Homeರಾಜಕೀಯತ್ರಿಪುರಾ ವಿಧಾನಸಭಾ ಚುನಾವಣೆ: ಮೈತ್ರಿ ಮಾಡಿಕೊಳ್ಳಲಿರುವ ಕಾಂಗ್ರೆಸ್ ಮತ್ತು ಸಿಪಿಐ(ಎಂ)

ತ್ರಿಪುರಾ ವಿಧಾನಸಭಾ ಚುನಾವಣೆ: ಮೈತ್ರಿ ಮಾಡಿಕೊಳ್ಳಲಿರುವ ಕಾಂಗ್ರೆಸ್ ಮತ್ತು ಸಿಪಿಐ(ಎಂ)

- Advertisement -
- Advertisement -

ಮುಂಬರುವ ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡು ಸ್ಪರ್ಧಿಸಲಿವೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಮತ್ತು ಕಾಂಗ್ರೆಸ್ ಶುಕ್ರವಾರ ಘೋಷಿಸಿವೆ ಎಂದು ಪಿಟಿಐ ವರದಿ ಮಾಡಿದೆ. ತ್ರಿಪುರಾದಲ್ಲಿ ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಕಾಂಗ್ರೆಸ್-ಸಿಪಿಐ(ಎಂ) ಮೈತ್ರಿಯು ರಾಜ್ಯ ರಾಜಕೀಯದಲ್ಲಿ ಗಮನಾರ್ಹ ಬದಲಾವಣೆಯನ್ನು ತರಲಿದೆ ಎಂದು ಗ್ರಹಿಸಲಾಗಿದೆ. ರಾಜ್ಯದಲ್ಲಿ ಕಮ್ಯುನಿಸ್ಟ್ ಪಕ್ಷವು 25 ವರ್ಷಗಳ ಕಾಲ ಆಡಳಿತ ನಡೆಸಿದ್ದು, ಈ ವೇಳೆ ಕಾಂಗ್ರೆಸ್ ಪ್ರಮುಖ ವಿರೋಧವಾಗಿತ್ತು. ಆದರೆ, ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಅಂದಿನಿಂದ ತೃಣಮೂಲ ಕಾಂಗ್ರೆಸ್ ಕೂಡ ರಾಜ್ಯದಲ್ಲಿ ನೆಲೆ ಕಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಿಧಾನಸಭೆ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡುತ್ತೇವೆ. ರಾಜ್ಯ ಕಾಂಗ್ರೆಸ್ ತಂಡವು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯೊಂದಿಗೆ ಕುಳಿತು ಕಾರ್ಯತಂತ್ರವನ್ನು ರೂಪಿಸಲು ಮತ್ತು ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಿದೆ” ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ತ್ರಿಪುರಾ ಉಸ್ತುವಾರಿ ಅಜೋಯ್ ಕುಮಾರ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಅಜೋಯ್ ಕುಮಾರ್ ಅವರು ಸಿಪಿಐಎಂ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಶಾಂತ ಭಟ್ಟಾಚಾರ್ಜಿ ಅವರೊಂದಿಗೆ ಎಡ ಪಕ್ಷಗಳ ನಾಯಕರೊಂದಿಗೆ ಸೀಟು ಹೊಂದಾಣಿಕೆ ಚರ್ಚೆಗಳನ್ನು ಪ್ರಾರಂಭಿಸಲು ಅಗರ್ತಲಾದಲ್ಲಿರುವ ಸಿಪಿಐ(ಎಂ) ತ್ರಿಪುರಾ ರಾಜ್ಯ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. “ಸೀಟುಗಳ ಸಂಖ್ಯೆ ಮುಖ್ಯವಲ್ಲ, ಆದರೆ ಬಿಜೆಪಿ ಸೋಲು ಮುಖ್ಯ ಅಜೆಂಡಾ” ಎಂದು ಅವರು ತಿಳಿಸಿದ್ದಾರೆ.

ಪ್ರಾದೇಶಿಕ ಪಕ್ಷವಾದ ತಿಪ್ರಹಾ ಇಂಡಿಜಿನಸ್ ಪ್ರೋಗ್ರೆಸ್ಸಿವ್ ರೀಜನಲ್ ಅಲೈಯನ್ಸ್(ಟಿಪ್ರಾ) ಜೊತೆಗೆ ಕೂಡಾ ಸಿಪಿಐ(ಎಂ) ವಿಧಾನಸಭಾ ಚುನಾವಣೆಯಲ್ಲಿ ಸಂಭಾವ್ಯ ಮೈತ್ರಿಗಾಗಿ ಮಾತುಕತೆ ನಡೆಸುತ್ತಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಬದಲಿಗೆ ಮಗನಿಗೆ ಟಿಕೆಟ್ ಕೊಟ್ಟ ಬಿಜೆಪಿ

0
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಉತ್ತರ ಪ್ರದೇಶದ ಕೈಸರ್‌ಗಂಜ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೈಬಿಟ್ಟು, ಪುತ್ರ ಕರಣ್ ಭೂಷಣ್ ಸಿಂಗ್‌ಗೆ...