Homeಮುಖಪುಟಈ ತಿಂಗಳಲ್ಲಿ ತ್ರಿಪುರ, ನಾಗಲ್ಯಾಂಡ್, ಮೇಘಾಲಯ ಚುನಾವಣೆ: ತಿಳಿದಿರಬೇಕಾದ ಅಂಶಗಳು

ಈ ತಿಂಗಳಲ್ಲಿ ತ್ರಿಪುರ, ನಾಗಲ್ಯಾಂಡ್, ಮೇಘಾಲಯ ಚುನಾವಣೆ: ತಿಳಿದಿರಬೇಕಾದ ಅಂಶಗಳು

- Advertisement -
- Advertisement -

ಭಾರತದ ಈಶಾನ್ಯ ರಾಜ್ಯಗಳಾದ ತ್ರಿಪುರ, ನಾಗಲ್ಯಾಂಡ್, ಮೇಘಾಲಯಗಳಲ್ಲಿ ಈ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮಾರ್ಚ್ 02 ರಂದು ಎಲ್ಲಾ ರಾಜ್ಯಗಳ ಫಲಿತಾಂಶ ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಆ ರಾಜ್ಯಗಳ ಬಲಾಬಲ, ರಾಜಕೀಯ ವಿಷಯಗಳ ಕುರಿತ ಕಿರು ಪರಿಚಯ ಇಲ್ಲಿದೆ.

ತ್ರಿಪುರ ಚುನಾವಣೆ: ಫೆಬ್ರವರಿ 16

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ತ್ರಿಪುರದಲ್ಲಿ ಫೆಬ್ರವರಿ 16 ರಂದು ಚುನಾವಣೆ ನಡೆಯಲಿದೆ. 10 ಪ.ಜಾ ಮತ್ತು 20 ಪ.ಪಂಗಡದ ಮೀಸಲು ಕ್ಷೇತ್ರಗಳು ತ್ರಿಪುರದಲ್ಲಿವೆ. ಸಿಪಿಐ(ಎಂ) ಪಕ್ಷದ ಪ್ರಬಲ ನೆಲೆಯಾಗಿದ್ದ ತ್ರಿಪುರದಲ್ಲಿ ಸರಳ ಸಿಎಂ ಎಂದು ಖ್ಯಾತರಾದ ಮಾಣಿಕ್ ಸರ್ಕಾರ್‌ರವರು 1998 ರಿಂದ 2018ರವರೆಗೆ 20 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದರು. ಆದರೆ ಕಳೆದ ಚುನಾವಣೆಯಲ್ಲಿ ಪಕ್ಷ ಸೋತ ನಂತರ ಅವರು ಹಿಂದೆ ಸರಿದಿದ್ದಾರೆ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

ಎನ್‌ಡಿಎ

ಕಳೆದ ಚುನಾವಣೆಯಲ್ಲಿ ಮೊದಲ ಬಿಜೆಪಿ ಬೃಹತ್ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ಬಿಪ್ಲವ್ ದೇವ್ ಮುಖ್ಯಮಂತ್ರಿಯಾಗಿದ್ದರು. ಆನಂತರ ಅವರನ್ನು ಕೆಳಗಿಸಿ ಸದ್ಯ ಮಾಣಿಕ್ ಶಾ ರಾಜ್ಯದ ಸಿಎಂ ಆಗಿದ್ದಾರೆ. ಅವರೇ ಈ ಬಾರಿಯ ಚುನಾವಣಾ ಉಸ್ತುವಾರಿ ಹೊತ್ತಿದ್ದಾರೆ.

ಈ ಚುನಾವಣೆಯಲ್ಲಿ ಬಿಜೆಪಿಯು ಐಪಿಎಫ್‌ಟಿನೊಂದಿಗೆ (Indigenous Peoples Front of Tripura) ಮೈತ್ರಿಮಾಡಿಕೊಂಡು ಎನ್‌ಡಿಎ ಕೂಟ ರಚಿಸಿದೆ. ಬಿಜೆಪಿ 55 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಐಪಿಎಫ್‌ಟಿ ಉಳಿದ 5 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್

