Homeಮುಖಪುಟತ್ರಿಪುರ: ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ನಿಷೇಧ

ತ್ರಿಪುರ: ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ನಿಷೇಧ

- Advertisement -
- Advertisement -

ಶಾಲಾ ಅವಧಿಯಲ್ಲಿ ಅಥವಾ ನಂತರದಲ್ಲಿ ಶಾಲಾ ಆವರಣದಲ್ಲಿ ಯಾವುದೇ ರೀತಿಯ ರಾಜಕೀಯ ರ್‍ಯಾಲಿಗಳನ್ನು ಹಾಗೂ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ತ್ರಿಪುರಾ ಸರ್ಕಾರ ಶನಿವಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಶಾಲಾ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ಅವಕಾಶ ನೀಡುತ್ತಿರುವ ಮುಖ್ಯೋಪಾಧ್ಯಾಯರ ವಿರುದ್ಧ ಕೆಲವು ದೂರುಗಳು ಬಂದ ನಂತರ ರಾಜ್ಯ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದೆ.

ಶಾಲಾ ಆವರಣದಲ್ಲಿ ಇಂತಹ ಯಾವುದೇ ರಾಜಕೀಯ ಕಾರ್ಯಕ್ರಮಗಳನ್ನು ನಡೆಸಲು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ)ವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಯು ಆದೇಶಿಸಿದೆ.

“ಆಟದ ಮೈದಾನ ಸೇರಿದಂತೆ ಯಾವುದೇ ಶಾಲೆಗೆ ಸಂಬಂಧಿಸಿದ ಯಾವುದೇ ಸಂಪನ್ಮೂಲಗಳನ್ನು ರಾಜಕೀಯ ಕಾರ್ಯಕ್ರಮ ಹಾಗೂ ರ್‍ಯಾಲಿಗಳಿಗಾಗಿ ರಾಜಕೀಯ ಪಕ್ಷಗಳು ಬಳಸುವಂತಿಲ್ಲ. ರಜಾ ದಿನಗಳಲ್ಲಿ ಅಥವಾ ಶಾಲಾ ಸಮಯದ ನಂತರ ಇತರ ಕಾರ್ಯಕ್ರಮಗಳನ್ನು ಆಯೋಜಿಸಲು ಕೆಲವು ಮುಖ್ಯೋಪಾಧ್ಯಾಯರು/ಟಿಐಸಿಗಳು ಅವಕಾಶ ನೀಡುತ್ತಿದ್ದಾರೆ. ಇದು ನಿಯಮದ ಉಲ್ಲಂಘನೆಯಾಗಿದೆ” ಎಂದು ಇಲಾಖೆ ಹೇಳಿದೆ.

ಕೋವಿಡ್-19 ಲಾಕ್‌ಡೌನ್‌ ಕ್ರಮಗಳಿಂದಾಗಿ ಈಗಾಗಲೇ ತರಗತಿ ಬೋಧನೆಯ ಮೇಲೆ ತೀವ್ರ ಪರಿಣಾಮ ಬೀರಿರುವುದರಿಂದ ಶಾಲಾ ಸಮಯದಲ್ಲಿ ದೈಹಿಕ ತರಗತಿಗಳಲ್ಲಿನ ಅಧ್ಯಯನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತ್ರಿಪುರಾ ಸರ್ಕಾರ ಒತ್ತಿಹೇಳಿದೆ.

“ಶಿಕ್ಷಣ-ಕಲಿಕಾ ಚಟುವಟಿಕೆಗಳಿಗೆ ಅಡ್ಡಿಪಡಿಸುವ ಮತ್ತು ಇಲಾಖೆಯ ನಿಯಮಾವಳಿಗಳನ್ನು ಉಲ್ಲಂಘಿಸುವ ಇಂತಹ ಕಾರ್ಯಕ್ರಮಗಳಿಗೆ ಮುಖ್ಯೋಪಾಧ್ಯಾಯರು ಅವಕಾಶ ನೀಡುತ್ತಿರುವುದು ಸ್ವೀಕಾರಾರ್ಹವಲ್ಲ. ಈಗಾಗಲೇ ಮಾಡಿರುವ ಉಲ್ಲಂಘನೆಗಳಿಗಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಲ್ಲಾ ಮುಖ್ಯೋಪಾಧ್ಯಾಯರು/ಟಿಐಸಿಗಳಿಗೆ ತಿಳಿಸಬೇಕು ಎಂದೂ ಸರ್ಕಾರ ಹೇಳಿದೆ. ಈ ಮೂಲಕ, ಭವಿಷ್ಯದಲ್ಲಿ ನಿಯಮವನ್ನು ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡಬೇಕು” ಎಂದೂ ಆದೇಶದಲ್ಲಿ ಹೇಳಲಾಗಿದೆ.

