ಪೆಗಾಸಸ್ ಪ್ರತಿ ಹರಿದು ಪ್ರತಿಭಟನೆ: ರಾಜ್ಯಸಭೆಯಿಂದ ಟಿಎಂಸಿ ಸಂಸದ ಶಾಂತನು ಸೇನ್ ಅಮಾನತು

ಸಂಸತ್‌ ಅಧಿವೇಶನದಲ್ಲಿ ಸಚಿವ ಅಶ್ವಿನಿ ವೈಷ್ಣವ್ ಅವರ ಹೇಳಿಕೆ ಪತ್ರಗಳನ್ನು ಹರಿದು ಹಾಕಿದ್ದ ತೃಣಮೂಲ ಕಾಂಗ್ರೆಸ್ ಸಂಸದ ಶಾಂತನು ಸೇನ್ ಅವರನ್ನು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ಗುರುವಾರ ಸಂಸತ್ತಿನಲ್ಲಿ ಪೆಗಾಸಸ್ ಗೂಢಚರ್ಯೆ ಹಗರಣದ ಬಗ್ಗೆ ಹೇಳಿಕೆ ನೀಡಲು ಮುಂದಾದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರ ಹೇಳಿಕೆ ಪತ್ರಗಳನ್ನು ಕಸಿದುಕೊಂಡು ಟಿಎಂಸಿ ಸಂಸದ ಶಾಂತನು ಸೇನ್ ಹರಿದುಹಾಕಿದ್ದರು.

ಬಳಿಕ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ.ಮುರಲೀಧರನ್ , ಶಾಂತನು ಸೇನ್ ಅವರ ಅಮಾನತಿಗೆ ಒತ್ತಾಯಿಸಿದ್ದರು. ಧ್ವನಿ ಮತದಿಂದ ಅವರ ಅಮಾನತನ್ನು ಅಂಗೀಕರಿಸಲಾಯಿತು. ಉಪಾಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರು ಸೇನ್ ಅವರನ್ನು ಸದನದಿಂದ ಹೊರಹೋಗುವಂತೆ ತಿಳಿಸಿದರು. ಅಮಾನತು ಮಾಡಿ ಆದೇಶಿಸಿದನ್ನು ಟಿಎಂಸಿ ಸಂಸದರು ಖಂಡಿಸಿದ್ದು, ಕೋಲಾಹಲ ಸೃಷ್ಟಿಸಿದ್ದಾರೆ.

ಇದನ್ನೂ ಓದಿ: ಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ – ಯೋಗೇಂದ್ರ ಯಾದವ್

ಪ್ರತಿಪಕ್ಷದ ಸದಸ್ಯರು ವಿವಿಧ ವಿಷಯಗಳ ಕುರಿತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಮುಂದುವರಿಸಿದ್ದರಿಂದ ಲೋಕಸಭೆಯನ್ನೂ ಶುಕ್ರವಾರವೂ ಮುಂದೂಡಲಾಯಿತು.

ಎರಡು ಸದನಗಳಲ್ಲಿ ಪೆಗಾಸಸ್ ಚರ್ಚೆಗೆ ಸಂಬಂಧಿಸಿದಂತೆ ಕಾಂಗ್ರೆಸ್, ಟಿಎಂಸಿ ಸೇರಿದಂತೆ ವಿಪಕ್ಷಗಳು ಗದ್ದಲ ಉಂಟುಮಾಡಿದೆ. ಗುರುವಾರ ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್, ಶಿರೋಮಣಿ ಅಕಾಲಿ ದಳ ಮತ್ತು ಕೇರಳದ ಸಂಸದರು ಪ್ರತಿಭಟನೆ ನಡೆಸಿದರು.

ಜುಲೈ 22 ರಿಂದ ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ, ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್ ಪ್ರಾರಂಭಿಸಿದ್ದಾರೆ. ಮಾನ್ಸೂನ್ ಅಧಿವೇಶನ ನಡೆಯುವ ಪ್ರತಿದಿನ 200 ಜನರ ರೈತರ ಗುಂಪು ಆಂದೋಲನ ನಡೆಸಲಿದೆ ಎಂದು ರೈತ ನಾಯಕರು ಹೇಳಿದ್ದಾರೆ. ಜುಲೈ 22 ರಿಂದ ಆಗಸ್ಟ್ 9 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 5 ರವರೆಗೆ ಜಂತರ್ ಮಂತರ್ ನಲ್ಲಿ ಕಿಸಾನ್ ಸಂಸತ್ ನಡೆಸಲು ದೆಹಲಿ ಸರ್ಕಾರ ಮತ್ತು ಪೊಲೀಸರು ಒಪ್ಪಿಗೆ ನೀಡಿದ್ದಾರೆ

ವಾಡಿಕೆಯ ವಾರಾಂತ್ಯದ ವಿರಾಮದ ನಂತರ ಲೋಕಸಭೆ ಜುಲೈ 26 ರಂದು ಮತ್ತೆ ಆರಂಭವಾಗಲಿದೆ.


ಇದನ್ನೂ ಓದಿ: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ಸೈಕಲ್‌ನಲ್ಲಿ ಸಂಸತ್ ಅಧಿವೇಶನಕ್ಕೆ ಬಂದ ಟಿಎಂಸಿ ಸಂಸದರು

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here