Homeಮುಖಪುಟತ್ರಿಪುರಾ ಹಿಂಸಾಚಾರ ವರದಿ ಮಾಡಿ ಬಂಧನಕ್ಕೆ ಒಳಗಾಗಿದ್ದ ಇಬ್ಬರು ಪತ್ರಕರ್ತೆಯರಿಗೆ ಜಾಮೀನು

ತ್ರಿಪುರಾ ಹಿಂಸಾಚಾರ ವರದಿ ಮಾಡಿ ಬಂಧನಕ್ಕೆ ಒಳಗಾಗಿದ್ದ ಇಬ್ಬರು ಪತ್ರಕರ್ತೆಯರಿಗೆ ಜಾಮೀನು

ಕೋಮು ಘರ್ಷಣೆಗಳ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ಇಬ್ಬರು ತ್ರಿಪುರಾಕ್ಕೆ ತೆರಳಿದ್ದರು.

- Advertisement -
- Advertisement -

ಕ್ರಿಮಿನಲ್ ಪಿತೂರಿ ಸೇರಿದಂತೆ ವಿವಿಧ ಆರೋಪಗಳ ಮೇಲೆ ತ್ರಿಪುರಾದಲ್ಲಿ ಬಂಧಿಸಲಾಗಿದ್ದ ದೆಹಲಿ ಮೂಲದ ಇಬ್ಬರು ಪತ್ರಕರ್ತೆಯರಿಗೆ ಸ್ಥಳೀಯ ನ್ಯಾಯಾಲಯವು ಸೋಮವಾರ ಜಾಮೀನು ನೀಡಿದೆ.

ಸಮೃದ್ಧಿ ಕೆ ಸಕುನಿಯಾ ಮತ್ತು ಸ್ವರ್ಣ ಝಾ ಅವರಿಗೆ ತ್ರಿಪುರಾದ ಗೋಮತಿ ಜಿಲ್ಲೆಯ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ತ್ರಿಪುರಾ ರಾಜ್ಯದಲ್ಲಿ ನಡೆದ ಕೋಮು ಹಿಂಸಾಚಾರದ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ತೆರಳಿದ್ದ ಸುದ್ದಿ ವೆಬ್‌ಸೈಟ್ ಎಚ್‌ಡಬ್ಲೂ ನ್ಯೂಸ್‌ನ ಇಬ್ಬರು ಪತ್ರಕರ್ತೆಯರನ್ನು ಅಸ್ಸಾಂ ಪೊಲೀಸರು ಬಂಧಿಸಿ, ತ್ರಿಪುರಾ ಪೊಲೀಸರಿಗೆ ಒಪ್ಪಿಸಿದ್ದರು.

ಜಾಮೀನು ನೀಡಿದ ನ್ಯಾಯಾಲಯವು ಪತ್ರಕರ್ತೆಯರಿಗೆ ಮಂಗಳವಾರ ಸ್ಥಳೀಯ ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿದೆ.

ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರನ್ನು ಬಂಧಿಸಿದ ಅಸ್ಸಾಂ ಪೊಲೀಸರು

ಪತ್ರಕರ್ತೆಯರನ್ನು ಬಂಧಿಸಿದ್ದ ಪೊಲೀಸರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ’ಬಿಜೆಪಿ ವ್ಯವಸ್ಥೆಯು ಪತ್ರಿಕೋದ್ಯಮವನ್ನು ಕೊಲ್ಲುವುದರಲ್ಲಿ ನಿರತವಾಗಿದೆ. ಆದರೆ ಸುಳ್ಳಿನ ಮುಂದೆ ಸತ್ಯ ಯಾವಾಗ ಸುಮ್ಮನೆ ನಿಂತಿದೆ..?” ಎಂದು ಪ್ರಶ್ನಿಸುವ ಮೂಲಕ ಸತ್ಯ ಒಂದಲ್ಲ ಒಂದು ದಿನ ಹೊರ ಬರುತ್ತದೆ ಎಂದಿದ್ದರು.

