Homeಮುಖಪುಟಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

- Advertisement -
- Advertisement -

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್ ಶುಕ್ರವಾರ (ಏ.10) ಅನುಮತಿ ನೀಡಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ.

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅನ್ನು ಸಂಸದೀಯ ಸಮಿತಿಗೆ ಕಳುಹಿಸಬೇಕು ಎಂಬ ನಿರ್ಣಯ ತಿರಸ್ಕೃತಗೊಂಡ ಬಳಿಕ, ಮಾರ್ಚ್ 25 ರಂದು ಸಂಸತ್ತು ಅಂಗೀಕರಿಸಿದೆ. ಈ ಶಾಸನವು 2019ರ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಕ್ಕುಗಳ ಸಂರಕ್ಷಣಾ ಕಾಯ್ದೆಯಲ್ಲಿ ಹೇಳಲಾದ ಟ್ರಾನ್ಸ್‌ಜೆಂಡರ್‌ ವ್ಯಕ್ತಿಯಾಗಿ ಯಾರು ಅರ್ಹತೆ ಪಡೆಯುತ್ತಾರೆ ಎಂಬುದನ್ನು ಮರು ವ್ಯಾಖ್ಯಾನಿಸುವ ತಿದ್ದುಪಡಿ ತಂದಿದೆ.

ಹೊಸ ಕಾನೂನು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ತಮ್ಮದೇ ಆದ ಲಿಂಗ ಗುರುತನ್ನು (self-perceived gender identity) ಹೊಂದುವ ಹಕ್ಕನ್ನು ತೆಗೆದುಹಾಕುತ್ತದೆ. ಅಷ್ಟೇ ಅಲ್ಲದೆ, ಈ ಕಾನೂನಿನ ವ್ಯಾಪ್ತಿಯನ್ನು ಕೇವಲ ಕೆಲವು ನಿರ್ದಿಷ್ಟ ಜೈವಿಕ ಅಥವಾ ದೈಹಿಕ ಗುಣಲಕ್ಷಣಗಳು, ಇಂಟರ್ ಸೆಕ್ಸ್ ವೈವಿಧ್ಯಗಳು ಅಥವಾ ಕಿನ್ನರ್, ಹಿಜ್ರಾ, ಅರವಣಿ ಮತ್ತು ಜೋಗ್ತಿಯಂತಹ ನಿರ್ದಿಷ್ಟ ಸಾಮಾಜಿಕ-ಸಾಂಸ್ಕೃತಿಕ ಗುರುತು ಹೊಂದಿರುವವರಿಗೆ ಮಾತ್ರ ಸೀಮಿತಗೊಳಿಸುತ್ತದೆ.

ತಿದ್ದುಪಡಿ ಕಾಯ್ದೆಯ ವಿರುದ್ದ ಸಲ್ಲಿಸಲಾದ ಎರಡು ಅರ್ಜಿಗಳನ್ನು ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರ ಕೇರಳ ಹೈಕೋರ್ಟ್ ಪೀಠ ಶುಕ್ರವಾರ ವಿಚಾರಣೆ ನಡೆಸಿದೆ. ವಾದಗಳನ್ನು ಆಲಿಸಿದ ನಂತರ, ನ್ಯಾಯಮೂರ್ತಿ ಅರ್ಜಿಗಳ ಕುರಿತು ನೋಟಿಸ್ ಜಾರಿ ಮಾಡಿದ್ದಾರೆ ಎಂದು livelaw.in ವರದಿ ಮಾಡಿದೆ.