“ಯಾವುದೇ ಸಂಸ್ಥೆಯು ಅನುಮತಿ ಪಡೆಯದೆ ಶಾಲೆಯ ಆವರಣದಲ್ಲಿ ಕಾರ್ಯಕ್ರಮ/ರ್‍ಯಾಲಿಗಳನ್ನು ನಡೆಸಲು ಯೋಜಿಸುತ್ತಿದ್ದರೆ, ಆ ಬಗ್ಗೆ HM/TIC ಅವರು ಶಾಲೆಗಳ ಇನ್ಸ್ಪೆಕ್ಟರ್/ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ತಿಳಿಸಬೇಕು. ಅಂತಹ ಮಾಹಿತಿಯನ್ನು ಸ್ವೀಕರಿಸಿದ ನಂತರ, ಆ ಬಗ್ಗೆ ಶಿಕ್ಷಣಾಧಿಕಾರಿಗಳು ಸ್ಥಳೀಯ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ತಕ್ಷಣವೇ ಕ್ರಮಕೈಗೊಳ್ಳಬೇಕು” ಎಂದು ಸರ್ಕಾರ ಹೇಳಿದೆ.

ದುರುದ್ದೇಶವೂ ಇರುವಂತಿದೆ: ಶಿವಸುಂದರ್‌

“ಬಿಜೆಪಿ ಸರ್ಕಾರ ಈ ಆದೇಶವನ್ನು ಸ್ವಾರ್ಥ ಹಿತಾಸಕ್ತಿಯಿಂದಲೂ ಮಾಡಿದಂತಿದೆ. ಯಾವುದೇ ರಾಜಕೀಯ ಪಕ್ಷಗಳಿಗೆ ಜನರನ್ನು ತಲುಪಲು, ಜನರನ್ನು ಸೇರಿಸಿ ಕಾರ್ಯಕ್ರಮಗಳನ್ನು ನಡೆಸಲು ಸುಲಭಕ್ಕೆ ಸಿಗುವ ಸ್ಥಳ ಎಂದರೆ ಶಾಲೆಗಳ ಆವರಣಗಳು. ಹೀಗಾಗಿ, ಬಿಜೆಪಿಗೆ ಈ ಆವರಣಗಳ ಹೊರತಾಗಿಯೂ ಜನರನ್ನು ತಲುಪಲು ವಾಟ್ಸಾಪ್, ಖಾಸಗೀ ಮೈದಾನಗಳು ಸೇರಿದಂತೆ ವಿವಿಧ ರೀತಿಯ ದಾರಿಗಳನ್ನು ಹುಡುಕಿಕೊಂಡಿದೆ” ಎಂದು ಸಾಮಾಜಿಕ ಕಾರ್ಯಕರ್ತ ಶಿವಸುಂದರ್ ಹೇಳಿದ್ದಾರೆ.

“ಶಾಲೆಗಳಲ್ಲಿ ಮಕ್ಕಳು ಆಗತಾನೇ ವಿಚಾರಗಳನ್ನು ಮೈಗೂಡಿಸಿಕೊಳ್ಳಲು ಆರಂಭಿಸಿರುತ್ತಾರೆ. ಬಿಜೆಪಿಯು ಶಿಕ್ಷಕರ ಮೂಲಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತನ್ನ ಧೋರಣೆ, ಮತಾಂಧತೆಯ ವಾದವನ್ನು ತುಂಬುತ್ತಿದೆ. ಆದರೆ, ಬೇರೆ ಪಕ್ಷಗಳು ಈಗಲೂ ಸಾರ್ವಜನಿಕ ಮೈದಾನಗಳ ಮೇಲೆ ಅವಲಂಬಿತವಾಗಿವೆ. ಜನರನ್ನು ಹಾಗೂ ವಿದ್ಯಾರ್ಥಿಗಳನ್ನು ತಲುಪಲು ಬೇರಾವುದೇ ಮಾರ್ಗಗಳಿಲ್ಲ. ಅಂತಹ ಪಕ್ಷಗಳು ಜನರನ್ನು ತಲುಪದಂತೆ ತಡೆಯುವ ಹುನ್ನಾರದಿಂದ ಬಿಜೆಪಿ ಸರ್ಕಾರ ಈ ಆದೇಶವನ್ನು ಹೊರಡಿಸಿರುವಂತಿದೆ. ಶಾಲಾ ಆವರಣಗಳನ್ನು ರಾಜಕೀಯ ಕಾರ್ಯಕ್ರಮಕ್ಕಾಗಿ ಬಳಸಿಕೊಳ್ಳದಂತೆ ತಡೆಯುವುದು ಸರಿ, ಆದರೆ, ಅದಕ್ಕೆ ಪರ್ಯಾಯವಾಗಿ ಸುಲಭಕ್ಕೆ ಸಿಗುವಂತಹ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು. ಇಲ್ಲವಾದರೆ ಇದು ಮತ್ತಷ್ಟು ಆಕ್ಷೇಪಾರ್ಹವಾಗುತ್ತದೆ” ಎನ್ನುತ್ತಾರೆ ಶಿವಸುಂದರ್‌.


ಇದನ್ನೂ ಓದಿರಿ: ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಪ್ರಶಾಂತ್ ಕಿಶೋರ್- ನಿತೀಶ್ ಕುಮಾರ್ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...