Homeಮುಖಪುಟಟಿಆರ್‌ಪಿ ಹಗರಣ: ರಿಪಬ್ಲಿಕ್ ಟಿವಿ ಹೇಗೆ 1 ನೇ ಸ್ಥಾನಕ್ಕೆ ಬಂತು ಎಂದು ಸ್ಪೋಟಕ ಮಾಹಿತಿ...

ಟಿಆರ್‌ಪಿ ಹಗರಣ: ರಿಪಬ್ಲಿಕ್ ಟಿವಿ ಹೇಗೆ 1 ನೇ ಸ್ಥಾನಕ್ಕೆ ಬಂತು ಎಂದು ಸ್ಪೋಟಕ ಮಾಹಿತಿ ನೀಡಿದ ಪೊಲೀಸರು!

2016 ಮತ್ತು 2019 ರ ನಡುವೆ ಈ ತಿರುಚುವಿಕೆ ಹೆಚ್ಚಾಗಿ ನಡೆದಿದ್ದು, ವಿಧಿವಿಜ್ಞಾನ ಲೆಕ್ಕ ಪರಿಶೋಧಕರು ತಮ್ಮ ಲೆಕ್ಕಪರಿಶೋಧನೆಯಲ್ಲಿ 44 ವಾರಗಳ ಮಾಹಿತಿಯನ್ನು ವಿಶ್ಲೇಷಿಸಿದ್ದಾರೆ

- Advertisement -
- Advertisement -

ಟಿಆರ್‌ಪಿ ಹಗರಣ ಭಾಗಿಯಾಗಿದ್ದಾರೆಂದು ಮುಂಬೈ ಪೊಲೀಸರು ಬಾರ್ಕ್(ರೇಟಿಂಗ್ ಏಜೆನ್ಸಿ ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್)ನ ಮಾಜಿ ಸಿಇಒ ಪಾರ್ಥೋ ದಾಸ್‌ ಗುಪ್ತಾ ಅವರ ಬಂಧನದ ನಂತರ ಪ್ರಕರಣದಲ್ಲಿ ಹಲವು ಮಹತ್ವದ ಸುಳಿವುಗಳನ್ನು ಪಡೆದಿದ್ದಾರೆ. ಟಿಆರ್‌ಪಿ ತಿರುಚುವಿಕೆಯು 2016 ರಿಂದಲೇ ನಡೆಯುತ್ತಿದ್ದು, ಒಂದನೇ ಸ್ಥಾನದಲ್ಲಿದ್ದ ಟೈಮ್ಸ್ ನೌ ಚಾನೆಲ್ ಅನ್ನು ಎರಡನೇ ಸ್ಥಾನಕ್ಕೆ ತಳ್ಳಿ ಅರ್ನಾಬ್ ಗೋಸ್ವಾಮಿ ಅವರ ರಿಪಬ್ಲಿಕ್ ಟಿವಿಯನ್ನು ಒಂದನೇ ಸ್ಥಾನಕ್ಕೆ ತರಲಾಗಿದೆ ಎಂದು ಮುಂಬೈ ಜಂಟಿ ಪೊಲೀಸ್ ಆಯುಕ್ತ ಮಿಲಿಂದ್ ಭರಂಬೆ ತಿಳಿಸಿದ್ದಾರೆ.

ವಿಧಿವಿಜ್ಞಾನ ವದಿಯ ಪ್ರಕಾರ 2017 ರ ಮಧ್ಯಭಾಗದಿಂದ ಒಂದನೇ ಸ್ಥಾನದಲ್ಲಿರುವ ಟೈಮ್ಸ್ ನೌ ಚಾನೆಲ್‌ ಅನ್ನು 2 ನೇ ಸ್ಥಾನಕ್ಕೆ, ಹಾಗೂ 2 ನೇ ಸ್ಥಾನದಲ್ಲಿದ್ದ ಸಿಎನ್‌ಎನ್- ನ್ಯೂಸ್ 18 ಚಾನೆಲ್ ಅನ್ನು ಮೂರನೇ ಸ್ಥಾನಕ್ಕೆ ತಳ್ಳಿ ರಿಪಬ್ಲಿಕ್ ಚಾನೆಲನ್ನು ಒಂದನೇ ಸ್ಥಾನಕ್ಕೆ ತರಲಾಯಿತು. ಕೆಲವು ಸಂದರ್ಭಗಳಲ್ಲಿ ಬಾರ್ಕ್‌ನ ಕೆಲವು ಉನ್ನತ ಅಧಿಕಾರಿಗಳೇ ನೇರವಾಗಿ ಭಾಗಿಯಾಗಿ ಈ ರೇಟಿಂಗ್‌ಗಳನ್ನು ಮೊದಲೇ ನಿರ್ಧರಿಸಿದಂತೆ ಕಾಣುತ್ತದೆ ಎಂದು ಪೊಲೀಸ್ ಆಯುಕ್ತ ಮಿಲಿಂದ್ ಹೇಳಿದ್ದಾರೆ.

ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

2016 ಮತ್ತು 2019 ರ ನಡುವೆ ಈ ತಿರುಚುವಿಕೆ ಹೆಚ್ಚಾಗಿ ನಡೆದಿದೆ. ವಿಧಿವಿಜ್ಞಾನ ಲೆಕ್ಕ ಪರಿಶೋಧಕರು ತಮ್ಮ ಲೆಕ್ಕಪರಿಶೋಧನೆಯಲ್ಲಿ 44 ವಾರಗಳ ಮಾಹಿತಿಯನ್ನು ವಿಶ್ಲೇಷಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ’ಬಾರ್ಕ್’ ಭಾರತದ ಟಿವಿ ಚಾನಲ್‌ಗಳ ವೀಕ್ಷಕ ಸಂಖ್ಯೆಯನ್ನು ಅಳೆಯುತ್ತದೆ, ಈ ಅಳತೆಯ ಮೇಲೆ ಟಿವಿ ಚಾನೆಲ್‌ಗಳ ಜಾಹಿರಾತಿನ ದರ ನಿರ್ಧಾರವಾಗುತ್ತದೆ.

ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಗುರುವಾರ ಬಾರ್ಕ್‌ನ ಮಾಜಿ ಮುಖ್ಯ ನಿರ್ವಹಣಾಧಿಕಾರಿ ಪಾರ್ಥೋ ದಾಸ್‌ಗುಪ್ತಾ ಅವರನ್ನು ಬಂಧಿಸಿದ್ದರು. ಈ ಹಗರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 15 ಜನರನ್ನು ಬಂಧಿಸಲಾಗಿದೆ. ಈ ಹಿಂದೆ  ಬಾರ್ಕ್‌ನ ಮತ್ತೋರ್ವ ಮಾಜಿ ಮುಖ್ಯಸ್ಥ ರೊಮಿಲ್‌ ರಾಮ್‌ಗರ‍್ಹಿಯಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಟಿಆರ್‌ಪಿ ಹಗರಣ: BARC ನ ಮತ್ತೋರ್ವ‌ ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತಾ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...