Homeಮುಖಪುಟಇಂದು ತ್ರಿಪುರ ಚುನಾವಣೆ : ಮೂರು ಮೈತ್ರಿಕೂಟಗಳ ನಡುವೆ ಒಲವು ಯಾರಿಗೆ?

ಇಂದು ತ್ರಿಪುರ ಚುನಾವಣೆ : ಮೂರು ಮೈತ್ರಿಕೂಟಗಳ ನಡುವೆ ಒಲವು ಯಾರಿಗೆ?

- Advertisement -
- Advertisement -

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ತ್ರಿಪುರದಲ್ಲಿ ಇಂದು ಮತದಾನ ನಡೆಯುತ್ತಿದೆ. 10 ಪ.ಜಾ ಮತ್ತು 20 ಪ.ಪಂಗಡದ ಮೀಸಲು ಕ್ಷೇತ್ರಗಳು ತ್ರಿಪುರದಲ್ಲಿವೆ. ಸಿಪಿಐ(ಎಂ) ಪಕ್ಷದ ಪ್ರಬಲ ನೆಲೆಯಾಗಿದ್ದ ತ್ರಿಪುರದಲ್ಲಿ ಸರಳ ಸಿಎಂ ಎಂದು ಖ್ಯಾತರಾದ ಮಾಣಿಕ್ ಸರ್ಕಾರ್‌ರವರು 1998 ರಿಂದ 2018ರವರೆಗೆ 20 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದರು. ಆದರೆ ಕಳೆದ ಚುನಾವಣೆಯಲ್ಲಿ ಪಕ್ಷ ಸೋತ ನಂತರ ಅವರು ಹಿಂದೆ ಸರಿದಿದ್ದಾರೆ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

2018ರ ಬಲಾಬಲ

ಬಿಜೆಪಿ 35, ಐಪಿಎಫ್‌ಟಿ 8 ಮತ್ತು ಸಿಪಿಐ(ಎಂ) 16 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು.

ಈ ಚುನಾವಣೆಯಲ್ಲಿ ಅಧಿಕಾರಕ್ಕಾಗಿ ಮೂರು ಮೈತ್ರಿಕೂಟಗಳು ಸೆಣಸುತ್ತಿವೆ. ಅವುಗಳ ಸಂಕ್ಷಿಪ್ತ ಪರಿಚಯ ಇಲ್ಲಿದೆ.

ಎನ್‌ಡಿಎ

ಕಳೆದ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಬೃಹತ್ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ಬಿಪ್ಲವ್ ದೇವ್ ಮುಖ್ಯಮಂತ್ರಿಯಾಗಿದ್ದರು. ಆನಂತರ ಅವರನ್ನು ಕೆಳಗಿಸಿ ಸದ್ಯ ಮಾಣಿಕ್ ಶಾ ರಾಜ್ಯದ ಸಿಎಂ ಆಗಿದ್ದಾರೆ. ಅವರೇ ಈ ಬಾರಿಯ ಚುನಾವಣಾ ಉಸ್ತುವಾರಿ ಹೊತ್ತಿದ್ದಾರೆ.

ಈ ಚುನಾವಣೆಯಲ್ಲಿ ಬಿಜೆಪಿಯು ಐಪಿಎಫ್‌ಟಿನೊಂದಿಗೆ (Indigenous Peoples Front of Tripura) ಮೈತ್ರಿಮಾಡಿಕೊಂಡು ಎನ್‌ಡಿಎ ಕೂಟ ರಚಿಸಿದೆ. ಬಿಜೆಪಿ 55 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಐಪಿಎಫ್‌ಟಿ ಉಳಿದ 5 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್

ಸಿಪಿಐ(ಎಂ) (43 ಕ್ಷೇತ್ರಗಳಲ್ಲಿ ಸ್ಪರ್ಧೆ), ಕಾಂಗ್ರೆಸ್ (13 ಕ್ಷೇತ್ರಗಳು), ಸಿಪಿಐ (1), ರೆವಲೂಷನರಿ ಸೋಷಿಯಲ್ ಪಾರ್ಟಿ(1), ಆಲ್ ಇಂಡಿಯಾ ಫಾರ್ವಡ್ ಬ್ಲಾಕ್ (1) ಪಕ್ಷಗಳು ಸೇರಿ ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್ ಎಂಬ ಮೈತ್ರಿಕೂಟ ರಚಿಸಿಕೊಂಡಿವೆ. ಸಿಪಿಐ(ಎಂ) ಪಕ್ಷದ ಜಿತೇಂದ್ರ ಚೌಧರಿಯವರು ಈ ಮೈತ್ರಿಕೂಟದ ನಾಯಕರಾಗಿದ್ದು ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿದ್ದಾರೆ.

