Homeಮುಖಪುಟತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ಮುಖ್ಯಮಂತ್ರಿ ವಿಪ್ಲವ್ ದೇವ್ ಹಲವಾರು ವಿಷಯಗಳ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿ ಪಕ್ಷವನ್ನು ಹಲವಾರು ಬಾರಿ ಮುಜುಗರಕ್ಕೀಡು ಮಾಡಿದ್ದಾರೆ ಎಂದು ಬಂಡಾಯ ಶಾಸಕರು ಹೇಳಿದ್ದಾರೆ.

- Advertisement -
- Advertisement -

ತ್ರಿಪುರ ಮುಖ್ಯಮಂತ್ರಿ ವಿಪ್ಲವ್ ಕುಮಾರ್ ದೇವ್ ವಿರುದ್ಧ ಬಿಜೆಪಿ ಶಾಸಕರ ಒಂದು ಗುಂಪು ದಂಗೆಯೆದ್ದಿದ್ದು, ದೆಹಲಿಗೆ ತಲುಪಿದ್ದಾರೆ. ರಾಜ್ಯದ 12 ಮಂದಿ ಶಾಸಕರು ಪಕ್ಷದ ಉನ್ನತ ನಾಯಕತ್ವವನ್ನು ಭೇಟಿಯಾಗಿ ಮುಖ್ಯಮಂತ್ರಿಯ “ಕಳಪೆ ನಾಯಕತ್ವ” ಮತ್ತು “ದುರಾಡಳಿತ” ಬಗ್ಗೆ ದೂರ ನೀಡಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ.

ರಾಜ್ಯದ ಮಾಜಿ ಆರೋಗ್ಯ ಸಚಿವ ಮತ್ತು ಬಿಜೆಪಿ ಶಾಸಕ ಸುದೀಪ್ ರಾಯ್ ಬಾರ್ಮನ್ ನೇತೃತ್ವದ ಗುಂಪು ಪಕ್ಷದ ಮುಖ್ಯಸ್ಥ ಜೆ.ಪಿ.ನಡ್ಡಾ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಭೇಟಿಗೆ ಸಮಯವನ್ನು ಕೇಳಿದ್ದಾರೆ.

ಇದನ್ನೂ ಓದಿ: ಪಂಜಾಬಿಗಳು ಮತ್ತು ಜಾಟ್‌ಗಳು ದೈಹಿಕವಾಗಿ ಶಕ್ತರು; ಆದರೆ ಅವರಿಗೆ ಮಿದುಳಿಲ್ಲ: ತ್ರಿಪುರ ಸಿಎಂ ವಿಪ್ಲವ್ ದೇವ್ ವಿವಾದ

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಕೂಡಾ ಭೇಟಿಯಾಗಲು ಅವರು ಪ್ರಯತ್ನಿಸುತ್ತಿದ್ದಾರೆಂದು, ನವದೆಹಲಿಯ ತ್ರಿಪುರ ಭವನದಲ್ಲಿರುವ ಶಾಸಕರೊಬ್ಬರು ಹೇಳಿದ್ದಾಗಿ ಎನ್‌ಡಿಟಿವಿ ತಿಳಿಸಿದೆ.

“ಪಕ್ಷದ ಜನಪ್ರಿಯತೆ ಕುಸಿಯುತ್ತಿದ್ದು ನಾವು ಸುಮಾರು 12 ಮಂದಿ ಶಾಸಕರು ಪಕ್ಷದ ನಾಯಕತ್ವದ ಸರ್ವಾಧಿಕಾರ, ಮುಖ್ಯಮಂತ್ರಿಯ ಕಳಪೆ ಆಡಳಿತದ ಬಗ್ಗೆ ಮೌಲ್ಯಮಾಪನ ಮಾಡಬೇಕೆಂದು ನಿರ್ಧರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ನಾವೆಲ್ಲರೂ ಪಕ್ಷದ ಬದ್ಧ ಕಾರ್ಯಕರ್ತರು ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತವು ಒಂದಕ್ಕಿಂತ ಹೆಚ್ಚು ಬಾರಿ ತನ್ನ ಅವಧಿಯನ್ನು ಉಳಿಸಿಕೊಳ್ಳಬೇಕೆಂದು ರಾಷ್ಟ್ರೀಯ ನಾಯಕತ್ವಕ್ಕೆ ಹೇಳಲು ನಾವು ಬಯಸುತ್ತೇವೆ. ಆದರೆ ಪ್ರಸ್ತುತ ನಾಯಕತ್ವ ಮುಂದುವರಿದರೆ, ಪ್ರತಿಪಕ್ಷಳಾದ ಎಡಪಕ್ಷಗಳು ಮತ್ತು ಕಾಂಗ್ರೆಸ್ ಇದನ್ನು ಆಕ್ರಮಿಸಿಕೊಳ್ಳುತ್ತದೆ”ಎಂದು ಅವರು ಹೇಳಿದರು.

