Homeಕರ್ನಾಟಕಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

ಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

- Advertisement -
- Advertisement -

ಸೋಫಿಟೆಲ್‍ನಿಂದ ರೆನೆಸಾನ್ಸ್ ಹೋಟೆಲ್‍ಗೆ ಶಿಫ್ಟ್ ಆಗಿದ್ದ ತೃಪ್ತರಾಗದ ಶಾಸಕರನ್ನು ಮಾತಾಡಿಸಿ ಕರೆದುಕೊಂಡೇ ಬರುತ್ತೇನೆಂದು ಹೊರಟ ಡಿ.ಕೆ.ಶಿವಕುಮಾರ್ ಸಾಧಿಸಿದ್ದೇನು? ಒಬ್ಬ ಶಾಸಕರನ್ನಾದರೂ ಕರೆದುಕೊಂಡು ಬರುವುದಿರಲಿ ಮಾತಾಡಿಸಲೂ ಅವರಿಗೆ ಸಾಧ್ಯವಾಗಲಿಲ್ಲ. ಆದರೆ, ಅವರಿಗೆ ಏನು ಬೇಕೋ ಅದನ್ನು ಅವರು ಪಡೆದುಕೊಂಡಾಯಿತು. ಬೆಳಿಗ್ಗೆಯಿಂದ ಸಂಜೆ 4 ಗಂಟೆಯವರೆಗೆ ಇಂಗ್ಲಿಷ್ ಚಾನೆಲ್‍ಗಳೂ ಒಳಗೊಂಡಂತೆ ಮಾಧ್ಯಮದ ಕೇಂದ್ರಬಿಂದು ಡಿ.ಕೆ.ಶಿ ಅವರೇ ಆಗಿದ್ದರು. ಮಹಾರಾಷ್ಟ್ರದಲ್ಲಿ ಮತ್ತು ಇಂಗ್ಲಿಷಿನಲ್ಲಿ ವ್ಯವಹರಿಸುವ ಹಲವಾರು ಪ್ರಭಾವೀ ಟ್ವಿಟ್ಟಿಗರು ಕಾಂಗ್ರೆಸ್ ಪಕ್ಷದ ಮೇಲೆ ಯಾವ ಪರಿ ಬಿದ್ದರೆಂದರೆ, ಮುಂಬೈನ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದೇವ್ರಾ ಅವರಿಗೆ ಟ್ವಿಟ್ಟರ್ ನಲ್ಲೇ ಉತ್ತರಿಸಿ ಓಡಿ ಹೋಗಿ ಡಿಕೆಶಿ ಪಕ್ಕ ಕೂರಬೇಕಾಯಿತು. ಅಂತಿಮವಾಗಿ ಡಿಕೆಶಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಹೋಗುವಾಗ ಜೊತೆಯಲ್ಲಿ ಮಿಲಿಂದ್ ದೇವ್ರಾ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ನಸೀಮ್ ಖಾನ್ ಸಹಾ ಇದ್ದರು.

ಖ್ಯಾತ ಪತ್ರಕರ್ತೆ ಸ್ವಾತಿ ಚತುರ್ವೇದಿ ಒಂದೇ ಸಮನೆ ಟ್ವೀಟ್ ಮಾಡುತ್ತಾ ಕಾಂಗ್ರೆಸ್ಸಿಗರನ್ನು ಕಾಡಿದರು. ರಾಹುಲ್‍ಗಾಂಧಿಗೂ ಟ್ಯಾಗ್ ಮಾಡಿ, ‘ಅಲ್ಲಿ ಒಬ್ಬಂಟಿಯಾಗಿ ಹೋರಾಡುತ್ತಿರುವ ಡಿ.ಕೆ.ಶಿವಕುಮಾರ್‍ರನ್ನು ನೋಡಿ ಕಲಿತುಕೊಳ್ಳಿ’ ಎಂದರು. ರಾಹುಲ್‍ಗಾಂಧಿಯ ಸ್ಥಾನದಲ್ಲಿ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷರಾಗುವ ಹೆಸರುಗಳಲ್ಲಿ ಮಿಲಿಂದ್ ದೇವ್ರಾ ಹೆಸರೂ ಓಡುತ್ತಿತ್ತು. ಹಾಗಾಗಿ ರಾಷ್ಟ್ರೀಯ ಅಧ್ಯಕ್ಷರಾಗಬೇಕಾದವರು ಡಿ.ಕೆ.ಶಿವಕುಮಾರ್ ಥರದವರು; ಮಿಲಿಂದ್ ದೇವ್ರಾ ಅಲ್ಲ ಎಂದೆಲ್ಲಾ ಹೇಳಲಾಯಿತು.