ಸಿಪಿಐ(ಎಂ) (43 ಕ್ಷೇತ್ರಗಳು), ಕಾಂಗ್ರೆಸ್ (13 ಕ್ಷೇತ್ರಗಳು), ಸಿಪಿಐ (1), ರೆವಲೂಷನರಿ ಸೋಷಿಯಲ್ ಪಾರ್ಟಿ(1), ಆಲ್ ಇಂಡಿಯಾ ಫಾರ್ವಡ್ ಬ್ಲಾಕ್ (1) ಪಕ್ಷಗಳು ಸೇರಿ ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್ ಎಂಬ ಮೈತ್ರಿಕೂಟ ರಚಿಸಿಕೊಂಡಿವೆ. ಸಿಪಿಐ(ಎಂ) ಪಕ್ಷದ ಜಿತೇಂದ್ರ ಚೌಧರಿಯವರು ಈ ಮೈತ್ರಿಕೂಟದ ನಾಯಕರಾಗಿದ್ದು ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿದ್ದಾರೆ.

ಉಳಿದಂತೆ ತ್ರಿಪುರ ಮೋಥಾ ಪಾರ್ಟಿ 42 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಟಿಎಂಸಿ ಪಕ್ಷವು 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. SUCI ಪಕ್ಷವು 5 ಸ್ಥಾನಗಳಲ್ಲಿ ಮತ್ತು ಸಿಪಿಐ(ಎಂಎಲ್) ಪಕ್ಷ 1 ಸ್ಥಾನದಲ್ಲಿ ಸ್ಪರ್ಧಿಸುತ್ತಿವೆ.

2018ರ ಬಲಾಬಲ

ಬಿಜೆಪಿ 35, ಐಪಿಎಫ್‌ಟಿ 8 ಮತ್ತು ಸಿಪಿಐ(ಎಂ) 16 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು.

ತ್ರಿಪುರದಲ್ಲಿನ ಗ್ರೇಟರ್ ತ್ರಿಪುರ್‌ಲ್ಯಾಂಡ್ ಹೊಸ  ರಾಜ್ಯದ ಬೇಡಿಕೆ, ಉದ್ಯೋಗ ಸೃಷ್ಟಿ ಚುನಾವಣಾ ವಿಷಯಗಳಾಗಿವೆ.

ನಾಗಲ್ಯಾಂಡ್: ಫೆಬ್ರವರಿ 17

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ನಾಗಲ್ಯಾಂಡ್‌ನಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಅಲ್ಲಿ 59 ಕ್ಷೇತ್ರಗಳು ಪರಿಶಿಷ್ಟ ಪಂಗಡ ಜಾತಿಗೆ ಮೀಸಲಾಗಿರುವುದು ವಿಶೇ‍ಷ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

2021ರಲ್ಲಿ ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆಯು ಗುಂಡಿನ ದಾಳಿ ನಡೆಸಿ 14 ಅಮಾಯಕ ನಾಗರೀಕರನ್ನು ಹತ್ಯೆಗೈದಿತ್ತು. ಘಟನೆಯಲ್ಲಿ ಓರ್ವ ಯೋಧನು ಪ್ರಾಣ ಕಳೆದುಕೊಂಡಿದ್ದನು. ಇದಕ್ಕೆ ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಕಾರಣವೆಂದು ನಾಗಾ ಜನರು ಆರೋಪಿಸುತ್ತಾರೆ. ಅದನ್ನು ವಾಪಾಸ್ ಪಡೆಯುವ ಕುರಿತು ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಅದು ಈ ಬಾರಿ ಚುನಾವಣಾ ವಿಷಯವಾಗುವ ಸಂಭವವಿದೆ.

ನಾರ್ಥ್ ಈಸ್ಟ್ ಡೆಮಾಕ್ರಟಿಕ್ ಅಲೆಯೆನ್ಸ್

ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೊಗ್ರೆಸ್ಸಿವ್ ಪಾರ್ಟಿಯ 40 ಸ್ಥಾನಗಳಲ್ಲಿ ಮತ್ತು ಮಿತ್ರಪಕ್ಷ ಬಿಜೆಪಿಯು 20 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿವೆ. ನೆಫಿಯು ರಿಯೊ ಮತ್ತು ಬಿಜೆಪಿ ತೆಮೆಜಾನ್ ಇಮಾ ಅಲಾಂಗ್ ಮುಖ್ಯಮಂತ್ರಿ ಸ್ಪರ್ಧಿಗಳಾಗಿದ್ದಾರೆ.

