Homeಮುಖಪುಟ’ಯುಎಪಿಎಯಿಂದ ಸತ್ಯವನ್ನು ಮೌನವಾಗಿಸಲಾಗದು’: ತ್ರಿಪುರಾ ಹಿಂಸಾಚಾರಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

’ಯುಎಪಿಎಯಿಂದ ಸತ್ಯವನ್ನು ಮೌನವಾಗಿಸಲಾಗದು’: ತ್ರಿಪುರಾ ಹಿಂಸಾಚಾರಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

- Advertisement -
- Advertisement -

ತ್ರಿಪುರಾ ರಾಜ್ಯದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಜನರನ್ನು ಬಂಧಿಸುವ ಮೂಲಕ ಸತ್ಯವನ್ನು ಮೌನಗೊಳಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ತ್ರಿಪುರಾದಲ್ಲಿ ಕೋಮು ಘರ್ಷಣೆಗಳು ಮತ್ತು ಮಸೀದಿಗಳ ಮೇಲಿನ ದಾಳಿಗಳ ಕುರಿತು ಪತ್ರಕರ್ತರು, ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರ ವಿರುದ್ಧ ಪೊಲೀಸರು ಯುಎಪಿಎಯನ್ನು ಜಾರಿಗೊಳಿಸಿದ ನಂತರ ರಾಹುಲ್ ಗಾಂಧಿ ಈ ಪ್ರತಿಕ್ರಿಯೆ ನೀಡಿದ್ದಾರೆ.

“ತ್ರಿಪುರಾ ಹೊತ್ತಿ ಉರಿಯುತ್ತಿದೆ” ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಅವರು, ತ್ರಿಪುರಾ ಹೊತ್ತಿ ಉರಿಯುತ್ತಿದೆ ಎಂದರೆ, ಅದನ್ನು ಸರಿಪಡಿಸುವ ಕ್ರಮ ಕೈಗೊಳ್ಳಬೇಕು ಎಂಬುದರ ಕರೆ ಅದು. ಆದರೆ, ಬಿಜೆಪಿಯು ತನ್ನ ನೆಚ್ಚಿನ ಕೆಲಸ ಮಾಹಿತಿದಾರರನ್ನು ಹೊಡೆದುರುಳಿಸುವ ಕೆಲಸಕ್ಕೆ ಮುಂದಾಗಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ತ್ರಿಪುರಾ ಹಿಂಸಾಚಾರದ ಸತ್ಯಶೋಧನೆ ನಡೆಸಿದ ವಕೀಲರ ಮೇಲೆ ಯುಎಪಿಎ ಪ್ರಕರಣ!

ತ್ರಿಪುರಾ ಪೊಲೀಸರು ಶನಿವಾರ ಸಾಮಾಜಿಕ ಮಾಧ್ಯಮಗಳಲ್ಲಿ ಖಾತೆ ಹೊಂದಿರುವ 102 ಮಂದಿಯ ವಿರುದ್ಧ ಯುಎಪಿಎ, ಕ್ರಿಮಿನಲ್ ಪಿತೂರಿ ಮತ್ತು ಫೋರ್ಜರಿ ಆರೋಪಗಳ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಅವರ ಖಾತೆಗಳನ್ನು ನಿಷ್ಕ್ರಿಯಗೊಳಿಸುವ ಜೊತೆಗೆ ಆ ವ್ಯಕ್ತಿಗಳ ಸಂಪೂರ್ಣ ವಿವರಗಳನ್ನು ನೀಡುವಂತೆ ಟ್ವಿಟರ್, ಫೇಸ್‌ಬುಕ್ ಮತ್ತು ಯೂಟ್ಯೂಬ್‌ನ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ.

ರಾಜ್ಯದಲ್ಲಿ ಇತ್ತೀಚಿನ ಹಿಂಸಾಚಾರದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುವ ಮೂಲಕ ಕೋಮು ಗಲಭೆ ಉತ್ತೇಜಿಸಿದ ಆರೋಪದಲ್ಲಿ ತ್ರಿಪುರಾ ಪೊಲೀಸರು ನಾಲ್ವರು ಸುಪ್ರೀಂ ಕೋರ್ಟ್ ವಕೀಲರ ವಿರುದ್ಧ ಕಠಿಣ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನು ರಾಜ್ಯದಲ್ಲಿ ನಡೆದ ಕೋಮು ಘರ್ಷಣೆಗಳ ಕುರಿತು ‘ಆಕ್ಷೇಪಾರ್ಹ’ ವಿಷಯಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ 68 ಜನರ ಟ್ವಿಟರ್‌ ಖಾತೆಗಳನ್ನು ಅಮಾನತುಗೊಳಿಸುವಂತೆ ಸಾಮಾಜಿಕ ಮಾಧ್ಯಮ ಸಂಸ್ಥೆ ಟ್ವಿಟರ್‌ಗೆ ಪೊಲೀಸರು ಸೂಚಿಸಿದ್ದಾರೆ.

ಇತ್ತ ವಕೀಲರ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿರುವುದನ್ನು ಖಂಡಿಸಿ ಬೆಂಗಳೂರಿನ ವಕೀಲರು ಇಂದು (ಸೋಮವಾರ) ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ತ್ರಿಪುರ ಕೋಮು ಗಲಭೆ: 68 ಜನರ ಟ್ವಿಟರ್‌ ಖಾತೆ ಅಮಾನತುಗೊಳಿಸುವಂತೆ ಟ್ವಿಟರ್‌ಗೆ ಪತ್ರ ಬರೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...