ಇದಕ್ಕೆ ಮುಂಚೆ ಸ್ಪೀಕರ್‍ಗೆ 12 ಜನ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ ಎಂಬ ಸುದ್ದಿ ಬಂದಾಗಲೂ ವಿಧಾನಸೌಧಕ್ಕೆ ಓಡಿದ್ದ ಡಿಕೆಶಿ ಶಾಸಕ ಮುನಿರತ್ನರ ರಾಜೀನಾಮೆ ಪತ್ರವನ್ನು ಹರಿದು ಹಾಕಿದ್ದರು. ಮರುದಿನ ಮುಂಬೈನ ಅದೇ ಹೋಟೆಲ್‍ನಲ್ಲಿ ರೂಂ ಬುಕ್ ಮಾಡಿಕೊಂಡು ವಿಮಾನ ಹತ್ತುವ ಮುಂಚೆಯೇ ‘ಮುಂಬೈಗೆ ಹೋಗಿ ಅವರನ್ನು ಕರೆತರುತ್ತೇನೆ’ ಎಂದು ಘೋಷಿಸಿದರು. ಹೋಟೆಲ್‍ನಲ್ಲಿದ್ದ ಶಾಸಕರನ್ನು ಡಿಕೆಶಿ ಭೇಟಿಯಾಗದಂತೆ ತಡೆಯಬೇಕೆಂದರೆ ಅವರಿಂದಲೇ ದೂರು ಪಡೆದುಕೊಳ್ಳಬೇಕು. ಬಿಜೆಪಿ ಅದನ್ನೂ ಮಾಡಿತು. ಮಧ್ಯರಾತ್ರಿ ಅಲ್ಲಿದ್ದ 10 ಶಾಸಕರಿಂದ ದೂರು ಬರೆಸಿಕೊಂಡು, ಮರುದಿನ ಅಲ್ಲಿನ ಡಿಸಿಪಿ ‘ಈ ಪತ್ರ ಇಲ್ಲದೇ ಇದ್ದರೆ ನಾವು ನಿಮ್ಮನ್ನು ತಡೆಯುತ್ತಿರಲಿಲ್ಲ’ ಎಂದು ಹೇಳಲು ಬೇಕಾದ ವ್ಯವಸ್ಥೆ ಮಾಡಿಕೊಂಡರು.

ಇದನ್ನೂ ಓದಿ: ಡಿಕೆಶಿ ಪರ ಬ್ಯಾಟಿಂಗ್ ಮಾಡಿದ ಸ್ವಾತಿ ಚತುರ್ವೇದಿ

ಅದೂ ಸಹಾ ಡಿಕೆಶಿಯ ಸಾಮಥ್ರ್ಯದ ಬಗೆಗಿನ ಇಮೇಜ್‍ ಅನ್ನು ಹೆಚ್ಚಿಸಿತೇ ಹೊರತು ಕಡಿಮೆ ಮಾಡಲಿಲ್ಲ. ಹೋಟೆಲ್ ಮುಂದೆ ಪೊಲೀಸರು ತಡೆದಾಗ ಶಿವಕುಮಾರ್ ವಾಪಸ್ ಹೋಗಲಿಲ್ಲ. ನಾನಿವತ್ತು ಇಲ್ಲೇ ಇದ್ದು ಕರೆದುಕೊಂಡೇ ಹೋಗುತ್ತೇನೆ ಎಂದರು. ಇಂಗ್ಲಿಷ್ ಮೀಡಿಯಾಗಳಿಗೆ ಮಾತನಾಡಿದರು. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಡಿಕೆಶಿ ವಹಿಸಿದ್ದ ಪಾತ್ರದಿಂದ ‘ಟ್ರಬಲ್‍ಶೂಟರ್’ ಪಟ್ಟ ಗಿಟ್ಟಿಸಿಕೊಂಡಿದ್ದ ಅವರು ಮಧ್ಯೆ ಡಲ್ ಆಗಿದ್ದರು. ಈಗ ಮತ್ತೆ ಟ್ರಬಲ್‍ಶೂಟರ್ ಅಲ್ಲದಿದ್ದರೂ ಫೈಟರ್ ಎಂಬ ಇಮೇಜ್‍ಅನ್ನು ಕೇವಲ ರಾಜ್ಯದಲ್ಲಿ ಮಾತ್ರವಲ್ಲದೇ ರಾಷ್ಟ್ರೀಯ ಮಟ್ಟದಲ್ಲೂ ಸ್ಥಾಪನೆ ಮಾಡಿಕೊಂಡರು.

