HomeಮುಖಪುಟTRP ಹಗರಣ: ಅರ್ನಾಬ್ ಲಕ್ಷಗಟ್ಟಲೆ ಲಂಚ ನೀಡಿದ್ದರು ಎಂದು ಒಪ್ಪಿಕೊಂಡ ಬಾರ್ಕ್ ಮಾಜಿ ಮುಖ್ಯಸ್ಥ

TRP ಹಗರಣ: ಅರ್ನಾಬ್ ಲಕ್ಷಗಟ್ಟಲೆ ಲಂಚ ನೀಡಿದ್ದರು ಎಂದು ಒಪ್ಪಿಕೊಂಡ ಬಾರ್ಕ್ ಮಾಜಿ ಮುಖ್ಯಸ್ಥ

ತಮ್ಮ ಚಾನೆಲ್‌ಗಳನ್ನು ಉತ್ತೇಜಿಸಲು ಲಕ್ಷಾಂತರ ರೂಪಾಯಿ ಮತ್ತು ದುಬಾರಿ ಕೈಗಡಿಯಾರವನ್ನು ಲಂಚವಾಗಿ ನೀಡಿದ್ದಾರೆ- ಬಾರ್ಕ್ ಮಾಜಿ ಸಿಇಒ ಪಾರ್ಥೊ ದಾಸ್‌ಗುಪ್ತಾ

- Advertisement -
- Advertisement -

ರಿಪಬ್ಲಿಕ್ ಟಿವಿ ಮುಖ್ಯಸ್ಥ ಮತ್ತು ಸಂಪಾದಕ ಅರ್ನಾಬ್ ಗೋಸ್ವಾಮಿ ತಮ್ಮ ಚಾನೆಲ್‌ಗಳನ್ನು ಉತ್ತೇಜಿಸಲು ಲಕ್ಷಾಂತರ ರೂಪಾಯಿ ಮತ್ತು ದುಬಾರಿ ಕೈಗಡಿಯಾರವನ್ನು ಲಂಚವಾಗಿ ನೀಡಿದ್ದಾರೆ ಎಂದು ಬ್ರಾಡ್‌ಕಾಸ್ಟ್ ರಿಸರ್ಚ್ ಆಡಿಯನ್ಸ್ ಕೌನ್ಸಿಲ್ (ಬಾರ್ಕ್) ಮಾಜಿ ಸಿಇಒ ಪಾರ್ಥೊ ದಾಸ್‌ಗುಪ್ತಾ ಒಪ್ಪಿಕೊಂಡಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಪಾರ್ಥೊ ದಾಸ್‌ಗುಪ್ತಾ ಮನೆಯಿಂದ ಮುಂಬೈ ಪೊಲೀಸರು ಮೂರು ಕಿಲೋಗ್ರಾಂಗಳಷ್ಟು ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ. 2013 ರಿಂದ 2019 ರವರೆಗೆ ಬಾರ್ಕ್ ಸಿಇಒ ಆಗಿದ್ದ ದಾಸ್‌ಗುಪ್ತಾ, “ಈ ಮೂರು ಕೆಜಿ ಬೆಳ್ಳಿಯನ್ನು ಅರ್ನಾಬ್ ಗೋಸ್ವಾಮಿ ಅವರು ತಮ್ಮ ಇಂಗ್ಲಿಷ್ ಟಿವಿ ಚಾನೆಲ್ ರಿಪಬ್ಲಿಕ್ ಟಿವಿ ಮತ್ತು ಹಿಂದಿ ರಿಪಬ್ಲಿಕ್ ಭಾರತ್ ಪ್ರಚಾರಕ್ಕಾಗಿ ನೀಡಿದ ಹಣದಿಂದ ಖರೀದಿಸಲಾಗಿದೆ” ಎಂದು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಟಿಆರ್‌ಪಿ ಹಗರಣ: ರಿಪಬ್ಲಿಕ್ ಟಿವಿ ಹೇಗೆ 1 ನೇ ಸ್ಥಾನಕ್ಕೆ ಬಂತು ಎಂದು ಸ್ಪೋಟಕ ಮಾಹಿತಿ ನೀಡಿದ ಪೊಲೀಸರು!

ಮುಂಬೈ ಪೊಲೀಸರ ಅಪರಾಧ ವಿಭಾಗವು ಡಿಸೆಂಬರ್ 24 ರಂದು ಪುಣೆ ಜಿಲ್ಲೆಯಲ್ಲಿ ದಾಸ್‌ಗುಪ್ತಾ ಅವರನ್ನು ಬಂಧಿಸಿತ್ತು. ಟಿಆರ್‌ಪಿ ರೇಟಿಂಗ್ ಅನ್ನು ತಿರುಚಲು ದಾಸ್‌ಗುಪ್ತಾ ಮತ್ತು ಅರ್ನಾಬ್ ಗೋಸ್ವಾಮಿ ಶಾಮೀಲಾಗಿದ್ದಾರೆ ಎನ್ನುವುದು ಸಾಬೀತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಟಿಆರ್‌ಪಿಯನ್ನು ಅಳೆಯಲು ಬಾರೋಮೀಟರ್ ಅಳವಡಿಸಲಾಗಿರುವ ಮನೆಗಳ ಗೌಪ್ಯ ದತ್ತಾಂಶವನ್ನು ದಾಸ್‌ಗುಪ್ತಾ ಅರ್ನಾಬ್ ಗೋಸ್ವಾಮಿಯೊಂದಿಗೆ ಹಂಚಿಕೊಂಡಿದ್ದರು. ಈ ಡೇಟಾವನ್ನು ಬಳಸಿಕೊಂಡು, ಅರ್ನಾಬ್ ಗೋಸ್ವಾಮಿ ಅ ಮನೆಯವರಿಗೆ ಲಂಚ ನೀಡಿದರು. ಜೊತೆಗೆ ಮನೆಯವರಿಗೆ ಇಂಗ್ಲಿಷ್ ಭಾಷೆ ಅರ್ಥವಾಗದಿದ್ದರೂ ತಮ್ಮ ನಿರ್ದಿಷ್ಟ ಚಾನೆಲ್‌ಗಳನ್ನು ವೀಕ್ಷಿಸಲು ಒತ್ತಾಯಿಸಿದ್ದರು. ಕೆಲವು ಮನೆಗಳು ಮುಚ್ಚಿದ್ದರೂ ಸಹ ಇದೇ ಚಾನೆಲ್‌ಗಳು ಪ್ರಸಾರವಾಗುತ್ತಿದ್ದವು. ಟಿಆರ್‌ಪಿ ಹಗರಣದಲ್ಲಿ ಭಾಗಿಯಾಗಿರುವ ಜನರಿಗೆ ಸೂಚನೆ ನೀಡುವ ಮೂಲಕ ಈ ಕೆಲಸವನ್ನು ಮಾಡಲಾಗಿದೆ” ಎಂದು ಪೊಲೀಸರು ನ್ಯಾಯಾಲಯದಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಟಿಆರ್‌ಪಿ ಹಗರಣದಲ್ಲಿ ದಾಸ್‌ಗುಪ್ತಾ ಸೇರಿದಂತೆ ಇದುವರೆಗೆ 15 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.


ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...