Homeಮುಖಪುಟತ್ರಿಪುರಾ: ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್‌, 71 ಜನರ ವಿರುದ್ಧ ಪ್ರಕರಣ

ತ್ರಿಪುರಾ: ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್‌, 71 ಜನರ ವಿರುದ್ಧ ಪ್ರಕರಣ

- Advertisement -
- Advertisement -

ತ್ರಿಪುರಾ ರಾಜ್ಯದಲ್ಲಿ ಶಾಂತಿ ಮತ್ತು ಕೋಮು ಸೌಹಾರ್ದವನ್ನು ಕದಡುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಮತ್ತು ನಕಲಿ ಪೋಸ್ಟ್‌ಗಳನ್ನು ಹಾಕಿದ್ದ ಆರೋಪದ ಮೇಲೆ 71 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ತ್ರಿಪುರಾದಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆ ಘಟನೆಗಳ ವಿಷಯವಾಗಿ ಪ್ರಚೋದನಕಾರಿ ಮತ್ತು ನಕಲಿ ಪೋಸ್ಟ್‌ಗಳನ್ನು ಹಾಕಿದ್ದ 71 ಜನರ ವಿರುದ್ಧ ಐದು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತ್ರಿಪುರಾ ಪೊಲೀಸರು ಬುಧವಾರ ತಿಳಿಸಿದ್ದಾರೆ.

ಕೋಮುಗಲಭೆಯ ವದಂತಿಗಳನ್ನು ಹರಡುವ ಮತ್ತು ಸಮಾಜದಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುವವ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ 71 ಜನರ ವಿರುದ್ಧ ಐದು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಪೊಲೀಸರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಸಮಾಜದಲ್ಲಿ ದ್ವೇಷ ಸೃಷ್ಟಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತ್ರಿಪುರಾ ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿ

 

 

‘‘ಸರ್ಕಾರ ಮತ್ತು ರಾಜ್ಯ ಪೊಲೀಸರಿಗೆ ಕಳಂಕ ತರುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಚಿತ್ರಗಳು ಮತ್ತು ವಿಡಿಯೋಗಳನ್ನು ಅಪ್‌ಲೋಡ್ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಚೋದನಕಾರಿ ಪೋಸ್ಟ್‌ಗಳನ್ನು ಲೈಕ್ ಅಥವಾ ಮರುಟ್ವೀಟ್ ಮಾಡಬೇಡಿ. ಏಕೆಂದರೆ ಅದು ವದಂತಿಗಳನ್ನು ಹರಡುತ್ತದೆ” ಎಂದು ಪೊಲೀಸರು ಜನರಲ್ಲಿ ಮನವಿ ಮಾಡಿದ್ದಾರೆ.

ಗೋಮತಿ ಜಿಲ್ಲೆಯ ಕಕ್ರಾಬನ್ ಪ್ರದೇಶದಲ್ಲಿ ಮಸೀದಿಯನ್ನು ಹಾನಿಗೊಳಿಸಿ, ಧ್ವಂಸಗೊಳಿಸಲಾಗಿದೆ ಎಂದು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಸುದ್ದಿ ಹಬ್ಬಿಸಲಾಗಿತ್ತು.

“ಇದು ಸುಳ್ಳು ಸುದ್ದಿಯಾಗಿದೆ. ಕಕ್ರಬನ್‌ನ ದರ್ಗಾಬಜಾರ್ ಪ್ರದೇಶದಲ್ಲಿನ ಮಸೀದಿಯು ಸಂಪೂರ್ಣವಾಗಿ ಉತ್ತಮವಾಗಿದೆ. ಗೋಮತಿ ಪೊಲೀಸರು ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡಲು ಕೆಲಸ ಮಾಡುತ್ತಿದ್ದಾರೆ” ಎಂದು ರಾಜ್ಯ ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ದುರ್ಗಾಪೂಜಾ ಮಂಟಪವನ್ನು ಧ್ವಂಸಗೊಳಿಸಿದ್ದನ್ನು ವಿರೋಧಿಸಿ ತ್ರಿಪುರಾದ ಪಾಣಿಸಾಗರ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ರ್‍ಯಾಲಿ ನಡೆಸಿದ್ದವು. ಈ ವೇಳೆ ಚಮ್ಟಿಲ್ಲಾ ಪ್ರದೇಶದ ಮಸೀದಿ ಮತ್ತು ಕೆಲವು ಅಂಗಡಿಗಳನ್ನು ಧ್ವಂಸಗೊಳಿಸಲಾಗಿದ್ದು ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಿದ್ದರು.

“ಪಾಣಿಸಾಗರದಲ್ಲಿ ವಿಎಚ್‌ಪಿ ಸುಮಾರು 3,500 ಜನರ ಪ್ರತಿಭಟನಾ ರ್‍ಯಾಲಿಯನ್ನು ಆಯೋಜಿಸಿತ್ತು. ರ್‍ಯಾಲಿಯಲ್ಲಿ ವಿಎಚ್‌ಪಿ ಕಾರ್ಯಕರ್ತರ ಒಂದು ವಿಭಾಗವು ಚಮ್ಟಿಲ್ಲಾ ಪ್ರದೇಶದಲ್ಲಿ ಮಸೀದಿಯನ್ನು ಧ್ವಂಸಗೊಳಿಸಿದೆ. ನಂತರ, ಅಲ್ಲಿಂದ ಸುಮಾರು 800 ಗಜಗಳಷ್ಟು ದೂರದಲ್ಲಿರುವ ರೋವಾ ಬಜಾರ್ ಪ್ರದೇಶದ ಮೂರು ಮನೆಗಳು ಮತ್ತು ಮೂರು ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ ಮತ್ತು ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ” ಪಾಣಿಸಾಗರ ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಸೌಭಿಕ್ ಡೇ ಹೇಳಿದ್ದರು.


ಇದನ್ನೂ ಓದಿ: ಮತೀಯ ಸಂಕೇತಗಳಿಗೆ ಎನ್‌ಎಸ್‌ಡಿ ಇನ್‌ಸ್ಟಾಗ್ರಾಮ್‌ ಖಾತೆ ದುರ್ಬಳಕೆ: 272 ಜೀವಪರರ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...