ಮಾಧ್ಯಮ ಸಂಸ್ಥೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮತ್ತು Indian Women’s Press Corps ಪತ್ರಕರ್ತೆಯರ ಬಂಧನ ಖಂಡಿಸಿ, ಅವರನ್ನು ತಕ್ಷಣ ಬಿಡುಗಡೆ ಮಾಡಲು ಒತ್ತಾಯಿಸಿದ್ದವು.

ತ್ರಿಪುರಾದಲ್ಲಿ ಅಕ್ಟೋಬರ್‌ನಲ್ಲಿ ನಡೆದ ಕೋಮು ಘರ್ಷಣೆಗಳ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ತ್ರಿಪುರಾಕ್ಕೆ ಬಂದಿದ್ದ ಸುದ್ದಿ ವೆಬ್‌ಸೈಟ್ ಎಚ್‌ಡಬ್ಲೂ ನ್ಯೂಸ್‌ನ (@hwnewsnetwork) ಇಬ್ಬರು ಮಹಿಳಾ ಪತ್ರಕರ್ತರನ್ನು ಅಸ್ಸಾಂ ಪೊಲೀಸರು ಭಾನುವಾರ ಅಸ್ಸಾಂ-ತ್ರಿಪುರಾ ಗಡಿಗೆ ಸಮೀಪವಿರುವ ಕರೀಂಗಂಜ್‌ನ ನೀಲಂ ಬಜಾರ್‌ನಲ್ಲಿ ಬಂಧಿಸಿದ್ದರು.

ಇದಕ್ಕೂ ಮೊದಲು ವಿಶ್ವ ಹಿಂದೂ ಪರಿಷತ್ತಿನ ದೂರಿನ ಮೇಲೆ ಶನಿವಾರ ಉನಕೋಟಿ ಜಿಲ್ಲೆಯ ಫಾಟಿಕ್ರೋಯ್ ಪೊಲೀಸ್ ಠಾಣೆಯಲ್ಲಿ 21 ವರ್ಷದ ಸಮೃದ್ಧಿ ಸಕುನಿಯಾ ಮತ್ತು 25 ವರ್ಷದ ಸ್ವರ್ಣ ಝಾ ವಿರುದ್ಧ ಭಾರತೀಯ ದಂಡ ಸಂಹಿತೆಯ 120B (ಕ್ರಿಮಿನಲ್ ಪಿತೂರಿ), 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 504 ಸೆಕ್ಷನ್ ಅಡಿಗಳಲ್ಲಿ ಪ್ರಕರಣ ದಾಖಲಾಗಿತ್ತು.

ನವೆಂಬರ್ 13 ರಂದು ಫಾಟಿಕ್ರೋಯ್‌ನಲ್ಲಿರುವ ಮುಸ್ಲಿಂ ಮನೆಗಳಿಗೆ ಭೇಟಿ ನೀಡಿದಾಗ ಇಬ್ಬರು ಪತ್ರಕರ್ತರು “ಹಿಂದೂಗಳು ಮತ್ತು ತ್ರಿಪುರಾ ಸರ್ಕಾರದ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ” ಎಂದು ಆರೋಪಿಸಿ ಕಾಂಚನ್ ದಾಸ್ ಎಂಬವರು ದೂರು ದಾಖಲಿಸಿದ್ದಾರೆ.

ಪತ್ರಕರ್ತೆ ಸಕುನಿಯಾ, ಅಕ್ಟೋಬರ್ 24 ರಂದು ಉನಕೋಟಿಯ ಪೌಲ್ ಬಜಾರ್‌ನಲ್ಲಿ ಮಸೀದಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಎಚ್‌ಪಿ ಮತ್ತು ಬಜರಂಗದಳ ಸಂಘಟನೆ ಹೆಸರನ್ನು ಸೇರಿಸಿದ್ದಾರೆ. ಇದು ತ್ರಿಪುರಾದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡುವ “ಅಪರಾಧದ ಪಿತೂರಿ”ಯ ಭಾಗವಾಗಿದೆ ಎಂದು ಕಾಂಚನ್ ದಾಸ್ ಆರೋಪಿಸಿದ್ದಾರೆ.


ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...