Homeಮುಖಪುಟತನ್ನದೇ ಪಕ್ಷದ ಶಾಸಕನನ್ನು ‘ಭೂ ಮಾಫಿಯ’ ಎಂದ ತ್ರಿಪುರಾ ಸಿಎಂ ಬಿಪ್ಲಬ್ ದೇಬ್!

ತನ್ನದೇ ಪಕ್ಷದ ಶಾಸಕನನ್ನು ‘ಭೂ ಮಾಫಿಯ’ ಎಂದ ತ್ರಿಪುರಾ ಸಿಎಂ ಬಿಪ್ಲಬ್ ದೇಬ್!

- Advertisement -
- Advertisement -

ತ್ರಿಪುರಾದ ಆಡಳಿತಾರೂಢ ಬಿಜೆಪಿಯೊಳಗಿನ ಬಣ ವೈಷಮ್ಯವು ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಶನಿವಾರ ಪಕ್ಷದ ಶಾಸಕ ಆಶಿಸ್ ಕುಮಾರ್ ಸಹಾ ಅವರನ್ನು ‘ಭೂ ಮಾಫಿಯಾ’ ಎಂದು ಕರೆದಿದ್ದು, ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಹೇಳಿದ್ದಾರೆ.

“ಯಾರಾದರೂ ರಾಜಕೀಯವನ್ನು ಗುರಾಣಿಯಾಗಿ ಬಳಸಿಕೊಂಡು ಭೂ ಒತ್ತುವರಿಯಂತಹ ಕಾನೂನುಬಾಹಿರ ಕೃತ್ಯಗಳನ್ನು ನಡೆಸಿದರೆ, ಕಾನೂನು ಕ್ರಮದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳುತ್ತದೆ ಮತ್ತು ಯಾರನ್ನೂ ಬಿಡುವುದಿಲ್ಲ” ಎಂದು ಮುಖ್ಯಮಂತ್ರಿ ಬಿಪ್ಲಬ್‌ ದೇಬ್ ಹೇಳಿದ್ದಾರೆ.

ಇದನ್ನೂ ಓದಿ:ಪಂಜಾಬಿಗಳು ಮತ್ತು ಜಾಟ್‌ಗಳಿಗೆ ಮಿದುಳಿಲ್ಲ ಹೇಳಿಕೆ: ಕ್ಷಮೆ ಕೇಳಿದ ಸಿಎಂ ಬಿಪ್ಲಬ್‌ ದೇಬ್

ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಆಶಿಸ್‌ ಕುಮಾರ್‌ ಸಹಾ, “ಈ ಆರೋಪದ ಕುರಿತು ತನಿಖೆ ನಡೆಸಿ ಸಾಧ್ಯವಾದರೆ ಕ್ರಮ ಕೈಗೊಳ್ಳಲಿ” ಎಂದು ಸವಾಲು ಹಾಕಿದ್ದಾರೆ.

ಮುಖ್ಯಮಂತ್ರಿ ಹೇಳಿಕೆಗೆ ಒಂದು ದಿನ ಮೊದಲು, ಕಳೆದ 30 ವರ್ಷಗಳಿಂದ ಶಾಸಕ ಆಶಿಸ್‌ ಸಹಾ ಅವರ ವಶದಲ್ಲಿದ್ದ ಉಜ್ಜಯಂತ ಅರಮನೆ ಮುಂಭಾಗದ ಕಟ್ಟಡದ ಒಂದು ಭಾಗವನ್ನು ಅಗರ್ತಲಾ ಮುನ್ಸಿಪಲ್ ಕಾರ್ಪೊರೇಷನ್‌ (ಎಎಂಸಿ) ಕೆಡವಿತ್ತು. ಈ ಕಟ್ಟಡವನ್ನು ಎಡಪಂಥ ವಿರೋಧಿ ಸರ್ಕಾರಿ ನೌಕರರ ಒಕ್ಕೂಟದ ಕಚೇರಿಯಾಗಿ ಬಳಸಲಾಗುತ್ತು.

ನಗರದ ಹೃದಯ ಭಾಗದಲ್ಲಿರುವ 7,000 ಚದರ ಅಡಿ ಅಳತೆಯ ಸರ್ಕಾರಿ ಭೂಮಿಯನ್ನು ಶಾಸಕ ಆಶಿಸ್‌ ಸಹಾ ಮತ್ತು ಟಿಎಂಸಿ ರಾಜ್ಯ ಸಂಚಾಲಕ ಸುಬಾಲ್ ಭೌಮಿಕ್ 90ರ ದಶಕದ ಆರಂಭದಲ್ಲಿ ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ. ಜೊತೆಗೆ ಅದನ್ನು ತಮ್ಮ ವೈಯಕ್ತಿಕ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾರೆ ಎಂದು ಎಎಂಸಿ ಮೇಯರ್ ದೀಪಕ್ ಮಜುಂದಾರ್ ಆರೋಪಿಸಿದ್ದಾರೆ.

