Homeಮುಖಪುಟತ್ರಿಪುರಾ: ಕಸ್ಟಡಿ ಚಿತ್ರಹಿಂಸೆಯಿಂದಾಗಿ ವ್ಯಕ್ತಿ ಸಾವು, ಐವರು ಪೊಲೀಸ್ ಅಧಿಕಾರಿಗಳ ಬಂಧನ

ತ್ರಿಪುರಾ: ಕಸ್ಟಡಿ ಚಿತ್ರಹಿಂಸೆಯಿಂದಾಗಿ ವ್ಯಕ್ತಿ ಸಾವು, ಐವರು ಪೊಲೀಸ್ ಅಧಿಕಾರಿಗಳ ಬಂಧನ

- Advertisement -
- Advertisement -

ದಕ್ಷಿಣ ತ್ರಿಪುರಾ ಜಿಲ್ಲೆಯ ಸಬ್ರೂಮ್‌ನಲ್ಲಿ ಕಳ್ಳತನದ ಆರೋಪದ ಮೇಲೆ ಬಂಧಿತನಾಗಿದ್ದ 26 ವರ್ಷದ ಯುವಕನೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಕಾರಣ ಆತನ ನಿವಾಸದಲ್ಲಿ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಸಂತ್ರಸ್ತನ ಕುಟುಂಬದವರು ನೀಡಿದ ಚಿತ್ರಹಿಂಸೆ ದೂರಿನ ಮೇರೆಗೆ ಮನುಬಜಾರ್ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಐವರು ಪೊಲೀಸ್ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಸಬ್ರೂಮ್ ಎಸ್‌ಡಿಪಿಒ ನಿತ್ಯಾನಂದ ಸರ್ಕಾರ್ ತಿಳಿಸಿದ್ದಾರೆ.

ಬಂಧಿತ ವ್ಯಕ್ತಿಗೆ ಚಿತ್ರಹಿಂಸೆ ನೀಡಿ ಸಾವಿಗೆ ಕಾರಣರಾದ ಪೊಲೀಸ್ ಸಿಬ್ಬಂದಿಯನ್ನು ಶಿಕ್ಷಿಸಬೇಕೆಂದು ಒತ್ತಾಯಿಸಿ ಸಿಟ್ಟಿಗೆದ್ದ ಸ್ಥಳೀಯರು ಗುರುವಾರ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ನಡೆಸಿದರು. ಅವರು ಮನುಬ್ಜಾರ್‌ನಲ್ಲಿ ಅಗರ್ತಲಾ-ಸಬ್ರೂಮ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದರು.

ಕಳೆದ ಅಕ್ಟೋಬರ್ 13 ರಂದು ಗೋಡೌನ್‌ನಿಂದ ರಬ್ಬರ್ ಶೀಟ್‌ಗಳನ್ನು ಕದ್ದ ಆರೋಪದ ಮೇಲೆ ಸ್ಥಳೀಯ ಜನರು ಕಾಲದೇಪ ನಿವಾಸಿ ಬಾದಲ್ ತ್ರಿಪುರಾನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

“ಪಾನಮತ್ತನಾಗಿದ್ದ ಬಾದಲ್ ತ್ರಿಪುರಾನನ್ನು ಪೊಲೀಸರು ಬಂಧಿಸಿ ಮರುದಿನ (ಅಕ್ಟೋಬರ್ 14) ಬಿಡುಗಡೆ ಮಾಡಿದರು. ಅಕ್ಟೋಬರ್ 16 ರಂದು ಆತನ ತನ್ನ ಮನೆಯಲ್ಲಿ ಸಾವನ್ನಪ್ಪಿದ್ದಾನೆ. ಇಬ್ಬರು ಪೊಲೀಸರು ಮತ್ತು ಮೂವರು ವಿಶೇಷ ಪೊಲೀಸ್ ಅಧಿಕಾರಿಗಳ ಚಿತ್ರಹಿಂಸೆಯಿಂದ ಬಾದಲ್ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಮೃತನ ಕುಟುಂಬ ದೂರು ದಾಖಲಿಸಿದೆ” ಎಂದು ಎಸ್‌ಡಿಪಿಒ ತಿಳಿಸಿದ್ದಾರೆ.

ದೂರಿನ ಮೇರೆಗೆ ಐವರು ಪೊಲೀಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದರು. ಬುಡಕಟ್ಟು ವ್ಯಕ್ತಿಯ ಶವದ ಮರಣೋತ್ತರ ಪರೀಕ್ಷೆಯನ್ನು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ವೈದ್ಯರ ತಂಡ ನಡೆಸಲಿದೆ ಎಂದು ಸರ್ಕಾರ್ ಹೇಳಿದರು.

ಸಾವಿನ ಬಗ್ಗೆ ಜನರಲ್ಲಿ ಅಸಮಾಧಾನದ ಹಿನ್ನೆಲೆಯಲ್ಲಿ ಮನುಬಜಾರ್ ಪೊಲೀಸ್ ಠಾಣೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದರು.

ಇದನ್ನೂ ಓದಿ; ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸುವ ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...