Homeಕರ್ನಾಟಕಟ್ರೌಸರ್‌ ತಲುಪಿಸಲು ವಿಫಲ | ಗ್ರಾಹಕನಿಗೆ 35,000 ರೂ. ಪಾವತಿಸಲು ಡೆಕಾಥ್ಲಾನ್‌ಗೆ ಆದೇಶ

ಟ್ರೌಸರ್‌ ತಲುಪಿಸಲು ವಿಫಲ | ಗ್ರಾಹಕನಿಗೆ 35,000 ರೂ. ಪಾವತಿಸಲು ಡೆಕಾಥ್ಲಾನ್‌ಗೆ ಆದೇಶ

- Advertisement -
- Advertisement -

1,399 ರೂಪಾಯಿ ಮೌಲ್ಯದ ಒಂದು ಜೊತೆ ಟ್ರಕ್ಕಿಂಗ್ ಟ್ರೌಸರ್‌ ಅನ್ನು ತಲುಪಿಸಲು ವಿಫಲವಾದ ಗ್ರಾಹಕನಿಗೆ 35,000 ರೂಪಾಯಿ ಪಾವತಿಸಲು ಕರ್ನಾಟಕದ ಗ್ರಾಹಕ ನ್ಯಾಯಾಲಯವು ಕ್ರೀಡಾ ಸಲಕರಣೆಗಳ ಮಾರಾಟ ಸಂಸ್ಥೆ ಡೆಕಾಥ್ಲಾನ್‌ಗೆ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಂಗಳೂರಿನ ನಿವಾಸಿ 23 ವರ್ಷದ ಮೋಹಿತ್ ಅವರು ಡೆಕಾಥ್ಲಾನ್ ಅವರು ಆರ್ಡರ್ ಮಾಡಿದ ಪ್ಯಾಂಟ್ ಅನ್ನು ತಲುಪಿಸಲು ವಿಫಲವಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವನ್ನು ಸಂಪರ್ಕಿಸಿದ್ದರು.

ಕಳೆದ ವರ್ಷ ಡಿಸೆಂಬರ್ 22 ರಂದು, ಅವರು ಫೋರ್ಕ್ಲಾಜ್ ಟ್ರೆಕ್ಕಿಂಗ್ ಟ್ರೌಸರ್ MT-500 ಅನ್ನು ಖರೀದಿಸುವ ಬಗ್ಗೆ ಡೆಕಾಥ್ಲಾನ್ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದರು. ಆದರೆ ಈ ಉತ್ಪನ್ನವು ಬೆಂಗಳೂರಿನ ETA ಮಾಲ್‌ನಲ್ಲಿರುವ ಚೈನ್ಸ್ ಸ್ಟೋರ್‌ನಲ್ಲಿ ಮಾತ್ರ ಲಭ್ಯವಿದೆ ಎಂದು ತಿಳಿಸಲಾಗಿತ್ತು. ಅದೇ ವೇಳೆ ಅಧಿಕಾರಿಗಳು ಹಣವನ್ನು ಆನ್‌ಲೈನ್‌ನಲ್ಲಿ ಪಾವತಿಸುವಂತೆ ಕೇಳಿದ್ದರು ಮತ್ತು ಪ್ಯಾಂಟ್ ಅನ್ನು ಅವರ ವಿಳಾಸಕ್ಕೆ ತಲುಪಿಸಲಾಗುವುದು ಎಂದು ಭರವಸೆ ನೀಡಿದ್ದರು.

ಅದರಂತೆ ಮೋಹಿತ್ ಆನ್‌ಲೈನ್‌ನಲ್ಲಿ 1,399 ರೂ. ಪಾವತಿಸಿದ್ದರು. ಆದರೆ ಅವರು ಆರ್ಡರ್ ಮಾಡಿದ್ದ ಟ್ರೌಸರ್‌ ಅವರಿಗೆ ತಲುಪಿರಲಿಲ್ಲ. ಈ ಬಗ್ಗೆ ಇಟಿಎ ಮಾಲ್‌ನಲ್ಲಿರುವ ಡೆಕಾಥ್ಲಾನ್ ಮಳಿಗೆಯ ಸಿಬ್ಬಂದಿಯನ್ನು ವಿಚಾರಿಸಿದಾಗ ಉತ್ಪನ್ನ ನಾಪತ್ತೆಯಾಗಿದೆ ಎಂದು ತಿಳಿಸಿದ್ದರು.

