾ ನ್ಯಾಯಾಲಯವು ವಿಧಿಸುವ ಷರತ್ತುಗಳು ಮತ್ತು ಷರತ್ತುಗಳ ಮೇಲೆ ಜಾಮೀನಿನ ಮೇಲೆ ವಿಸ್ತರಿಸಲು ನಿರ್ದೇಶಿಸಲಾಗಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ದ್ರಭಮೋನ್ ಫಾವಾ ಬಂಧನದ ಸಮಯದಲ್ಲಿ ಗರ್ಭಿಣಿಯಾಗಿದ್ದರು ಮತ್ತು ಅವರು ಫೆಬ್ರವರಿ 2020 ರಿಂದ ಜೈಲಿನಲ್ಲಿದ್ದರು. ಈ ವೇಳೆಯೇ ಅವರು ಜೈಲಿನಲ್ಲಿ ಮಗುವಿಗೆ ಜನ್ಮ ನೀಡಿದ್ದರು.

“ಗೌರವಾನ್ವಿತ ಕೆಲಸದ ನೆಪದಲ್ಲಿ ಅವರನ್ನು ದೆಹಲಿಗೆ ಕರೆಸಿಕೊಳ್ಳಲಾಗಿತ್ತು. ಆದರೆ ನಂತರ ನಿರ್ದಯವಾಗಿ ಅವರನ್ನು ವೇಶ್ಯಾವಾಟಿಕೆಗೆ ದೂಡಲಾಯಿತು, ಆದ್ದರಿಂದ ಮಹಿಳೆ ಕೂಡಾ ವೇಶ್ಯಾವಾಟಿಕೆ ದಂಧೆಗೆ ಬಲಿಪಶು” ಎಂದು ಯುವತಿಯನ್ನು ಪ್ರತಿನಿಧಿಸಿದ ಹಿರಿಯ ವಕೀಲ ಸಲ್ಮಾನ್ ಖುರ್ಷಿದ್ ಮತ್ತು ವಕೀಲ ಟಿ.ಕೆ.ನಾಯಕ್ ಅವರು ಸುಪ್ರೀಂ ಕೋರ್ಟ್‌ಗೆ ಹೇಳಿದ್ದಾರೆ.

ಇದನ್ನೂ ಓದಿ:‘ಭಾರತೀಯ’ ಎಂದು ಘೋಷಿಸಲ್ಪಟ್ಟು ನಂತರ ‘ವಿದೇಶಿ’ ಎಂದು ಬಂಧಿಸಲ್ಪಟ್ಟ ಮಹಿಳೆಯ ಬಿಡುಗಡೆಗೆ ಗುವಾಹಟಿ ಹೈಕೋರ್ಟ್ ಆದೇಶ

ಯುವತಿಯನ್ನು ಬಂಧಿಸುವ ಸಮಯದಲ್ಲಿ ಅವರು ಗರ್ಭಿಣಿಯಾಗಿದ್ದರು. ಸೆರೆಮನೆಯೊಳಗೆ ಅವರು ತಮ್ಮ ಗರ್ಭಾವಸ್ಥೆಯನ್ನು ಸಮಯವನ್ನು ಕಳೆದಿದ್ದರು, ಹೀಗಾಗಿ ಜೈಲಿನಲ್ಲಿಯೆ ಮಗುವಿಗೆ ಜನ್ಮ ನೀಡಿದ್ದಾರೆ ಎಂದು ನ್ಯಾಯಾಲಯಕ್ಕೆ ವಕೀಲರು ತಿಳಿಸಿದ್ದಾರೆ.

ದೆಹಲಿ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರು ಯುವತಿಯ ವಿರುದ್ಧದ ಅಪರಾಧಗಳ ತೀವ್ರತೆ ಮತ್ತು ಗಂಭೀರತೆಯ ಆಧಾರದ ಮೇಲೆ ಅವರ ಅರ್ಜಿಯನ್ನು ತೀವ್ರವಾಗಿ ವಿರೋಧಿಸಿದ್ದರು.

ಇದನ್ನೂ ಓದಿ:ಗೋವಾ ಚುನಾವಣೆ: ಟಿಎಂಸಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಪ್ರತಿ ತಿಂಗಳು 5 ಸಾವಿರ ರೂ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...