Homeಮುಖಪುಟಅಮಿತ್ ಶಾ ಭಾಷಣದ ಸುಳ್ಳು ಕಂಡುಹಿಡಿದು ತಿರುಗೇಟು ನೀಡಿದ ಡೆರೆಕ್ ಒಬ್ರಿಯೆನ್

ಅಮಿತ್ ಶಾ ಭಾಷಣದ ಸುಳ್ಳು ಕಂಡುಹಿಡಿದು ತಿರುಗೇಟು ನೀಡಿದ ಡೆರೆಕ್ ಒಬ್ರಿಯೆನ್

ಮಮತಾ ಬ್ಯಾನರ್ಜಿ ಬೇರೆ ಪಕ್ಷ ಸೇರಲು ಕಾಂಗ್ರೆಸ್ ಅನ್ನು ತೊರೆಯಲಿಲ್ಲ, 1998 ರಲ್ಲಿ ಅವರೇ ಹೊಸ ಪಕ್ಷವನ್ನು ಸ್ಥಾಪಿಸಿದರು ಎಂದು ಡೆರೆಕ್ ಒಬ್ರಿಯೆನ್ ತಿರುಗೇಟು ನೀಡಿದ್ದಾರೆ.

- Advertisement -
- Advertisement -

ಪ್ರಸ್ತುತ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮೇಲೆ ನಡೆಸಿರುವ ವಾಗ್ದಾಳಿಗೆ, ಟಿಎಂಸಿ ಸಂಸದ ಡೆರೆಕ್ ಒಬ್ರಿಯೆನ್ ತಿರುಗೇಟು ನೀಡಿದ್ದಾರೆ. ಅಮಿತ್‌ ಶಾ ಏಳು ಸುಳ್ಳುಗಳ ತುಣುಕುಗಳನ್ನು ಒಟ್ಟುಗೂಡಿಸಿ ಭಾಷಣ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಆಡಳಿತಾರೂಢ ತೃಣಮೂಲದ ಮೇಲೆ ಆಗಾಗ್ಗೆ ಸುಳ್ಳು ದಾಳಿ ನಡೆಸುತ್ತಿರುವ ಬಿಜೆಪಿ ನಾಯಕರ ಮಾತುಗಳನ್ನು ಫ್ಯಾಕ್ಟ್ ಚೆಕ್ ಮಾಡಿ ದಾಳಿ ನಡೆಸುತ್ತಿರುವ ಡೆರೆಕ್ ಒಬ್ರಿಯೆನ್, ಅಮಿತ್ ಶಾ ಭಾಷಣದಲ್ಲಿನ 7 ಸುಳ್ಳುಗಳನ್ನು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ, ಬಿಜೆಪಿ ನಾಯಕರನ್ನು ಪ್ರವಾಸಿ ಗುಂಪು ಎಂದು ವ್ಯಂಗ್ಯವಾಡಿದ್ದಾರೆ. ಕಳೆದ ಬಾರಿಯ ಬಂಗಾಳ ಪ್ರವಾಸದಲ್ಲಿಯೂ ಮಮತಾ ಬ್ಯಾನರ್ಜಿ, ಅಮಿತ್ ಶಾ ಅವರನ್ನು ಹೊರಗಿನವರು ಎಂದು ಬಣ್ಣಿಸಿದ್ದರು. ಇದನ್ನು ಒಬ್ರಿಯೆನ್ ಕೂಡಾ ಮುಂದುವರೆಸಿದ್ದಾರೆ. 

ಇದನ್ನೂ ಓದಿ: ಯುಪಿ ಪೊಲೀಸರ ಅಟ್ಟಹಾಸ: ಮಹಿಳಾ ಸಂಸದೆಯನ್ನು ದೂಡಿ, ಡೆರೆಕ್ ಒಬ್ರಿಯೆನ್‌ರನ್ನು ನೆಲಕ್ಕೆ ಬೀಳಿಸಿದ ಪುರುಷ ಪೊಲೀಸರು

7 ಸುಳ್ಳುಗಳಿಗೆ ಉತ್ತರ ನೀಡಿರುವ ಡೆರೆಕ್ ಒಬ್ರಿಯೆನ್,  “ಪ್ರವಾಸಿ ಗ್ಯಾಂಗ್” ನ ಸಹಾಯಕರೊಬ್ಬರು ಬಂಗಾಳದಲ್ಲಿ ಮಾಡಿದ ಭಾಷಣದ ಫ್ಯಾಕ್ಟ್‌ಚೆಕ್ ಎಂದು ಹೇಳಿದ್ದಾರೆ. ಜೊತೆಗೆ ಒಂದು ಭಾಷಣದಲ್ಲಿ 7 ಸುಳ್ಳುಗಳ ತುಣುಕುಗಳನ್ನು ಕೂಡಿಸಿದ್ದಾರೆ ಎಂದು ಹೇಳಿದ್ದಾರೆ.

