Homeಮುಖಪುಟಸಿಜೆಐ ಚಂದ್ರಚೂಡ್‌ ವಿರುದ್ಧ ಮುಗಿಬಿದ್ದ ಟ್ರೋಲ್‌ ಪಡೆ; ಕ್ರಮಕ್ಕೆ ಆಗ್ರಹಿಸಿ ಪ್ರತಿಪಕ್ಷಗಳಿಂದ ರಾಷ್ಟ್ರಪತಿಗೆ ಪತ್ರ

ಸಿಜೆಐ ಚಂದ್ರಚೂಡ್‌ ವಿರುದ್ಧ ಮುಗಿಬಿದ್ದ ಟ್ರೋಲ್‌ ಪಡೆ; ಕ್ರಮಕ್ಕೆ ಆಗ್ರಹಿಸಿ ಪ್ರತಿಪಕ್ಷಗಳಿಂದ ರಾಷ್ಟ್ರಪತಿಗೆ ಪತ್ರ

- Advertisement -
- Advertisement -

“ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್‌ ಅವರ ವಿರುದ್ಧ ಆನ್‌ಲೈನ್‌ ಟ್ರೋಲಿಂಗ್‌ ನಡೆಯುತ್ತಿದ್ದು, ತಕ್ಷಣ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿ 13 ವಿರೋಧ ಪಕ್ಷಗಳ ನಾಯಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

“ಮಹಾರಾಷ್ಟ್ರದಲ್ಲಿ ಆಗಿರುವ ಸರ್ಕಾರ ರಚನೆ ಮತ್ತು ರಾಜ್ಯಪಾಲರ ಪಾತ್ರದ ವಿಷಯದಲ್ಲಿನ ಮಹತ್ವದ ಸಾಂವಿಧಾನಿಕ ಪ್ರಶ್ನೆಗಳು ಸುಪ್ರೀಂಕೋರ್ಟ್‌ನ ಮುಂದಿವೆ. ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ವಿಚಾರಣೆ ನಡೆಸುತ್ತಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಈ ವಿಷಯ ನ್ಯಾಯಸಮ್ಮತವಾದದ್ದು. ಆದರೆ ಮಹಾರಾಷ್ಟ್ರದ ಆಡಳಿತ ಪಕ್ಷದ ಹಿತಾಸಕ್ತಿಗಳಿಗೆ ಸಹಾನುಭೂತಿ ಹೊಂದಿರುವ ಟ್ರೋಲ್ ಪಡೆಯು ಸಿಜೆಐ ವಿರುದ್ಧ ಆಕ್ರಮಣವನ್ನು ಪ್ರಾರಂಭಿಸಿದೆ” ಎಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

“ಇಲ್ಲಿ ಬಳಸಲಾಗುತ್ತಿರುವ ಪದಗಳು ಮತ್ತು ವಿಷಯಗಳು ಅಶ್ಲೀಲವೂ ಶೋಚನೀಯವೂ ಆಗಿವೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಇಂತಹ ಟ್ರೋಲ್‌ಗಳನ್ನು ಲಕ್ಷಾಂತರ ಜನರು ವೀಕ್ಷಿಸುತ್ತಿದ್ದಾರೆ” ಎಂದು ಮಾರ್ಚ್ 16ರಂದು ಬರೆದಿರುವ ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

ಪತ್ರವನ್ನು ಕಾಂಗ್ರೆಸ್ ಸಂಸದ ವಿವೇಕ್ ಟಂಖಾ ಬರೆದಿದ್ದಾರೆ. ಕಾಂಗ್ರೆಸ್‌ ಸಂಸದರಾದ ದಿಗ್ವಿಜಯ ಸಿಂಗ್, ಶಕ್ತಿಸಿನ್ಹ್ ಗೋಹಿಲ್, ಪ್ರಮೋದ್ ತಿವಾರಿ, ಅಮೀ ಯಾಗ್ನಿಕ್, ರಂಜಿತ್‌ ರಂಜನ್, ಇಮ್ರಾನ್ ಪ್ರತಾಪ್‌ಗರ್ಹಿ, ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ, ಶಿವಸೇನಾ (ಯುಬಿಟಿ) ಸದಸ್ಯ ಪ್ರಿಯಾಂಕಾ ಚತುರ್ವೇದಿ ಮತ್ತು ಸಮಾಜವಾದಿ ಪಕ್ಷದ ಜಯಾ ಬಚ್ಚನ್, ರಾಮ್ ಗೋಪಾಲ್ ಯಾದವ್ ಈ ಪತ್ರವವನ್ನು ಬೆಂಬಲಿಸಿದ್ದಾರೆ. ಇದೇ ವಿಚಾರವಾಗಿ ಟಂಖಾ ಅವರು ಭಾರತದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.

ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಉರುಳಲು ಕಾರಣವಾದ ವಿದ್ಯಮಾನಕ್ಕೆ ಸಂಬಂಧಿಸಿದಂತೆ, ಬಹುಮತ ಸಾಬೀತಿಗೆ ಆಹ್ವಾನ ನೀಡಿದ ಮಾಜಿ ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ ಅವರ ಕ್ರಮದ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಪ್ರಕರಣದ ವಿಚಾರಣೆ ಆರಂಭವಾದ ನಂತರ ಸಿಜೆಐ ಮತ್ತು ನ್ಯಾಯಾಂಗದ ಮೇಲೆ ಆನ್‌ಲೈನ್ ಟ್ರೋಲ್‌ಗಳು ನಡೆಯುತ್ತಿವೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವನ್ನು ಉರುಳಿಸಿ ಏಕನಾಥ್‌ ಶಿಂಧೆಯವರು ಮುಖ್ಯಮಂತ್ರಿಯಾದ ಬಳಿಕ ಮಹಾರಾಷ್ಟ್ರದ ಆಡಳಿತ ಪಕ್ಷವಾದ ಶಿವಸೇನೆ ಎರಡು ಬಣಗಳಾಯಿತು. ಒಂದು ಶಿಂಧೆ ಬಣವಾದರೆ, ಮತ್ತೊಂದು ಉದ್ಧವ್ ಬಣವಾಗಿದೆ.

ಇದನ್ನೂ ಓದಿರಿ: ಉರೀಗೌಡ ನಂಜೇಗೌಡ ಸಿನಿಮಾ ಶೀರ್ಷಿಕೆ ನೋಂದಣಿಗೆ ಮುಂದಾದ ಬಿಜೆಪಿ: ಹೆಚ್.ಡಿ ಕುಮಾರಸ್ವಾಮಿ ಕಿಡಿ

ನವೆಂಬರ್ 26, 2021ರಂದು ಸಂವಿಧಾನ ದಿನದಂದು ಮಾತನಾಡಿದ್ದ ಮಾಜಿ ಸಿಜೆಐ ಎನ್.ವಿ.ರಮಣ ಅವರು “ಮಾಧ್ಯಮಗಳಲ್ಲಿ, ವಿಶೇಷವಾಗಿ ಸಾಮಾಜಿಕ ಮಾಧ್ಯಮದಲ್ಲಿ ನ್ಯಾಯಾಂಗದ ಮೇಲೆ ದಾಳಿಗಳು ಹೆಚ್ಚಿವೆ” ಎಂದು ಕಳವಳ ವ್ಯಕ್ತಪಡಿಸಿದ್ದರು.

ಈ ದಾಳಿಗಳು ಪ್ರಯೋಜಿತವಾಗಿವೆ ಎಂದು ತೋರುತ್ತಿದೆ. ಕೇಂದ್ರೀಯ ಏಜೆನ್ಸಿಗಳು ಪರಿಣಾಮಕಾರಿಯಾಗಿ ಅವುಗಳನ್ನು ನಿಭಾಯಿಸಬೇಕು ಎಂದು ಅವರು ಆಶಿಸಿದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ನ್ಯಾಯಾಧೀಶರ ಮೇಲೆ ಮಾಡುವ ಟೀಕೆಗಳಿಗೆ ಕಡಿವಾಣ ಹಾಕಲು ಕಾನೂನು ರೂಪಿಸುವಂತೆ ಕೋರಿ ಸಿಜೆಐ ರಮಣ ಅವರು ಪತ್ರ ಬರೆದಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಹೇಳಿದ್ದರು. ಆದಾಗ್ಯೂ “ಕಾನೂನಿನ ಮೂಲಕ ನ್ಯಾಯಾಧೀಶರ ಮೇಲಿನ ಟೀಕೆಗಳನ್ನು ನಿರ್ಬಂಧಿಸುವುದು ಕಾರ್ಯಸಾಧ್ಯವಲ್ಲ” ಎಂದು ರಿಜಿಜು ಸ್ಪಷ್ಟಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...