Homeಚಳವಳಿತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಮೇಲೆ ದೂರು ದಾಖಲು

ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಮೇಲೆ ದೂರು ದಾಖಲು

- Advertisement -
- Advertisement -

ತ್ರಿಪುರಾ ಪೊಲೀಸರು ರಾಜ್ಯದಲ್ಲಿ ನಡೆದ ಕೋಮು ಹಿಂಸಾಚಾರದ ಕುರಿತು ವರದಿ ಮಾಡಿದ ಇಬ್ಬರು ಪತ್ರಕರ್ತೆಯರ ವಿರುದ್ಧ ವಿಶ್ವ ಹಿಂದೂ ಪರಿಷತ್ತಿನ ದೂರಿನ ಮೇಲೆ ಶನಿವಾರ ಎಫ್ಐಆರ್ ದಾಖಲಿಸಿದ್ದಾರೆ. ಉನಕೋಟಿ ಜಿಲ್ಲೆಯ ಫಾಟಿಕ್ರೋಯ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸ್ವತಂತ್ರ ಸುದ್ದಿ ವೆಬ್‌ಸೈಟ್ @hwnewsnetwork ದೆಹಲಿ ಮೂಲದ ವರದಿಗಾರರಾದ 21 ವರ್ಷದ ಸಮೃದ್ಧಿ ಸಕುನಿಯಾ ಮತ್ತು 25 ವರ್ಷದ ಸ್ವರ್ಣ ಝಾ ವಿರುದ್ಧ ಭಾರತೀಯ ದಂಡ ಸಂಹಿತೆಯ 120B (ಕ್ರಿಮಿನಲ್ ಪಿತೂರಿ), 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 504 ಸೆಕ್ಷನ್ ಅಡಿಗಳಲ್ಲಿ ಪ್ರಕರಣ ದಾಖಲಾಗಿದೆ.

ನವೆಂಬರ್ 13 ರಂದು ಫಾಟಿಕ್ರೋಯ್‌ನಲ್ಲಿರುವ ಮುಸ್ಲಿಂ ಮನೆಗಳಿಗೆ ಭೇಟಿ ನೀಡಿದಾಗ ಇಬ್ಬರು ಪತ್ರಕರ್ತರು “ಹಿಂದೂಗಳು ಮತ್ತು ತ್ರಿಪುರಾ ಸರ್ಕಾರದ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ” ಎಂದು ಆರೋಪಿಸಿ ಕಾಂಚನ್ ದಾಸ್ ಎಂಬವರು ದೂರು ದಾಖಲಿಸಿದ್ದಾರೆ.

ಪತ್ರಕರ್ತೆ ಸಕುನಿಯಾ, ಅಕ್ಟೋಬರ್ 24 ರಂದು ಉನಕೋಟಿಯ ಪೌಲ್ ಬಜಾರ್‌ನಲ್ಲಿ ಮಸೀದಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಎಚ್‌ಪಿ ಮತ್ತು ಬಜರಂಗದಳ ಸಂಘಟನೆ ಹೆಸರನ್ನು ಸೇರಿಸಿದ್ದಾರೆ. ಇದು ತ್ರಿಪುರಾದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡುವ “ಅಪರಾಧದ ಪಿತೂರಿ”ಯ ಭಾಗವಾಗಿದೆ ಎಂದು ದಾಸ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಣಿಪುರ: ಉಗ್ರರ ದಾಳಿಯಲ್ಲಿ ಸೇನಾ ಕರ್ನಲ್, ಪತ್ನಿ, ಮಗು ಸೇರಿ 7 ಮಂದಿ ಸಾವು

ಈ ಬಗ್ಗೆ ಪತ್ರಕರ್ತೆಯರಿಬ್ಬರೂ ತಮ್ಮ ಟ್ವಿಟರ್‌ ಖಾತೆಗಳಲ್ಲಿ ಎಫ್‌ಐಆರ್ ಪ್ರತಿಗಳನ್ನು ಫೋಸ್ಟ್‌ ಮಾಡಿ, ನಮ್ಮ ಮೇಲೆ ಎಫ್‌ಐಆರ್‌ ದಾಖಲಾಗಿದೆ. ನಮ್ಮನ್ನು ಹೋಟೆಲ್‌ನಿಂದ ಹೊರ ಹೋಗಲು ಪೊಲೀಸರು ಬಿಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

15 ಪೊಲೀಸ್ ಅಧಿಕಾರಿಗಳು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಿಬ್ಬಂದಿ ಹೋಟೆಲ್ ಸುತ್ತುವರೆದಿದ್ದಾರೆ, ಅದರಲ್ಲಿ ಮೂವರು ಮಹಿಳಾ ಪೊಲೀಸರು ಇದ್ದಾರೆ ಎಂದು ಸಕುನಿಯಾ ಹೇಳಿದ್ದಾರೆ.