2002ರಲ್ಲಿ ವಿಲಾಸರಾವ್ ದೇಶಮುಖ್ ವಿಶ್ವಾಸಮತ ಯಾಚನೆ ಮಾಡುವ ಸಂದರ್ಭದಲ್ಲಿ, 2017ರಲ್ಲಿ ಗುಜರಾತ್‍ನ ಎಂಎಲ್‍ಎಗಳು ಅಹ್ಮದ್ ಪಟೇಲ್‍ರಿಗೇ ರಾಜ್ಯಸಭಾ ಚುನಾವಣೆಯಲ್ಲಿ ಓಟು ಹಾಕುವಂತೆ ಮಾಡಲು ಶಾಸಕರನ್ನು ಕರ್ನಾಟಕಕ್ಕೇ ಕಳಿಸಿ ಡಿಕೆಶಿ ಸುಪರ್ದಿಗೆ ವಹಿಸಲಾಗಿತ್ತು. ಎಲ್ಲವನ್ನೂ ತಲೆ ಮೇಲೆ ಹೊತ್ತುಕೊಂಡು ಮಾಡಿದ ಅವರು ಇಂದಲ್ಲಾ ನಾಳೆ ರಾಜ್ಯದ ಮುಖ್ಯಮಂತ್ರಿ ಆಗುವ ಆಸೆ ಇಟ್ಟುಕೊಂಡೇ ಇದ್ದಾರೆ.

ಆದರೆ, ತನ್ನ ಹಿಂದೆ ಬೆರಳಣಿಕೆಯ ಶಾಸಕರನ್ನೂ ಹೊಂದಿಲ್ಲದಿರುವುದೇ ಅವರ ಸಮಸ್ಯೆ. ಅದರ ಜೊತೆಗೆ ‘ಬ್ಯಾಡ್‍ಬಾಯ್’ ಇಮೇಜ್ ಇನ್ನೂ ಇದ್ದು, ಕುಮಾರಸ್ವಾಮಿಗಿರುವ ಜನಾನುರಾಗಿ ಎಂದೋ ಅಥವಾ ಸಿದ್ದರಾಮಯ್ಯರಿಗಿರುವ ಮಾಸ್ ಲೀಡರ್ ಎಂಬ ಇಮೇಜೋ ಇಲ್ಲದಿರುವ ಕೊರತೆ ಇದೆ. ಕನಿಷ್ಠ ಒಕ್ಕಲಿಗರ ನಾಯಕ ಎಂಬ ಪಟ್ಟವಾದರೂ ಇರಲಿ ಎಂಬ ಕಾರಣಕ್ಕೆ ‘ಯಾವ ಕಾರಣಕ್ಕೂ ಕುಮಾರಸ್ವಾಮಿಯವರ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ಮಾಡುವುದಿಲ್ಲ’ ಎಂಬ ಮಾತನ್ನು ಪದೇ ಪದೇ ಹೇಳಿದ್ದಾರೆ.

ಇವೆಲ್ಲವೂ ಇಂದಲ್ಲಾ ನಾಳೆ ಅವರನ್ನು ಮುಖ್ಯಮಂತ್ರಿ ಪಟ್ಟಕ್ಕೆ ಏರಿಸುತ್ತದಾ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ವಿಶ್ವಾಸಮತ ಗೆದ್ದ ರಮೇಶ್‍ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....