ಹೊಸ ಶಾಸನದ ಹಲವು ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಎರಡು ಅರ್ಜಿಗಳು, ಇದು 2014ರ ‘ನ್ಯಾಷನಲ್ ಲೀಗಲ್ ಸರ್ವಿಸಸ್ ಅಥಾರಿಟಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ’ (ಎನ್‌ಎಎಲ್‌ಎಸ್‌ಎ) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ತತ್ವಗಳಿಗೆ ವಿರುದ್ಧವಾಗಿದೆ ಎಂದು ವಾದಿಸಿವೆ. ಸ್ವಯಂ-ಗುರುತಿಸುವಿಕೆಯ ಹಕ್ಕನ್ನು ತೆಗೆದುಹಾಕಿರುವುದು ಮತ್ತು ಕಡ್ಡಾಯ ವೈದ್ಯಕೀಯ ಪ್ರಮಾಣೀಕರಣವನ್ನು ಸೇರಿಸಿರುವುದು ಈ ವಿರೋಧಕ್ಕೆ ಪ್ರಮುಖ ಕಾರಣಗಳೆಂದು ಅರ್ಜಿದಾರರು ಉಲ್ಲೇಖಿಸಿದ್ದಾರೆ.

2014ರ ತೀರ್ಪು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗಾಗಿ ಔಪಚಾರಿಕವಾಗಿ ಮೂರನೇ ಲಿಂಗ (third gender) ಎಂಬ ವರ್ಗವನ್ನು ಸೃಷ್ಟಿಸಿತ್ತು ಮತ್ತು ಅವರನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗವೆಂದು ಗುರುತಿಸಿತ್ತು.

ತಿದ್ದುಪಡಿ ಅಧಿಸೂಚನೆ ಹೊರಬಂದ ನಂತರ, ತಾವು ಹಾರ್ಮೋನ್ ರಿಪ್ಲೇಸ್‌ಮೆಂಟ್ ಥೆರಪಿ ಪಡೆಯುತ್ತಿದ್ದ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡುವುದನ್ನು ನಿಲ್ಲಿಸಿವೆ ಎಂದು ಇಬ್ಬರೂ ಅರ್ಜಿದಾರರು ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಧೀಶರು, ಇಂತಹ ಚಿಕಿತ್ಸೆಯನ್ನು ವ್ಯಕ್ತಿಯೊಬ್ಬರಿಗೆ ದಿಢೀರನೆ ನಿಲ್ಲಿಸಿದರೆ, ಅದು ಅವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಹೇಳಿದ್ದಾರೆ. ಅಲ್ಲದೆ, ಈ ವಿಷಯದ ಬಗ್ಗೆ ಶಾಸನದಲ್ಲೇ ಮುನ್ನೆಚ್ಚರಿಕೆ ವಹಿಸಬೇಕಾಗಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ವಿಚಾರಣೆಯ ವೇಳೆ ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ. ಶ್ರೀಕುಮಾರ್ ಅವರು, ಸ್ವಯಂ-ಗುರುತಿಸುವಿಕೆಯ ವಿಷಯವು ಹಲವಾರು ದೇಶಗಳಲ್ಲಿ ದೊಡ್ಡ ವಿವಾದವಾಗಿದೆ ಎಂದು ಹೇಳಿದ್ದಾರೆ. ಅಮೆರಿಕಾದಲ್ಲಿ ಅನೇಕರು ತಮ್ಮ ಜೈವಿಕ ಲಿಂಗಕ್ಕೆ ವಿರುದ್ಧವಾಗಿ ತಮ್ಮನ್ನು ತಾವು ಘೋಷಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದಕ್ಕೆ ಉತ್ತರಿಸಿ ನ್ಯಾಯಮೂರ್ತಿ ಥಾಮಸ್ ಅವರು, “ಪಾಶ್ಚಾತ್ಯ ದೇಶಗಳನ್ನು ಅಂಧವಾಗಿ ಅನುಕರಿಸುವುದನ್ನು ತಡೆಯುವುದು ಶಾಸಕಾಂಗದ ಉದ್ದೇಶವಿರಬಹುದು. ಅಲ್ಲಿ ಮಕ್ಕಳು ತಾವು ಬೆಕ್ಕು ಎಂದು ಹೇಳಿಕೊಳ್ಳಬಹುದು ಮತ್ತು ಅದನ್ನು ಯಾರೂ ಪ್ರಶ್ನಿಸುವಂತಿಲ್ಲ. ಇಂತಹ ಪರಿಸ್ಥಿತಿಯನ್ನು ತಡೆಯುವುದೇ ಶಾಸಕಾಂಗದ ಉದ್ದೇಶವಾಗಿರಬಹುದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಿಂದಿನ ವಿಚಾರಣೆಯಲ್ಲಿ, ಈ ಹೊಸ ಕಾಯ್ದೆಯ ಜಾರಿಯಿಂದಾಗಿ ಹಾರ್ಮೋನ್ ರಿಪ್ಲೇಸ್‌ಮೆಂಟ್ ಥೆರಪಿ ಮತ್ತು ಇತರ ಲಿಂಗ ದೃಢೀಕರಣ ವೈದ್ಯಕೀಯ ಸೇವೆಗಳು ಸ್ಥಗಿತಗೊಳ್ಳಲಿವೆಯೇ ಎಂಬ ಬಗ್ಗೆ ಮಾಹಿತಿ ಪಡೆದುಕೊಳ್ಳುವಂತೆ ನ್ಯಾಯಾಲಯವು ಸಾಲಿಸಿಟರ್ ಜನರಲ್ ಶ್ರೀಕುಮಾರ್ ಅವರಿಗೆ ಸೂಚಿಸಿತ್ತು.