ಆದರೆ, ದೂರು ದಾಖಲಾದ ನಂತರ ಪೊಲೀಸರ ತಂಡ ಅವರನ್ನು ಪ್ರಶ್ನಿಸಲು ಹೋಗಿತ್ತು. ಪತ್ರಕರ್ತರಿಗೆ ಕೇವಲ ನೋಟಿಸ್ ನೀಡಲಾಗಿದೆ. ನವೆಂಬರ್ 21 ರಂದು ತಮ್ಮ ವಕೀಲರೊಂದಿಗೆ ಫಾಟಿಕ್ರೋಯ್ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನವೆಂಬರ್ 12 ರಂದು, ಸಕುನಿಯಾ ಮತ್ತು ಝಾ ಅವರು ತ್ರಿಪುರಾದ ಗೋಮತಿ ಜಿಲ್ಲೆಯಲ್ಲಿ ಬೆಂಕಿಗೆ ಆಹುತಿಯಾಗಿರುವ ಮಸೀದಿಯ ಬಗ್ಗೆ ವರದಿ ಮಾಡಿದ್ದರು. ಶನಿವಾರ ಇಬ್ಬರು ವರದಿಗಾರರು ಇಲ್ಲಿ ಇನ್ನೊಂದು ಮಸೀದಿ ಮತ್ತು ಮುಸ್ಲಿಮರ ಮನೆಗಳಿಗೆ ಹಾನಿಯಾಗಿರುವದನ್ನು ವರದಿ ಮಾಡಲು ಧರ್ಮನಗರಕ್ಕೆ ಬಂದಿದ್ದರು. ತ್ರಿಪುರಾದಲ್ಲಿ ಅಕ್ಟೋಬರ್ 26 ರಂದು ನಡೆದ ವಿಎಚ್‌ಪಿ ರ್‍ಯಾಲಿ ಬಳಿಕ ಹಿಂಸಾಚಾರ ಆರಂಭವಾಗಿದೆ.

ಆದರೆ, ಬಿಜೆಪಿ ಆಡಳಿತವಿರುವ ತ್ರಿಪುರಾದಲ್ಲಿ ಮಸೀದಿಯನ್ನು ಧ್ವಂಸ ಮಾಡಿರುವ ವರದಿಗಳನ್ನು ಗೃಹ ಸಚಿವಾಲಯ ತಳ್ಳಿಹಾಕಿದೆ. “ತ್ರಿಪುರಾದ ಗೋಮತಿ ಜಿಲ್ಲೆಯ ಕಕ್ರಾಬನ್ ಪ್ರದೇಶದಲ್ಲಿ ಮಸೀದಿಯನ್ನು ಹಾನಿಗೊಳಿಸಲಾಗಿದೆ ಮತ್ತು ಧ್ವಂಸಗೊಳಿಸಲಾಗಿದೆ ಎಂದು ವರದಿ ಪ್ರಸಾರವಾಗಿವೆ. ಈ ಸುದ್ದಿಗಳು ನಕಲಿ ಮತ್ತು ಸಂಪೂರ್ಣ ಸುಳ್ಳು” ಎಂದಿದೆ.

ತ್ರಿಪುರಾ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಳೆದ ವಾರ, ಫೇಸ್‌ಬುಕ್, ಟ್ವಿಟರ್ ಮತ್ತು ಯೂಟ್ಯೂಬ್‌ನಲ್ಲಿ ನಕಲಿ ಮತ್ತು ಪ್ರಚೋದನಕಾರಿ ಪೋಸ್ಟ್‌ಗಳನ್ನು ಮಾಡಿದ ಆರೋಪದಲ್ಲಿ ನೂರಕ್ಕೂ ಹೆಚ್ಚು ಖಾತೆಗಳ ವಿವರಗಳನ್ನು ನೀಡುವಂತೆ ಪೊಲೀಸರು ಜಾಲತಾಣಗಳಿಗೆ ನೋಟಿಸ್ ನೀಡಿದ್ದಾರೆ.

ಇತ್ತೀಚೆಗೆ, ಸುಪ್ರೀಂ ಕೋರ್ಟ್ ವಕೀಲರು, ಕಾರ್ಯಕರ್ತರು ಮತ್ತು ಪತ್ರಕರ್ತರು ಸೇರಿದಂತೆ 70 ಜನರ ವಿರುದ್ಧ ಹತ್ತಕ್ಕೂ ಹೆಚ್ಚು ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗಿದೆ.


ಇದನ್ನೂ ಓದಿ: ನನ್ನ ಹೇಳಿಕೆ ತಪ್ಪೆಂದು ಸಾಬೀತುಪಡಿಸಿದರೆ ಪದ್ಮಶ್ರೀ ವಾಪಸ್ ಮಾಡುತ್ತೇನೆ: ಕಂಗನಾ ರಣಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...