ಇದನ್ನೂ ಓದಿ: ಹಲವು ರಾಜ್ಯಗಳಲ್ಲಿ ಬಿಜೆಪಿ ಸೋತ ನಂತರ ಮೋದಿ ವರ್ಚಸ್ಸು ಕಡಿಮೆಯಾಗಿದೆಯೆ? – ಡಿ.ಉಮಾಪತಿ

“ಮುಖ್ಯಮಂತ್ರಿ ಹಲವಾರು ವಿಷಯಗಳ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿ ಪಕ್ಷವನ್ನು ಹಲವಾರು ಬಾರಿ ಮುಜುಗರಕ್ಕೀಡು ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಬಿಕ್ಕಟ್ಟಿನ ನಿರ್ವಹಣೆ ಕೂಡಾ ಕಳಪೆಯಾಗಿದೆ ಎಂದು ಭಿನ್ನಮತೀಯ ಶಾಸಕರು ಆರೋಪಿಸಿದ್ದು, ಕೇಂದ್ರವು ತ್ರಿಪುರಕ್ಕೆ ತಂಡವನ್ನು ಕಳುಹಿಸುವಂತೆ ಒತ್ತಾಯಿಸಿದೆ. “ಸಾಂಕ್ರಾಮಿಕ ಸಮಯದಲ್ಲಿ, ರಾಜ್ಯದಲ್ಲಿ ಸರಿಯಾದ ಆರೋಗ್ಯ ಸಚಿವರು ಇಲ್ಲ” ಎಂದು ಒಬ್ಬ ಭಿನ್ನಮತೀಯ ಶಾಸಕ ಹೇಳಿದ್ದಾರೆ.

“ಅನುಭವಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಮುಖ್ಯಮಂತ್ರಿಯ ಸರ್ವಾಧಿಕಾರದ ಸ್ವರೂಪವನ್ನು ನಿಭಾಯಿಸಲು ಸಾಧ್ಯವಾಗದ ಕಾರಣ ಸ್ವಯಂಪ್ರೇರಿತ ನಿವೃತ್ತಿಯ ಮೇಲೆ ರಾಜ್ಯವನ್ನು ತೊರೆಯುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ಪಕ್ಷದ ಬಹುಪಾಲು ಶಾಸಕರು ನಾಯಕತ್ವ ಬದಲಾವಣೆಯನ್ನು ಬಯಸುತ್ತಿದ್ದಾರೆ” ಎಂದು ಶಾಸಕರು ಹೇಳಿದ್ದಾರೆ.

ಇದನ್ನೂ ಓದಿ: “ಯಾವುದೇ ಕಾರಣಗಳಿದ್ದರೂ ಸಹ ಜನರು ಹಸಿವಿನಿಂದ ಸಾಯುವಂತೆ ಮಾಡಬಾರದು” : ಕೇಂದ್ರಕ್ಕೆ ಸುಪ್ರೀಂ ತರಾಟೆ

ಆದರೆ, ಮುಖ್ಯಮಂತ್ರಿ ವಿಪ್ಲವ್ ದೇವ್ ಅವರ ಆಪ್ತ ಸಹಾಯಕರು ಭಿನ್ನಮತೀಯ ಶಾಸಕರ ಪ್ರಮಾಣವನ್ನು ಅತೀ ಕಡಿಮೆ ಎಂದು ಹೇಳಿದ್ದಾರೆ. “ಕೇವಲ ಏಳು-ಎಂಟು ಶಾಸಕರು ಮಾತ್ರ ಸರ್ಕಾರದ ಸುಗಮ ಕಾರ್ಯಚಟುವಟಿಕೆಯಲ್ಲಿ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ಬಹುಷಃ ಅವರು ಕಾಂಗ್ರೆಸ್‌‌ನಿಂದ ಬಂದವರು” ಎಂದು ಹೇಳಿದ್ದಾರೆ.

ಹಳೆಯ ಬಿಜೆಪಿಗರಿಗೆ, ಪಕ್ಷದ ಹೆಚ್ಚಿನ ಕಾರ್ಯಕರ್ತರಿಗೆ ಮತ್ತು ವಿವಿಧ ಹಂತಗಳಲ್ಲಿರುವ ನಾಯಕರಿಗೆ ವಿಪ್ಲವ್ ದೇವ್ ನಾಯಕತ್ವದ ಬಗ್ಗೆ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಮಿತ್ರಪಕ್ಷ ಇಂಡೀಜಿನಿಯಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ (ಐಪಿಎಫ್‌ಟಿ) 2018 ರಲ್ಲಿ ತ್ರಿಪುರದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ, 25 ವರ್ಷದ ಎಡಪಂಥೀಯ ಸರ್ಕಾರವನ್ನು ಕೆಳಗಿಳಿಸಿತ್ತು. 60 ಸದಸ್ಯರಿರುವ ವಿಧಾನಸಭೆಯಲ್ಲಿ ಬಿಜೆಪಿ 36 ಶಾಸಕರನ್ನು ಹೊಂದಿದ್ದು, 8 ಐಪಿಎಫ್‌ಟಿ ಶಾಸಕರ ಬೆಂಬಲವನ್ನು ಹೊಂದಿದೆ.

ಇದನ್ನೂ ಓದಿ: ಥ್ಯಾಂಕ್ಯೂ ಅಮೀರ್ ಖಾನ್ ಎಂದ ಪ್ರಧಾನಿ ನರೇಂದ್ರ ಮೋದಿ

ವಿಡಿಯೋ ನೋಡಿ: ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...