ಶುಕ್ರವಾರದಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರು, ವೈದ್ಯಕೀಯ ತುರ್ತುಸ್ಥಿತಿಗಳಿಗೆ ಸಂಬಂಧಿಸಿದ ಇಂತಹ ಕುಂದುಕೊರತೆಗಳು ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.

ಅರ್ಜಿದಾರರ ಪರ ವಕೀಲರಾದ ಅರುಂಧತಿ ಕಾಟ್ಜು ಅವರು, ಎನ್‌ಎಎಲ್‌ಎಸ್‌ಎ ಪ್ರಕರಣ ಮತ್ತು ಹಿಂದಿನ ಶಾಸನವು ಒಬ್ಬರ ಗ್ರಹಿಸಿದ ಲಿಂಗ ಗುರುತಿನ ಸ್ವಯಂ-ಗುರುತಿಸುವಿಕೆಯ ಹಕ್ಕನ್ನು ಗುರುತಿಸಿದೆ ಎಂದು ಗಮನ ಸೆಳೆದಿದ್ದಾರೆ ಎಂದು ಬಾರ್ ಅಂಡ್ & ವರದಿ ಮಾಡಿದೆ.

ಅಲ್ಲದೆ, ಲಿಂಗ ಪರಿವರ್ತನೆಗೆ ಸಂಬಂಧಿಸಿದ ವೈದ್ಯಕೀಯ ಹಸ್ತಕ್ಷೇಪಗಳ ಬಗ್ಗೆ ವೈದ್ಯಕೀಯ ಸಂಸ್ಥೆಗಳು ವರದಿ ಸಲ್ಲಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ, “ಶಸ್ತ್ರಚಿಕಿತ್ಸೆಯಲ್ಲದ ಚಿಕಿತ್ಸೆಗಳನ್ನು ನೀಡುತ್ತಿದ್ದ ವೈದ್ಯರ ಮೇಲೆ ಇದು ಭಯದ ವಾತಾವರಣವನ್ನು ನಿರ್ಮಿಸಿದೆ” ಎಂದು ಕಾಟ್ಜು ಹೇಳಿರುವುದನ್ನು livelaw.in ವರದಿ ಮಾಡಿದೆ.

ಈ ತಿದ್ದುಪಡಿಯು ಕೇವಲ ಸ್ವಯಂ ಘೋಷಣೆಯನ್ನು ಮಾತ್ರ ಹೊರಗಿಡುತ್ತದೆ ಎಂದು ಶ್ರೀಕುಮಾರ್ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನ್ಯಾಯಾಲಯವು ಶಾಸನಕ್ಕೆ ತಡೆಯಾಜ್ಞೆ ನೀಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರೂ, ಅರ್ಜಿದಾರರಿಗೆ ಮಧ್ಯಂತರ ಪರಿಹಾರವನ್ನು ನೀಡಿರುವುದಾಗಿ ಎಂದು ಬಾರ್ & ಬೆಂಚ್ ವರದಿ ಹೇಳಿದೆ.






ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...