Homeಮುಖಪುಟತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

- Advertisement -
- Advertisement -

ತ್ರಿಪುರಾ ರಾಜ್ಯದಲ್ಲಿ ನಡೆದ ಕೋಮು ಹಿಂಸಾಚಾರದ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ತೆರಳಿದ್ದ ಸುದ್ದಿ ವೆಬ್‌ಸೈಟ್ ಎಚ್‌ಡಬ್ಲೂ ನ್ಯೂಸ್‌ನ ಇಬ್ಬರು ಪತ್ರಕರ್ತೆಯರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕೃತ್ಯವನ್ನು ಮಾಧ್ಯಮ ಸಂಸ್ಥೆಗಳು ಮತ್ತು ವಿರೋಧ ಪಕ್ಷ ನಾಯಕರು ಖಂಡಿಸಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮತ್ತು Indian Women’s Press Corps ಪತ್ರಕರ್ತೆಯರ ಬಂಧನ ಖಂಡಿಸಿ, ಅವರನ್ನು ತಕ್ಷಣ ಬಿಡುಗಡೆ ಮಾಡಲು ಒತ್ತಾಯಿಸಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ’ಬಿಜೆಪಿ ವ್ಯವಸ್ಥೆಯು ಪತ್ರಿಕೋದ್ಯಮವನ್ನು ಕೊಲ್ಲುವುದರಲ್ಲಿ ನಿರತವಾಗಿದೆ. ಆದರೆ ಸುಳ್ಳಿನ ಮುಂದೆ ಸತ್ಯ ಯಾವಾಗ ಸುಮ್ಮನೆ ನಿಂತಿದೆ..?” ಎಂದು ಪ್ರಶ್ನಿಸುವ ಮೂಲಕ ಸತ್ಯ ಒಂದಲ್ಲ ಒಂದು ದಿನ ಹೊರ ಬರುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ’ಯುಎಪಿಎಯಿಂದ ಸತ್ಯವನ್ನು ಮೌನವಾಗಿಸಲಾಗದು’: ತ್ರಿಪುರಾ ಹಿಂಸಾಚಾರಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

“ಎಡಿಟರ್ಸ್ ಗಿಲ್ಡ್ ಪೊಲೀಸರ ಕ್ರಮವನ್ನು ಖಂಡಿಸಿದೆ. ತಕ್ಷಣ ಬಂಧಿತ ಪತ್ರಕರ್ತರನ್ನು ಬಿಡುಗಡೆ ಮಾಡಬೇಕು ಮತ್ತು ಅವರ ಪ್ರಯಾಣದ ಸ್ವಾತಂತ್ರ್ಯವನ್ನು ಮರಳಿ ನೀಡಲು ಒತ್ತಾಯಿಸುತ್ತದೆ” ಎಂದು ಎಡಿಟರ್ಸ್ ಗಿಲ್ಡ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Indian Women’s Press Corps ಕೂಡ ಇಬ್ಬರು ಪತ್ರಕರ್ತರ ವಿರುದ್ಧ ಪೊಲೀಸ್ ಕ್ರಮವನ್ನು ಖಂಡಿಸಿದೆ ಜೊತೆಗೆ ಯಾವುದೇ ಭಯವಿಲ್ಲದೆ ಅವರ ಕೆಲಸವನ್ನು ಮಾಡಲು ಅವರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದೆ.

ತ್ರಿಪುರಾದಲ್ಲಿ ನಡೆದ ಇತ್ತೀಚಿನ ಕೋಮು ಘಟನೆಗಳ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ತ್ರಿಪುರಾಕ್ಕೆ ಬಂದಿದ್ದ ಸುದ್ದಿ ವೆಬ್‌ಸೈಟ್ ಎಚ್‌ಡಬ್ಲೂ ನ್ಯೂಸ್‌ನ (@hwnewsnetwork) ಇಬ್ಬರು ಮಹಿಳಾ ಪತ್ರಕರ್ತರನ್ನು ಅಸ್ಸಾಂ ಪೊಲೀಸರು ಭಾನುವಾರ ಅಸ್ಸಾಂ-ತ್ರಿಪುರಾ ಗಡಿಗೆ ಸಮೀಪವಿರುವ ಕರೀಂಗಂಜ್‌ನ ನೀಲಂ ಬಜಾರ್‌ನಲ್ಲಿ ಬಂಧಿಸಿದ್ದಾರೆ ಎಂದು ಎರಡೂ ರಾಜ್ಯಗಳ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಇಬ್ಬರು ಪತ್ರಕರ್ತೆಯರ ವಿರುದ್ಧ ವಿಶ್ವ ಹಿಂದೂ ಪರಿಷತ್ತಿನ ದೂರಿನ ಮೇಲೆ ಶನಿವಾರ ಉನಕೋಟಿ ಜಿಲ್ಲೆಯ ಫಾಟಿಕ್ರೋಯ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಸಿಲ್ಚಾರ್‌ಗೆ ತೆರಳುತ್ತಿದ್ದ ವೇಳೆ ಅಸ್ಸಾಂ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಅಸ್ಸಾಂನಲ್ಲಿ ಇವರ ಮೇಲೆ ಯಾವುದೇ ದೂರು ದಾಖಲಾಗದಿದ್ದರೂ ಗೋಮತಿ ಜಿಲ್ಲಾ ಎಸ್‌ಪಿ ಆದೇಶದಂತೆ ಬಂಧಿಸಲಾಗಿದೆ.

“ನಮ್ಮನ್ನು ಅಸ್ಸಾಂನ ಕರೀಂಗಂಜ್‌ನ ನಿಲಂಬಜಾರ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಗೋಮತಿ ಜಿಲ್ಲಾ ಎಸ್‌ಪಿಯವರು ನಮ್ಮ ಬಂಧನಕ್ಕೆ ಆದೇಶ ನೀಡಿದ್ದಾರೆ ಎಂದು ನಿಲಂಬಜಾರ್ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿಯಿಂದ ನಮಗೆ ತಿಳಿಯಿತು” ಎಂದು ಪತ್ರಕರ್ತೆ ಸಮೃದ್ಧಿ ಸಕುನಿಯಾ ಟ್ವೀಟ್ ಮಾಡಿದ್ದಾರೆ. ಜೊತೆಗೆ ತಮ್ಮ ಸುದ್ದಿ ಸಂಸ್ಥೆಯ ಅಧಿಕೃತ ಹೇಳಿಕೆಯನ್ನು ಲಗತ್ತಿಸಿದ್ದಾರೆ. ಇಂದು ಅಸ್ಸಾಂ ಪೊಲೀಸರು ಇಬ್ಬರನ್ನು ತ್ರಿಪುರಾ ಪೊಲೀಸರಿಗೆ ಒಪ್ಪಿಸಲಿದ್ದಾರೆ.


ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರನ್ನು ಬಂಧಿಸಿದ ಅಸ್ಸಾಂ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...