ನಾಗ ಪೀಪಲ್ಸ್ ಫ್ರಂಟ್, NPP, ಕಾಂಗ್ರೆಸ್, ಜೆಡಿಯು, ಆರ್‌ಜೆಡಿ, ಎನ್‌ಸಿಪಿ, ಆಪ್ ಸ್ಪರ್ಧಿಸುವ ಇರಾದೆ ವ್ಯಕ್ತಪಡಿಸಿವೆ. ಆದರೆ ಸೀಟುಗಳನ್ನು ಘೋಷಿಸಿಲ್ಲ.

2018ರ ಬಲಾಬಲ

ಬಿಜೆಪಿ 12, ಎನ್‌ಡಿಪಿಪಿ 17, ಎನ್‌ಪಿಎಫ್ 26, ಎನ್‌ಪಿಪಿ 02 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು.

ಮೇಘಾಲಯ: ಫೆಬ್ರವರಿ 27

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಮೇಘಾಲಯದಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯುತ್ತಿದೆ. ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

ಮೇಘಾಲಯದಲ್ಲಿ ಯಾವುದೇ ಮೈತ್ರಿಕೂಟಗಳ ಬದಲು ಎಲ್ಲಾ ಪಕ್ಷಗಳು ಏಕಾಂಗಿಯಾಗಿ ಸ್ಪರ್ಧಿಸಲು ಮುಂದಾಗಿವೆ. ಕಳೆದ ತಿಂಗಳು ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು ಆಡಳಿತಾರೂಢ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್‌ನಿಂದ ಬೇರ್ಪಟ್ಟು ರಾಜ್ಯ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ.

ಅಸ್ಸಾಂನೊಂದಿಗೆ ಮೇಘಾಲಯ ಗಡಿ ಸಮಸ್ಯೆ ಎದುರಿಸುತ್ತಿದೆ. ಜೊತೆಗೆ ಅಭಿವೃದ್ದಿಯಲ್ಲಿಯೂ ಹಿಂದೆ ಉಳಿದಿದೆ. ಇವುಗಳು ಈ ಭಾರಿಯ ಚುನಾವಣಾ ವಿಷಯಗಳಾಗಿವೆ.

ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು 58 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಟಿಎಂಸಿ ಪಕ್ಷವು ಮುಕುಲ್ ಸಂಗ್ಮಾ ನೇತೃತ್ವದಲ್ಲಿ 55 ಸ್ಥಾನಗಳಲ್ಲಿ ಸ್ಪರ್ಧಿಸಲು ಮುಂದಾಗಿದೆ. ಕಾಂಗ್ರೆಸ್ ಎಲ್ಲಾ 60 ಸ್ಥಾನಗಳಲ್ಲಿ ಕಣಕ್ಕಿಳಿಯುತ್ತಿದೆ. ಬಿಜೆಪಿ ಸಹ 60 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಉಳಿದಂತೆ ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 34, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7, ಹಿಲ್‌ಸ್ಟೇಲ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7 ಮತ್ತು ವಾಯ್ಸ್ ಆಫ್ ಪೀಪಲ್ ಪಾರ್ಟಿ 14 ಕಡೆಗಳಲ್ಲಿ ಸ್ಪರ್ಧಿಸುತ್ತಿದೆ.

ಮೇಘಾಲಯದ ದಕ್ಷಿಣ ತುರಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ವಿರುದ್ಧ ಬಿಜೆಪಿಯು ತನ್ನ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಮಾಜಿ ಉಗ್ರಗಾಮಿ ನಾಯಕ ಬರ್ನಾರ್ಡ್ ಎನ್ ಮರಕ್ ಅವರನ್ನು ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

2018ರ ಬಲಾಬಲ

ಕಾಂಗ್ರೆಸ್ – 21, ಎನ್‌ಪಿಪಿ 19, ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 06, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 04 ಮತ್ತು ಬಿಜೆಪಿ 02 ಕಡೆಗಳಲ್ಲಿ ಜಯ ಗಳಿಸಿತ್ತು.

ಈ ಮೂರು ರಾಜ್ಯಗಳ ಚುನಾವಣಾ ಫಲಿತಾಂಶವು ಮಾರ್ಚ್ 02 ರಂದು ಪ್ರಕಟವಾಗಲಿದೆ.

ಇದನ್ನೂ ಓದಿ: ಮೇಘಾಲಯ: ಸಿಎಂ ವಿರುದ್ಧ ಮಾಜಿ ಉಗ್ರಗಾಮಿ ನಾಯಕನಿಗೆ ಟಿಕೆಟ್ ಘೋಷಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...