ಇದನ್ನೂಓದಿ: ಅರ್ಕಾವತಿ ಬಡಾವಣೆ | ಸಿದ್ದಾಮಯ್ಯ v/s ತಾವರ್‌ಚಂದ್‌ ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧ!

ಫೆಬ್ರವರಿ 6 ರಂದು, ಮೋಹಿತ್ ಇಟಿಎ ಮಾಲ್‌ನಲ್ಲಿರುವ ಅಂಗಡಿಗೆ ಭೇಟಿ ನೀಡಿದಾಗ, ಡೆಕಾಥ್ಲಾನ್‌ ಅವರ ಹಣವನ್ನು ಹಿಂತಿರುಗಿಸುವುದಾಗಿ ಭರವಸೆ ನೀಡಿತ್ತು. ಆದಾಗ್ಯೂ, ಫೆಬ್ರವರಿ 10 ಮತ್ತು 13 ರಂದು ಫೋನ್ ಕರೆ ಮಾಡಿ ಹಣ ವಾಪಾಸಾತಿಗೆ ವಿನಂತಿ ಮಾಡಿದ್ದರೂ, ಕಂಪೆನಿಯು ಅವರಿಗೆ ಹಣ ಮರುಪಾವತಿ ಮಾಡಿರಲಿಲ್ಲ.

ನಂತರ ಮೋಹಿತ್ ಅವರು ಏಪ್ರಿಲ್ 9 ರಂದು ಲೀಗಲ್ ನೋಟಿಸ್ ಕಳುಹಿಸಿದ್ದರು. ಈ ವೇಳೆ ಇಟಿಎ ಮಾಲ್‌ನಲ್ಲಿರುವ ಅಂಗಡಿಯನ್ನು ಮುಚ್ಚಲಾಗಿದೆ ಎಂಬ ಉತ್ತರವನ್ನು ನೀಡಲಾಗಿತ್ತು. ಅದರ ನಂತರ ಅವರು ಗ್ರಾಹಕ ನ್ಯಾಯಾಲಯಕ್ಕೆ ತೆರಳಿದ್ದರು. ಹಾಗಾಗಿ ನ್ಯಾಯಾಲಯವು ಡೆಕಾಥ್ಲಾನ್‌ಗೆ ನೋಟಿಸ್‌ಗಳನ್ನು ಕಳುಹಿಸಿತ್ತು. ಅದಾಗ್ಯೂ, ಡೆಕಾಥ್ಲಾನ್‌ ನ್ಯಾಯಾಲಯದ ಮುಂದೆ ಹಾಜರಾಗಲಿಲ್ಲ.

ಗ್ರಾಹಕರ ನ್ಯಾಯಾಲಯದ ಮುಖ್ಯಸ್ಥ ಸೋಮಶೇಖರಪ್ಪ ಹಂದಿಗೋಳ ಅವರು ಮಂಗಳವಾರ ತಮ್ಮ ಆದೇಶದಲ್ಲಿ ಮೋಹಿತ್ ಅವರ 1399 ರೂ. ಮತ್ತು ಸೇವಾ ನ್ಯೂನತೆಗೆ 25000 ರೂ. ಮತ್ತು ವ್ಯಾಜ್ಯ ವೆಚ್ಚಕ್ಕಾಗಿ 10000 ರೂ. ಪಾವತಿಸಲು ಕಂಪನಿಗೆ ಆದೇಶಿಸಿದ್ದಾರೆ.

ವಿಡಿಯೊ ನೋಡಿ: ರೈತರ ಕರೆ ಮೇರೆಗೆ ಜಿಯೋ ಇಂದ ಪೋರ್ಟ್‌ ಆದವರೊಂದಿಗೆ ಜಿಯೋ ಕಂಪೆನಿಯವರ ಸ್ವಾರಸ್ಯಕರ ಸಂಭಾಷಣೆ ಕೇಳಿ. JioCustomerCare

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...