Homeಮುಖಪುಟಉದ್ಧವ್ ಠಾಕ್ರೆಗೆ ಮತ್ತೆ ಸಂಕಷ್ಟ: ದ್ರೌಪದಿ ಮುರ್ಮು ಬೆಂಬಲಿಸುವಂತೆ 16 ಸಂಸದರ ಒತ್ತಡ

ಉದ್ಧವ್ ಠಾಕ್ರೆಗೆ ಮತ್ತೆ ಸಂಕಷ್ಟ: ದ್ರೌಪದಿ ಮುರ್ಮು ಬೆಂಬಲಿಸುವಂತೆ 16 ಸಂಸದರ ಒತ್ತಡ

- Advertisement -
- Advertisement -

ಶಿವಸೇನೆ ಪಕ್ಷದ 40 ಶಾಸಕರು ಬಂಡಾಯವೆದ್ದು ಮಹಾವಿಕಾಸ್ ಅಘಾಡಿ ಸರ್ಕಾರ ಕೆಡವಿ, ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸಿ ಉದ್ಧವ್ ಠಾಕ್ರೆಗೆ ಸವಾಲೆಸೆದಿದ್ದಾರೆ. ಈ ಬೆನ್ನಲ್ಲೆ ಪಕ್ಷದ 16 ಸಂಸದರು ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುರವರನ್ನು ಬೆಂಬಲಿಸುವಂತೆ ಮಾಜಿ ಸಿಎಂ ಠಾಕ್ರೆ ಮೇಲೆ ಒತ್ತಡ ಹೇರುವ ಮೂಲಕ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ.

ಇಂದು ಉದ್ಧವ್ ಠಾಕ್ರೆಯವರು ನಡೆಸಿದ ಸಭೆಯಲ್ಲಿ ಭಾಗವಹಿಸಿರುವ ಸಂಸದರು, “ಮಹಾರಾಷ್ಟ್ರದಲ್ಲಿ ಆದಿವಾಸಿ ಜನಸಂಖ್ಯೆ ಗಣನೀಯ ಮಟ್ಟದಲ್ಲಿದೆ. ದ್ರೌಪದಿ ಮುರ್ಮುರವರು ಬುಡಕಟ್ಟು ಮಹಿಳೆಯಾದ ಕಾರಣ ಅವರನ್ನು ಬೆಂಬಲಿಸಬೇಕೆಂದು” ಒತ್ತಡ ತಂದಿದ್ದಾರೆ. ಇದುವರೆಗೂ ವಿರೋಧ ಪಕ್ಷಗಳ ಅಭ್ಯರ್ಥಿಯಾದ ಯಶವಂತ ಸಿನ್ಹಾರನ್ನು ಬೆಂಬಲಿಸುವುದಾಗಿ ಘೋಷಿಸಿದ್ದ ಠಾಕ್ರೆಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಶಿವಸೆನೆಯ ಸಂಸದ ಗಜಾನನ ಕೀರ್ತಿಕರ್ 16 ಸಂಸದರ ಪರವಾಗಿ ಮಾತನಾಡಿದ್ದು, ಬುಡಕಟ್ಟು ಅಭ್ಯರ್ಥಿ ದ್ರೌಪದಿ ಮುರ್ಮುರವರನ್ನೆ ಬೆಂಬಲಿಸುತ್ತೇವೆ ಎಂದಿದ್ದಾರೆ. ಏಕನಾಥ್ ಶಿಂಧೆ ಬಂಡಾಯವೆದ್ದು ಸಿಎಂ ಆದ ನಂತರ ಪಕ್ಷವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿರುವ ಠಾಕ್ರೆಗೆ ಸಂಸದರ ನಿರ್ಣಯ ಗಾಯದ ಮೇಲೆ ಬರೆ ಎಳೆದಂತೆ ಪರಿಣಮಿಸಿದೆ. ಹಾಗಾಗಿ ರಾಷ್ಟ್ರಪತಿ ಚುನಾವಣೆಯಲ್ಲಿ ವಿಪ್ ಜಾರಿಗೊಳಿಸದೆ ಸಂಸದರು ತಮಗೆ ಸರಿ ಎನಿಸಿದವರಿಗೆ ಮತ ಹಾಕಲು ಬಿಡಲಾಗುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ.

ಈ ಕುರಿತು ಮಾಧ್ಯಮಗಳ ಜೊತೆ ಪ್ರತಿಕ್ರಿಯಿಸಿರುವ ಉದ್ಧವ್ ಠಾಕ್ರೆ ಈ ಬಗ್ಗೆ ಇನ್ನು ಎರಡು ದಿನದಲ್ಲಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಅವರ ಸಹವರ್ತಿ ರಾಜ್ಯಸಭಾ ಸಂಸದ ಸಂಜಯ್ ರಾವತ್ ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ. ಇದು ಅವರಿಗೆ ಸಂಸದರ ನಿರ್ಣಯ ಕೋಪ ತರಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಶಿವಸೇನೆಯು 19 ಲೋಕಸಭಾ ಸಂಸದರು ಮತ್ತು 03 ರಾಜ್ಯಸಭಾ ಸಂಸದರನ್ನು ಹೊಂದಿದೆ. ಸಂಸತ್ ಸದಸ್ಯರಲ್ಲಿ ಬಂಡಾಯವನ್ನು ತಪ್ಪಿಸಲು ಕಳೆದ ವಾರ ಠಾಕ್ರೆ ಲೋಕಸಭಾ ಹೊಸ ಮುಖ್ಯ ಸಚೇತಕರನ್ನು ನೇಮಿಸಿದ್ದರು. ಆದರೆ ಇಂದಿನ ಸಭೆಗೆ ಏಕನಾಥ್ ಶಿಂಧೆಯ ಪುತರ ಸೇರಿದಂತೆ 06 ಜನರು ಗೈರು ಹಾಜರಾಗಿದ್ದಾರೆ.

ಠಾಕ್ರೆ ಬೆಂಬಲಿಗ ಸಂಸದ ಅರವಿಂದ್ ಸಾವಂತ್ ಕಳೆದ ವಾರ ಸಂದರ್ಶನದಲ್ಲಿ ಮಾತನಾಡುತ್ತಾ, “ಯಾರಿಗೆ ಪಕ್ಷದಲ್ಲಿ ಇರಲು ಇಷ್ಟವಿಲ್ಲವೊ ಅವರು ಪಕ್ಷ ತ್ಯಜಿಸಲಿ. ನಾವು 19 ಸಂಸದರಿದ್ದ ಪಕ್ಷಾಂತರ ನಿಷೇಧ ಕಾಯ್ದೆಯಿಂದ ತಪ್ಪಿಸಿಕೊಳ್ಳಲು ಮೂರನೇ ಎರಡು ಬಹುಮತವಾದ 12 ಸಂಸದರು ಇದಕ್ಕೆ ಸಿದ್ದವಿದ್ದಾರೆಯೆ?” ಎಂದು ಪ್ರಶ್ನಿಸಿದ್ದರು.


ಇದನ್ನೂ ಓದಿ: ಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...