ಇದನ್ನೂ ಓದಿ:ತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ – ಪ್ರತಿಭಟನೆಗೆ ಸಜ್ಜು

ಆರಂಭದಲ್ಲಿ ಈ ಕಟ್ಟಡವನ್ನು ಕಾಂಗ್ರೆಸ್ ಪಕ್ಷ, ನಂತರ ತೃಣಮೂಲ ಕಾಂಗ್ರೆಸ್‌ ಪಕ್ಷದ ಚಟುವಟಿಕೆಗಳಿಗೆ ಬಳಸಲಾಯಿತು. 2018 ರಲ್ಲಿ ಬಿಜೆಪಿ ಟಿಕೆಟ್‌ ಮೂಲಕ ಆಶಿಸ್‌‌ ಸಹಾ ಶಾಸಕರಾದಾಗ ಸರ್ಕಾರಿ ನೌಕರರ ಒಕ್ಕೂಟದ ಕಚೇರಿಯಾಗಿ ಬದಲಾಯಿತು.

“ಎಡರಂಗದ ಆಡಳಿತಾವಧಿಯಲ್ಲಿ ಈ ಕಟ್ಟಡವನ್ನು ಮರಳಿ ಪಡೆಯಲು ಆಗಿನ ಎಎಂಸಿ ಹಲವಾರು ಪ್ರಯತ್ನಗಳನ್ನು ಮಾಡಿ ವಿಫಲವಾಗಿತ್ತು. ಆದರೆ ನಾವು ಎಎಂಸಿಯ ಅಧಿಕಾರ ವಹಿಸಿಕೊಂಡ ಎರಡು ವಾರಗಳ ಹಿಂದೆ ನಂತರ, ನಗರದಲ್ಲಿ ಅಕ್ರಮವಾಗಿ ವಶಪಡಿಸಿಕೊಂಡಿರುವ ಎಲ್ಲಾ ಭೂಮಿಯನ್ನು ಮರಳಿ ಪಡೆಯಲು ನಿರ್ಧರಿಸಿದ್ದೇವೆ. ಅನಧಿಕೃತ ವ್ಯಾಪಾರಿಗಳು, ಎಲ್ಲಾ ಫುಟ್‌ಪಾತ್‌ ಅತಿಕ್ರಮಣಗಳನ್ನು ಯಾವುದೆ ರಾಜಕೀಯ ಬಣ್ಣವನ್ನು ಲೆಕ್ಕಿಸದೇ ತೆರವುಗೊಳಿಸುತ್ತೇವೆ” ಎಂದು ಮೇಯರ್‌ ಮಜುಂದಾರ್ ಹೇಳಿದ್ದಾರೆ.

ಮೇಯರ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಆಶಿಸ್‌ ಸಹಾ ಮತ್ತು ಸುಬಾಲ್ ಭೌಮಿಕ್, “ಇದು ವೈಯಕ್ತಿಕ ಆಸ್ತಿಯಾಗಿದ್ದು, ಹಲವಾರು ಪ್ರಯತ್ನಗಳನ್ನು ಮಾಡಿ ಎಡರಂಗ ಸರ್ಕಾರಕ್ಕೇ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ” ಹೇಳಿದ್ದಾರೆ.

ಇದನ್ನೂ ಓದಿ:ತಲೆ ಬೋಳಿಸಿಕೊಂಡು ಬಿಜೆಪಿ ತೊರೆಯಲು ಸಿದ್ದರಾದ ತ್ರಿಪುರ ಶಾಸಕ- ಟಿಎಂಸಿ ಸೇರುವ ಸಾಧ್ಯತೆ

“ತನ್ನದೇ ಶಾಸಕರ ಬಗ್ಗೆ ಸರ್ಕಾರದ ವರ್ತನೆಯನ್ನು ನೋಡಿ ನನಗೆ ಆಶ್ಚರ್ಯವಾಗಿದೆ. ಇದು ರಾಜಕೀಯ ದ್ವೇಷದಿಂದ ಪ್ರೇರಿತವಾದ ಹೆಜ್ಜೆಯಾಗಿದೆ. ಹೈಕೋರ್ಟ್‌ನಲ್ಲಿ ಪರಿಹಾರಕ್ಕಾಗಿ ಹೊಸ ಪ್ರಕರಣವನ್ನು ದಾಖಲಿಸುತ್ತೇನೆ” ಎಂದು ಆಶಿಸ್‌ ಸಹಾ ಹೇಳಿದ್ದಾರೆ.

ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಮರ್ ರಾಯ್ ಕೂಡ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಾವು ಮೊದಲಿನಿಂದಲೂ ಎಡಪಕ್ಷಗಳ ವಿರುದ್ಧ ಕೆಲಸ ಮಾಡುತ್ತಿದ್ದೇವೆ. ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಬೆಂಬಲ ನೀಡಿ ಈಗಲೂ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಮೇಯರ್ ಮಾಡಿದ್ದು ಅಕ್ರಮವಾಗಿದ್ದು, ಯಾರನ್ನೋ ಮೆಚ್ಚಿಸಲು ಬಯಸಿದ್ದರು. ಆದರೆ ಇದನ್ನು ನಾವು ಸುಲಭವಾಗಿ ಮರೆಯುವುದಿಲ್ಲ” ಎಂದು ಸಮರ್ ರಾಯ್ ಹೇಳಿದ್ದಾರೆ.

ಇದನ್ನೂ ಓದಿ:ತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...