ಟಿಪ್ರ ಮೋಥಾ ಪಾರ್ಟಿ

ರಾಜಮನೆತನಕ್ಕೆ ಸೇರಿದ ಪ್ರದ್ಯೋತ್ ಮಾಣಿಕ್ಯ ದೇಬಬರ್ಮಾ ಅವರು ಟಿಪ್ರ ಮೋಥಾ ಪಕ್ಷದ ನೇತೃತ್ವವಹಿಸಿದ್ದಾರೆ. ಅಲ್ಲದೆ ಟಿಪ್ರ ಮೋಥಾ ಬಿಜೆಪಿ ಮೈತ್ರಿಕೂಟ ಅಥವಾ ಕಾಂಗ್ರೆಸ್ ಮೈತ್ರಿಕೂಟದ ಜೊತೆ ಚುನಾವಣಾ ಪೂರ್ವ ಮೈತ್ರಿ ನಿರಾಕರಿಸಿದ್ದು, 42 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.

“ಚುನಾವಣೋತ್ತರ ಮೈತ್ರಿಯನ್ನು ಅಲ್ಲಗಳೆಯುವುದಿಲ್ಲ. ಪ್ರತ್ಯೇಕ ‘ಗ್ರೇಟರ್ ಟಿಪ್ರಲ್ಯಾಂಡ್’ ರಾಜ್ಯ ರಚಿಸುವ ನಮ್ಮ ಬೇಡಿಕೆಗೆ ಬೆಂಬಲ ನೀಡುವ ಯಾವುದೇ ಪಕ್ಷವನ್ನು ಬೆಂಬಲಿಸುತ್ತೇವೆ” ಎಂದು ಟಿಪ್ರ ಮೋಥಾ ಪಕ್ಷ ಹೇಳಿದೆ.

2021ರಲ್ಲಿ ನಡೆದ ಚುನಾವಣೆಯಲ್ಲಿ ತ್ರಿಪುರಾ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಮಂಡಳಿಗೆ (ಟಿಟಿಎಡಿಸಿ) 30ರ ಪೈಕಿ 18 ಸ್ಥಾನಗಳನ್ನು ಗೆದ್ದ ನಂತರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಟಿಪ್ರಮೋಥಾ ನಿರ್ಧರಿಸಿದೆ. ಪಕ್ಷ 60 ವಿಧಾನಸಭಾ ಕ್ಷೇತ್ರಗಳ ಪೈಕಿ ಬುಡಕಟ್ಟು ಪ್ರಾಬಲ್ಯದ 20 ಕ್ಷೇತ್ರಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.

ಉಳಿದಂತೆ ಟಿಎಂಸಿ ಪಕ್ಷವು 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. SUCI ಪಕ್ಷವು 5 ಸ್ಥಾನಗಳಲ್ಲಿ ಮತ್ತು ಸಿಪಿಐ(ಎಂಎಲ್) ಪಕ್ಷ 1 ಸ್ಥಾನದಲ್ಲಿ ಸ್ಪರ್ಧಿಸುತ್ತಿವೆ.

ತ್ರಿಪುರದಲ್ಲಿನ ಗ್ರೇಟರ್ ತ್ರಿಪುರ್‌ಲ್ಯಾಂಡ್ ಹೊಸ ರಾಜ್ಯದ ಬೇಡಿಕೆ, ಉದ್ಯೋಗ ಸೃಷ್ಟಿ ಚುನಾವಣಾ ವಿಷಯಗಳಾಗಿವೆ.

ಭಾರತದ ಈಶಾನ್ಯ ರಾಜ್ಯಗಳಾದ ನಾಗಲ್ಯಾಂಡ್, ಮೇಘಾಲಯಗಳಲ್ಲಿ ಈ ತಿಂಗಳ 26 ರಂದು ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮಾರ್ಚ್ 02 ರಂದು ಎಲ್ಲಾ ಮೂರು ರಾಜ್ಯಗಳ ಫಲಿತಾಂಶ ಘೋಷಣೆಯಾಗಲಿದೆ.

ಇದನ್ನೂ ಓದಿ; ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮೇಲುಕೋಟೆಯಲ್ಲಿ ಸಿ.ಎಸ್ ಪುಟ್ಟರಾಜು ವರ್ಸಸ್ ದರ್ಶನ್ ಪುಟ್ಟಣ್ಣಯ್ಯ ನಡುವೆ ಫೈಟ್: ಅದೃಷ್ಟದ ಅದಲುಬದಲು ಸಾಧ್ಯವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...