Homeಮುಖಪುಟತ್ರಿಪುರಾ ಭಾರಿ ಪ್ರವಾಹ: 125 ಜನರನ್ನು ರಕ್ಷಿಸಿದ ಎನ್‌ಡಿಆರ್‌ಎಫ್‌, ಸಾವಿನ ಸಂಖ್ಯೆ 24 ಕ್ಕೆ ಏರಿಕೆ

ತ್ರಿಪುರಾ ಭಾರಿ ಪ್ರವಾಹ: 125 ಜನರನ್ನು ರಕ್ಷಿಸಿದ ಎನ್‌ಡಿಆರ್‌ಎಫ್‌, ಸಾವಿನ ಸಂಖ್ಯೆ 24 ಕ್ಕೆ ಏರಿಕೆ

- Advertisement -
- Advertisement -

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ರಕ್ಷಣಾ ತಂಡ ಶುಕ್ರವಾರ ಸಂಜೆ ಕಾರ್ಯಾಚರಣೆಯಲ್ಲಿ ಈಶಾನ್ಯ ರಾಜ್ಯವಾದ ತ್ರಿಪುರದ ಅನೇಕ ಪ್ರವಾಹ ಪೀಡಿತ ಭಾಗಗಳಿಂದ 125 ಜನರನ್ನು ಸ್ಥಳಾಂತರಿಸಿದೆ. ತ್ರಿಪುರಾದಾದ್ಯಂತ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಎನ್‌ಡಿಆರ್‌ಎಫ್‌ನ ಹನ್ನೊಂದು ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಸಾವಿನ ಸಂಖ್ಯೆ 24 ಕ್ಕೆ ಏರಿದೆ.

ಆಗಸ್ಟ್ 23ರ ಸಂಜೆ, ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಎನ್‌ಡಿಆರ್‌ಎಫ್, “ತ್ರಿಪುರಾದಾದ್ಯಂತ 11 ತಂಡಗಳನ್ನು ನಿಯೋಜಿಸಲಾಗಿದೆ. ಇಂದಿನ ರಕ್ಷಣಾ ಕಾರ್ಯಾಚರಣೆಗಳಲ್ಲಿ ಎನ್‌ಡಿಆರ್‌ಎಫ್ ರಕ್ಷಕರು 125 ಜನರನ್ನು ಸ್ಥಳಾಂತರಿಸಿದರು ಮತ್ತು ಗೋಮ್ಟಿ, ಸೆಪಾಹಿಜಾಲಾ ಮತ್ತು ಖೋವೈ ಪ್ರದೇಶಗಳ ಕಾರ್ಬುಕ್, ಅಮರಪುರದಲ್ಲಿ ಮೃತರನ್ನು ಪತ್ತೆಹಚ್ಚಿದ್ದಾರೆ” ಎಂದು ಹೇಳಿದೆ.

ಐಎಎಫ್‌ನಿಂದ ಪರಿಹಾರ ಕಾರ್ಯಾಚರಣೆ

ಅಲ್ಲದೆ, ಆಗಸ್ಟ್ 24 ರಂದು ಭಾರತೀಯ ವಾಯುಪಡೆಯು ತನ್ನ ಹೆಲಿಕಾಪ್ಟರ್‌ಗಳು ವಿಪತ್ತು ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಸ್ಥಳೀಯರಿಗೆ 4,000 ಕ್ಕೂ ಹೆಚ್ಚು ಆಹಾರ ಪ್ಯಾಕೆಟ್‌ಗಳನ್ನು ನೀಡಿದೆ.

ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಐಎಎಫ್, “ಐಎಎಫ್ ಎಂಐ-17 ಮತ್ತು ಎಎಲ್‌ಹೆಚ್ ಹೆಲಿಕಾಪ್ಟರ್‌ಗಳು ತ್ರಿಪುರಾ ಪ್ರವಾಹ ಪರಿಹಾರ ಕಾರ್ಯಾಚರಣೆಗಳಲ್ಲಿ ಪಟ್ಟುಬಿಡದ ಪ್ರಯತ್ನಗಳನ್ನು ಮುಂದುವರೆಸುತ್ತವೆ, ಎನ್‌ಡಿಆರ್‌ಎಫ್ ಸಿಬ್ಬಂದಿಯನ್ನು ವಿಪತ್ತು ಪೀಡಿತ ಪ್ರದೇಶಗಳಿಗೆ ತಲುಪಿಸಲಾಯಿತು. ಅಗರ್ತಲಾದಿಂದ ಕಾರ್ಯಾಚರಣೆ ನಡೆಸುತ್ತಿರುವ ಹೆಲಿಕಾಪ್ಟರ್‌ಗಳು 4,000 ಕ್ಕೂ ಹೆಚ್ಚು ಆಹಾರ ಪ್ಯಾಕೆಟ್‌ಗಳನ್ನು ಒದಗಿಸಿದ್ದಾರೆ. ಪ್ರವಾಹ ಪೀಡಿತ ತ್ರಿಪುರಾಕ್ಕಾಗಿ ರಂಗಮತಿ, ಜತನ್‌ಬರಿ, ಉದಯಪುರ, ಪಶ್ಚಿಮ್ ಮಲ್ಬಸಾ, ಶಂಕರ್ ಪಾಲಿ ಮತ್ತು ಹತ್ತಿರದ ಪ್ರದೇಶಗಳಲ್ಲಿ ಸಿಲುಕಿರುವ ಸ್ಥಳೀಯರಿಗೆ ಇದುವರೆಗೆ ಒಟ್ಟು 28 ಟನ್ ಪರಿಹಾರ ಸಾಮಗ್ರಿಗಳನ್ನು ರವಾನಿಸಲಾಗಿದೆ” ಎಂದು ಮಾಹಿತಿ ನೀಡಿದೆ.

ತ್ರಿಪುರಾದಲ್ಲಿ ನಡೆಯುತ್ತಿರುವ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲು ಸಿಎಂ ಮಾಣಿಕ್ ಸಹಾ ಇಂದು ಸರ್ವಪಕ್ಷ ಸಭೆ ನಡೆಸಲಿದ್ದಾರೆ. ಇದಕ್ಕೂ ಮುನ್ನ ಅವರು ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು ಮತ್ತು ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ನಾಗರಿಕರಿಗೆ ಭರವಸೆ ನೀಡಿದರು. ಸಿಎಂ ಸಹಾ ಈ ಹಿಂದೆ ವಿಪತ್ತು ನಿರ್ವಹಿಸಲು ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ವಿವರಿಸುವಾಗ ಕೇಂದ್ರ ಸರ್ಕಾರದ ಬೆಂಬಲಕ್ಕೆ ಕೃತಜ್ಞತೆ ವ್ಯಕ್ತಪಡಿಸಿದರು. ಪ್ರಮುಖವಾಗಿ, ಪ್ರವಾಹ ಪೀಡಿತ ತ್ರಿಪುರಾದಲ್ಲಿ ಪರಿಹಾರ ಪ್ರಯತ್ನಗಳನ್ನು ಹೆಚ್ಚಿಸಲು ಕೇಂದ್ರ 40 ಕೋಟಿ ರೂಪಾಯಿಗಳನ್ನು ಮುಂಗಡವಾಗಿ ಬಿಡುಗಡೆ ಮಾಡಲು ಅನುಮೋದನೆ ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಸ್ಟ್ 23 ರಂದು ಘೋಷಿಸಿದರು.

24 ಸಾವು, ಭಾರಿ ಹಾನಿ

ಇತ್ತೀಚಿನ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಪ್ರವಾಹದಲ್ಲಿ 24 ಜನರು ಸಾವನ್ನಪ್ಪಿದ್ದಾರೆ, ಇಬ್ಬರು ಗಾಯಗೊಂಡಿದ್ದಾರೆ ಮತ್ತು ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಪ್ರಾಥಮಿಕ ವರದಿಗಳು ಭೌತಿಕ ಮೂಲಸೌಕರ್ಯಗಳು (ರಸ್ತೆಗಳು, ವಿದ್ಯುತ್, ಕಟ್ಟಡಗಳು) ಮತ್ತು ಕೃಷಿ ಬೆಳೆಗಳು, ಮನೆಗಳು, ಮೀನುಗಾರಿಕೆ ಹೊಂಡಗಳು, ಜಾನುವಾರುಗಳಿಗೆ ವ್ಯಾಪಕ ಹಾನಿಯನ್ನು ಸೂಚಿಸಿವೆ. ವರದಿಯ ಪ್ರಕಾರ, ಆಗಸ್ಟ್‌ನಿಂದ ಜಿಲ್ಲಾಡಳಿತವು ಒಟ್ಟು 558 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದೆ.

ಇದನ್ನೂ ಓದಿ; ಬ್ರಿಜ್ ಭೂಷಣ್ ಲೈಂಗಿಕ ಕಿರುಕುಳ ಪ್ರಕರಣ; ಕುಸ್ತಿಪಟುಗಳ ಹೇಳಿಕೆ ದಾಖಲಿಸಿಕೊಂಡ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...