ಮುಂದುವರೆದು, ಅಮಿತ್ ಶಾ ಅವರ ಮಾನದಂಡಗಳಿಗೆ ಈ ಸುಳ್ಳುಗಳು ಕಡಿಮೆಯಾಗಿವೆ ಎಂದು ವ್ಯಂಗ್ಯವಾಡಿದ್ದಾರೆ. ಏಳು ಸುಳ್ಳುಗಳ ತುಣುಕನ್ನು ಒಂದುಗೂಡಿಸಿ ಭಾಷಣ ಮಾಡಿದ್ದಾರೆ ಎಂದು ಆಧಾರ ಸಮೇತ ಟೀಕಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದನ್ನು ಟೀಕಿಸಿದ್ದ ಅಮಿತ್ ಶಾ, ಮತ್ತೊಂದು ಪಕ್ಷಕ್ಕಾಗಿ ಕಾಂಗ್ರೆಸ್ ಅನ್ನು ತೊರೆದಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡೆರೆಕ್ ಒಬ್ರಿಯೆನ್, ಮಮತಾ ಬ್ಯಾನರ್ಜಿ ಬೇರೆ ಪಕ್ಷ ಸೇರಲು ಕಾಂಗ್ರೆಸ್ ಅನ್ನು ತೊರೆಯಲಿಲ್ಲ. ಆಕೆಯೇ ಹೊಸ ಪಕ್ಷವನ್ನು 1998 ರಲ್ಲಿ ಸ್ಥಾಪಿಸಿದರು ಎಂದು ತಿರುಗೇಟು ನೀಡಿದ್ದಾರೆ.

Image

ರ್‍ಯಾಲಿಯಲ್ಲಿ ಅಮಿತ್ ಶಾ ಮಾಡಿದ ಎಲ್ಲಾ ಆರೋಪಗಳನ್ನು ಸುಳ್ಳು ಎಂದಿರುವ ಸಂಸದ ಡೆರೆಕ್ ಒಬ್ರಿಯೆನ್, ಪ್ರತಿಯೊಂದಕ್ಕೂ ಉತ್ತರ ನೀಡಿದ್ದಾರೆ.

ಅಮಿತ್ ಶಾ, ಸಿಎಂ ಮಮತಾ ಬ್ಯಾನರ್ಜಿ ಮೇಲೆ  ಅಧಿಕಾರ ದುರುಪಯೋಗ, ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದಂತಹ ಆರೋಪಗಳನ್ನು ಮಾಡಿದ್ದಾರೆ. ಈ ಕಾರಣದಿಂದ ಅನೇಕ ಟಿಎಂಸಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಮಿತ್ ಶಾ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಐವರು ಶಾಸಕರು ಸೇರಿದಂತೆ ಒಂಬತ್ತು ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಟಿಎಂಸಿ ಪ್ರಭಾವಿ ಮುಖಂಡ ಮತ್ತು ಮಾಜಿ ಸಚಿವ ಸುವೇಂದು ಅಧಿಕಾರಿ ಸೇರಿದಂತೆ, 2018 ರಲ್ಲಿ ಸಿಪಿಎಂ ತೊರೆದು ಟಿಎಂಸಿ ಸೇರಿದ್ದ ಶಾಸಕಿ ದೀಪಾಲಿ ಬಿಸ್ವಾಸ್ ಮತ್ತು ‌ಸಿಪಿಎಂ, ಸಿಪಿಐ ಹಾಗೂ ಕಾಂಗ್ರೆಸ್‌ನ ತಲಾ ಒಬ್ಬ ಶಾಸಕರು ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಮೇದಿನಿಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸೇರಿದರು. ಬರ್ಧಮಾನ್‌ ಪೂರ್ವ ಕ್ಷೇತ್ರದ ಟಿಎಂಸಿ ಸಂಸದ ಸುನಿಲ್‌ ಮಂಡಲ್‌ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.


ಇದನ್ನೂ ಓದಿ: ಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...